Gauribidanur News: ಕುದುರೇ ಬ್ಯಾಲ್ಯ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸ ಲಾಯಿತು. ಮೆರವಣಿಗೆ ಯುದ್ದಕ್ಕೂ ನೀಲಿ ಬಾವುಟಗಳು ರಾರಾಜಿಸಿದವು. ಗ್ರಾಮದ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು, ತಲೆಯ ಮೇಲೆ ಕಳಶ ಹೊತ್ತು ಮೆರವಣಿಗೆ ಯಲ್ಲಿ ಸಾಗಿದ್ದು ವಿಶೇಷವಾಗಿತ್ತು.
ತಾಲ್ಲೂಕಿನ ಕುದುರೇ ಬ್ಯಾಲ್ಯ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. -
ಗೌರಿಬಿದನೂರು: ತಾಲ್ಲೂಕಿನ ಕುದುರೇಬ್ಯಾಲ್ಯ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮದ ಅಂಬೇಡ್ಕರ್ ಯುವಕರ ಸಂಘ ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ, ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಯುದ್ದಕ್ಕೂ ನೀಲಿ ಬಾವುಟಗಳು ರಾರಾಜಿಸಿದವು. ಗ್ರಾಮದ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು, ತಲೆಯ ಮೇಲೆ ಕಳಶ ಹೊತ್ತು ಮೆರವಣಿಗೆ ಯಲ್ಲಿ ಸಾಗಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ: Gauribidabur News: ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆಯ ಗುರು ಶಿಷ್ಯರ ಸಮಾಗಮ
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಗ್ರಾಮದ ರಸ್ತೆಗಳಲ್ಲಿ ಆಕರ್ಷಕ ಬೆಳಕಿನ ದೀಪಗಳೊಂದಿಗೆ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಲಿತ ಮುಖಂಡ ಹುದುಗೂರು ನಂಜುಂಡಪ್ಪ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಅವರು ನೀಡಿದ ಸಂವಿಧಾನದಿಂದಾಗಿ ಇಂದು ನಾವೆಲ್ಲರೂ ಸಮಾನತೆಯ ಹಕ್ಕನ್ನು ಪಡೆದಿದ್ದೇವೆ. ಅವರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಯುವ ಪೀಳಿಗೆಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಕದಿರಪ್ಪ, ನಾಗರಾಜು, ನಾಗೇಶ್, ತಿಮ್ಮರಾಜು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸೇರಿದಂತೆ ಮತ್ತಿತರರಿದ್ದರು.