ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ಗುರಿ ಸಾಧಿಸಲು ನಿರಂತರ ಪ್ರಯತ್ನ ಅಗತ್ಯ : ವಿಜ್ಞಾನಿ ಕೆಪಿಜೆ ರೆಡ್ಡಿ

ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಭವಿಷ್ಯವಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರ ಗಳಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಶಿಕ್ಷಣದ ಜೊತೆಗೆ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು.

ಗೌರಿಬಿದನೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದೊಡ್ಡ ಗುರಿಗಳನ್ನು ಹೊಂದಿ ಅವು ಗಳನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರ ಪರಿಶ್ರಮ ಪಡಬೇಕು. ಕನಸು ಕಾಣುವುದು ಮಾತ್ರವಲ್ಲ, ಅದನ್ನು ನನಸಾಗಿಸಲು ಶಿಸ್ತು, ಸಮಯಪಾಲನೆ ಮತ್ತು ಕಠಿಣ ಪರಿಶ್ರಮವನ್ನು ಮೈಗೂಡಿಸಿಕೊಳ್ಳ ಬೇಕು ಎಂದು ವಿಜ್ಞಾನಿ ಕೆಪಿಜೆ ರೆಡ್ಡಿ(Scientist KPJ Reddy) ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ನಗರದ ಪಿಎಲ್‌ಡಿ ಬ್ಯಾಂಕ್ ಕಚೇರಿ ಆವರಣದಲ್ಲಿ ನಿರ್ದೆಶಕಿ ಜ್ಞಾನೇಶ್ವರಿ ಅರುಣ್‌ಕುಮಾರ್ ತಮ್ಮ ಹೊಸೂರು ಕ್ಷೇತ್ರದ ರೈತರ ಮಕ್ಕಳಿಗೆ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಸಹಾಯ ಧನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳನ್ನು ಪುರಸ್ಕರಿಸಿ ಮಾತನಾಡಿದರು. 

ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಭವಿಷ್ಯವಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಶಿಕ್ಷಣದ ಜೊತೆಗೆ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜ ಮುಖಿ ಚಿಂತನೆ ಬೆಳೆಸಿಕೊಳ್ಳಬೇಕು. ವೈಫಲ್ಯಗಳಿಗೆ ಹೆದರದೆ ಆತ್ಮವಿಶ್ವಾಸದಿಂದ ಮುಂದೆ ಸಾಗಿದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Gauribidanur News: ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಪಿಎಲ್‌ಡಿ ಬ್ಯಾಂಕ್ ನಿರ್ದೆಶಕಿ ಜ್ಞಾನೇಶ್ವರಿ ಅರುಣ್‌ ಕುಮಾರ್ ಮಾತನಾಡಿ, ಪ್ರತಿಭೆ ಎಂಬುದು ವಿದ್ಯಾರ್ಥಿಗಳ ಯಶಸ್ಸಿನ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ತಮ್ಮ ಶ್ರಮ, ಪರಿಶ್ರಮ ಮತ್ತು ಸಾಧನೆಯ ಮೂಲಕ ಇತರರಿಗೆ ಮಾದರಿಯಾಗಬೇಕು, ಪ್ರಶಸ್ತಿ ಎನ್ನುವುದು ಅಂತಿಮ ಗುರಿಯಲ್ಲ, ಅದು ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ನೀಡುವ ಮೆಟ್ಟಿಲಾಗಿದೆ. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು ಹಾಗೂ ಕನಸುಗಳನ್ನು ನನಸಾಗಿಸಲು ದೃಢ ಮುಂದುವರಿಯಬೇಕು ಸಂಕಲ್ಪದೊಂದಿಗೆ ಎಂದ ಅವರು, ನನ್ನ ಕ್ಷೇತ್ರದ ರೈತರ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಸಲುವಾಗಿ ಈ ಪುರಸ್ಕಾರ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಖ್ಯಾತ ವಕೀಲ ಅರುಣ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕ ಮನೋಭಾವ, ಸಂಶೋಧನಾ ಚಿಂತನೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ವಾಗಿದೆ. ಇಂದಿನ ಯುವ ಪ್ರತಿಭೆಗಳೇ ನಾಳಿನ ದೇಶದ ಶಕ್ತಿ. ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಜ್ಞಾನ ಹಾಗೂ ಕೌಶಲ್ಯವನ್ನು ಬಳಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕು. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನವನ್ನು ಗೌರವಿಸಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪಿಎಲ್‌ಡಿ ಬ್ಯಾಂಕ್ ಶಾಖಾ ಕಚೇರಿ ಜಿಲ್ಲಾ ವ್ಯವಸ್ಥಾಪಕ ಬೈರೇಗೌಡ, ಬ್ಯಾಂಕ್ ವ್ಯವಸ್ಥಾಪಕಿ ಮೀನಾಕ್ಷಿ, ಸಹಾಯಕಿ ಶ್ವೇತಾ, ಮುಖಂಡ ವೆಂಕಟರಾಮರೆಡ್ಡಿ ಮುಂತಾದವರು ಭಾಗವಹಿಸಿದ್ದರು.