ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shidlaghatta News: ಅಮೃತ ಸರೋವರ ದಂಡೆಯ ಮೇಲೆ ಸಂವಿಧಾನ ದಿನಾಚರಣೆ

ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಅವರು ಸಂವಿಧಾನದ ಕರಡು ರಚನಾ ಸಮಿತಿಯ ಪ್ರಮುಖ ಸದಸ್ಯರಾಗಿದ್ದರು, ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪಾತ್ರ ಮಹತ್ವ ದ್ದಾಗಿದೆ. ಭಾರತ ಸಂವಿಧಾನದ ಆಚಾರ ವಿಚಾರಗಳು ಮತ್ತು ರಾಜ ತತ್ವಗಳನ್ನು ಅನುಸರಿಸುವ ಜೊತೆಗೆ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ, ಹಕ್ಕುಗಳ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು

ಅಮೃತ ಸರೋವರ ದಂಡೆಯ ಮೇಲೆ ಸಂವಿಧಾನ ದಿನಾಚರಣೆ

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿತ್ಯ ದಾಳಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರತಿಸ್ಪಂದಿಸಬೇಕು. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ,"ಎಂದು ತಾಲ್ಲೂಕಿನ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಹೇಳಿದರು. -

Ashok Nayak
Ashok Nayak Nov 28, 2025 12:01 PM

ಶಿಡ್ಲಘಟ್ಟ : ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿತ್ಯ ದಾಳಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರತಿಸ್ಪಂದಿಸಬೇಕು. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ,”ಎಂದು ತಾಲ್ಲೂಕಿನ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಹೇಳಿದರು.

ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾಸರಹಳ್ಳಿ ಗ್ರಾಮದ ಸ್ವಾತಂತ್ರ‍್ಯ ಅಮೃತ ಸರೋವರ ದಂಡದ ಮೇಲೆ ಬುಧವಾರ ನಡೆದ ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ರ್ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆಗಳಷ್ಟೆ ಅಲ್ಲ, ಬದಲಿಗೆ ಸಮಾನತೆ, ಸ್ವಾತಂತ್ರ‍್ಯ ಮತ್ತು ಬಾಂಧವ್ಯ ಎಂಬ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ವಿಷಯ ಎಂದು ವಿವರಿಸಿದರು.

ಇದನ್ನೂ ಓದಿ: Shidlaghatta News: ನ.29ರಂದು ಪ್ರಗತಿಪರ ಹೋರಾಟಗಾರರ ಸಂಘದಿಂದ ಕನ್ನಡ ರಾಜ್ಯೋತ್ಸವ...

ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಅವರು ಸಂವಿಧಾನದ ಕರಡು ರಚನಾ ಸಮಿತಿಯ ಪ್ರಮುಖ ಸದಸ್ಯರಾಗಿದ್ದರು, ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ. ಭಾರತ ಸಂವಿಧಾನದ ಆಚಾರ ವಿಚಾರಗಳು ಮತ್ತು ರಾಜ ತತ್ವ ಗಳನ್ನು ಅನುಸರಿಸುವ ಜೊತೆಗೆ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ, ಹಕ್ಕುಗಳ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು ಎಂದರು.

ಸಂವಿಧಾನ ದಿನಾಚರಣೆ ಅಂಗವಾಗಿ ಅಮೃತ ಸರೋವರ  ದಂಡೆಯ ಮೇಲೆ ಗ್ರಾಮಸ್ಥರು ಭಾರತ ಸಂವಿಧಾನ ಪ್ರಸ್ತಾವನೆಯನ್ನು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಳಮಾಚನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲ, ಗ್ರಾಮ ಪಂಚಾ ಯಿತಿ ಅಧ್ಯಕ್ಷರು, ಸದಸ್ಯರು, ನರೇಗಾ ತಾಂತ್ರಿಕ ಸಿಬ್ಬಂದಿ, ಸ್ವ-ಸಹಾಯ ಸಂಘದವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.