ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kannada Sahithya Sammelana: 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಮಾಲೋಚನೆ

ಸಮ್ಮೇಳನದ ಅಧ್ಯಕ್ಷರಾಗಲು ಆಸಕ್ತಿ ಹೊಂದಿರುವವರು ತಮ್ಮ ಹೆಸರುಗಳನ್ನು ನೋಂದಾಯಿಸಿ ಕೊಳ್ಳಲು ಅವಕಾಶ ಕಲ್ಪಿಸುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ನೋಂದಣಿಯಾದ ಹೆಸರು ಗಳನ್ನು ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರ ಸಮಿತಿಯಲ್ಲಿ ಚರ್ಚಿಸಿ, ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.

ಶಿಡ್ಲಘಟ್ಟ: ತಾಲೂಕಿನಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahithya Sammelana)ದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿಧಾನ, ಆಸಕ್ತರಿಂದ ಹೆಸರು ನೋಂದಣಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು.

ಇದನ್ನೂ ಓದಿ: Shidlaghatta News: ಜೆ.ವೆಂಕಟಾಪುರ ಗ್ರಾ.ಪಂ. ಹಣಕಾಸು ಅವ್ಯವಹಾರ ಆರೋಪ: ಪಿಡಿಒ ಅಮಾನತಿಗೆ ಆಗ್ರಹ

ಸಮ್ಮೇಳನದ ಅಧ್ಯಕ್ಷರಾಗಲು ಆಸಕ್ತಿ ಹೊಂದಿರುವವರು ತಮ್ಮ ಹೆಸರುಗಳನ್ನು ನೋಂದಾಯಿಸಿ ಕೊಳ್ಳಲು ಅವಕಾಶ ಕಲ್ಪಿಸುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ನೋಂದಣಿಯಾದ ಹೆಸರುಗಳನ್ನು ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರ ಸಮಿತಿಯಲ್ಲಿ ಚರ್ಚಿಸಿ, ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ರೂಪಿಸಲು ತೀರ್ಮಾನಿಸ ಲಾಯಿತು.

ತಾಲೂಕಿನ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರ ಜತೆಗೆ ಕನ್ನಡ ಭಾಷೆ, ಸಾಹಿತ್ಯದ ಮಹತ್ವ ಸಾರುವಂತೆ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸ ಬೇಕು. ಸ್ಥಳೀಯ ಸಾಹಿತಿಗಳು ಹಾಗೂ ಕನ್ನಡಾಭಿಮಾನಿಗಳಿಗೆ ಸಮ್ಮೇಳನ ವೇದಿಕೆಯಾಗಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ವಿ. ನಾಗರಾಜ್, ರೂಪಸಿ ರಮೇಶ್, ವಿ. ಕೃಷ್ಣ, ಟಿ.ಟಿ. ನರಸಿಂಹಪ್ಪ, ಮುನಿ ನಾರಾಯಣಪ್ಪ, ರಾಮಾಂಜನೇಯ, ಸುಂದರಾಚಾರಿ, ಜಯಂತಿ ಗ್ರಾಮ ನಾರಾಯಣಸ್ವಾಮಿ, ದೇವರಾಜ್, ಈ ಧರೆ ಪ್ರಕಾಶ್, ಸುರೇಶ್ ಭಗತ್, ವರದರಾಜು, ಮುನಿ ವೆಂಕಟಪ್ಪ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.