ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಘೋಷಣೆ: ಆ.10ರಂದು ಚಿಕ್ಕಬಳ್ಳಾಪುರದಲ್ಲಿ ಜೈಲ್‌ ಭರೋ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಗೆ ವಿರುದ್ಧವಾದ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಆರೋಪಿಸಿದರು. ರೈತರ ಭೂಮಿಯನ್ನು ದೇಶೀಯ ಹಾಗೂ ವಿದೇಶಿ ಕಾರ್ಪೊರೇಟ್‌ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಸಾಲ ಹಾಗೂ ಬಡತನದಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ

ಆ.10ರಂದು ಚಿಕ್ಕಬಳ್ಳಾಪುರದಲ್ಲಿ ಜೈಲ್‌ ಭರೋ

-

Profile
Ashok Nayak Aug 9, 2026 5:55 AM

ಚಿಕ್ಕಬಳ್ಳಾಪುರ : ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು, ದಲಿತರು, ಮಹಿಳೆಯರು ಹಾಗೂ ವಿದ್ಯಾರ್ಥಿ-ಯುವಜನರ ಬದುಕಿಗೆ ಧಕ್ಕೆ ತರುವ ಸರ್ಕಾರಗಳ ನೀತಿಗಳನ್ನು ವಿರೋಧಿಸಿ, ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ಆ.10ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಎದುರು ಬೃಹತ್‌ ಪ್ರತಿಭಟನೆ ಹಾಗೂ ಜೈಲ್‌ ಭರೋ(Jail Bharo)ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಕೃಷಿ ಕೂಲಿಕಾರರು ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಗೆ ವಿರುದ್ಧವಾದ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಆರೋಪಿಸಿದರು. ರೈತರ ಭೂಮಿಯನ್ನು ದೇಶೀಯ ಹಾಗೂ ವಿದೇಶಿ ಕಾರ್ಪೊರೇಟ್‌ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಸಾಲ ಹಾಗೂ ಬಡತನದಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಇದನ್ನೂ ಓದಿ: Chikkaballapur News: ಎಲ್ಲರನ್ನೂ ಒಳಗೊಂಡ ಸಂಘಟನೆ ಕಟ್ಟಿದಾಗಲೇ ಸಾಮಾಜಿಕ ಬದಲಾವಣೆ ಸಾಧ್ಯ: ಕೋಟಿಗಾನಹಳ್ಳಿ ರಾಮಯ್ಯ

ಕ್ವಿಟ್‌ ಇಂಡಿಯಾ ಚಳವಳಿಯ ಸ್ಫೂರ್ತಿಯಿಂದ ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯಡಿ ದೇಶದಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದೆ. ಅದರ ಭಾಗವಾಗಿ ಚಿಕ್ಕಬಳ್ಳಾ ಪುರದಲ್ಲಿ ನಡೆಯುವ ಜೈಲ್‌ ಭರೋ ಹೋರಾಟಕ್ಕೆ ಸಾವಿರಾರು ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು, ದಲಿತರು, ಮಹಿಳೆಯರು ಹಾಗೂ ಯುವಜನರು ಭಾಗವಹಿಸಿ ಯಶಸ್ವಿಗೊಳಿಸ ಬೇಕು ಎಂದು ಮನವಿ ಮಾಡಿದರು.

ಕನಿಷ್ಠ ಕೂಲಿ ಕಡಿತದ ಪ್ರಸ್ತಾವನೆ, ವಿಬಿ ಗ್ರಾಮ್‌ ಜಿ ಕಾಯ್ದೆ, ವಿದ್ಯುತ್‌ ತಿದ್ದುಪಡಿ ಕಾಯ್ದೆ, ಬೀಜ ಕಾಯ್ದೆ, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಸ್ವಾಮಿನಾಥನ್‌ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಶಾಸನ ಬದ್ಧ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ರೈತರು, ಕೃಷಿ ಕೂಲಿಕಾರರು ಹಾಗೂ ಮಹಿಳೆಯರ ಸಾಲ ಮನ್ನಾ ಮಾಡಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಬರಪರಿಹಾರ ನೀಡಬೇಕು. ರೈತರ ಹಾಗೂ ಮೈಕ್ರೋ ಫೈನಾನ್ಸ್‌ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಿ ಕನಿಷ್ಠ 700 ಕೂಲಿ ನೀಡಬೇಕು. ಬಡವರಿಗೆ ನಿವೇಶನ ಹಾಗೂ ಮನೆ ನಿರ್ಮಾಣಕ್ಕೆ n10 ಲಕ್ಷ ನೆರವು, ಅಂಗನವಾಡಿ ಮತ್ತು ಪಂಚಾಯಿತಿ ನೌಕರರು ಸೇರಿದಂತೆ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್‌ ಪಡಿತರ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀದೇವಮ್ಮ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ, ಕೆ.ಮುನಿಯಪ್ಪ, ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ರವಿಪ್ರಕಾಶ್‌, ಅರುಣ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.