ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಕೃಷಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಗಳ ಸಮನ್ವಯ ಅಗತ್ಯ

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದ ಡಾ. ಹೆಚ್. ನರಸಿಂಹಯ್ಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಆತ್ಮ (ATMA) ಯೋಜನೆಯ ಜಿಲ್ಲಾ ಆಡಳಿತ ಮಂಡಳಿ ಸಮಿತಿ ಸಭೆ ನಡೆಯಿತು.

ಚಿಕ್ಕಬಳ್ಳಾಪುರ: ರೈತರ ಆರ್ಥಿಕ ಅಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಪ್ರಗತಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೃಷಿ ಸೇರಿದಂತೆ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದ ಡಾ. ಹೆಚ್. ನರಸಿಂಹಯ್ಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಆತ್ಮ (ATMA) ಯೋಜನೆಯ ಜಿಲ್ಲಾ ಆಡಳಿತ ಮಂಡಳಿ ಸಮಿತಿ ಸಭೆ ನಡೆಯಿತು.

ಇದನ್ನೂ ಓದಿ: Chikkaballapur News: ಜಿಲ್ಲೆಯಲ್ಲಿ ಶೇ.51ರಷ್ಟು ಮಳೆ ಕೊರತೆ; ಮುನ್ನೆಚ್ಚರಿಕೆ ಕ್ರಮಕ್ಕೆ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ಮಂಜುಳ ಸೂಚನೆ

ಸಭೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ, ರೈತರಿಗೆ ಯೋಜನೆಗಳ ಪ್ರಯೋಜನ ತಲುಪಿಸುವುದು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕೃಷಿ ಉಪಕ್ರಮಗಳನ್ನು ಪರಿಣಾಮಕಾರಿ ಯಾಗಿ ಜಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ರೈತರ ಅಗತ್ಯಗಳಿಗೆ ಸ್ಪಂದಿಸುವು ದರೊಂದಿಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಯೋಜನೆಗಳ ಅನುಷ್ಠಾನ ದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಪ್ರತಿಪಾದಿಸಲಾಯಿತು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಸೇರಿದಂತೆ ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ಅರಣ್ಯ ಹಾಗೂ ಮೀನುಗಾರಿಕೆ ಇಲಾಖೆಗಳ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರದ ಪ್ರತಿನಿಧಿಗಳು, ಪ್ರಗತಿಪರ ರೈತರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ರೈತರ ಆದಾಯ ವೃದ್ಧಿ, ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಸರ್ಕಾರದ ಯೋಜನೆ ಗಳ ಸದುಪಯೋಗಕ್ಕೆ ಸಂಬಂಧಿಸಿದ ಇಲಾಖೆಗಳ ಸಹಕಾರ ಮಹತ್ವದ್ದಾಗಿದ್ದು, ರೈತ ಕೇಂದ್ರಿತ ಉಪಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಒಗ್ಗಟ್ಟಿನಿಂದ ಶ್ರಮಿಸುವ ಅಗತ್ಯವನ್ನು ಸಭೆ ಒತ್ತಿ ಹೇಳಿತು.