ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CPM: ನ.೧ರಿಂದ ಡಿ.೧೫ ರವರೆಗೆ ರಾಜ್ಯಾದ್ಯಂತ ಸಿಪಿಎಂ ರಾಜಕೀಯ ಪ್ರಚಾರಾಂದೋಲನ : ಎಂ.ಪಿ.ಮುನಿವೆಂಕಟಪ್ಪ

ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ?೩೬ ಸಾವಿರ ಪಿಂಚಣಿ ಜಾರಿಗೊಳಿಸಬೇಕು. ಕಟ್ಟಡ, ಸಾರಿಗೆ ನೌಕರರಿಗೆ ಸೌಲಭ್ಯ ಕಲ್ಪಿಸಬೇಕು. ಶಿಕ್ಷಣದ ಖಾಸಗಿಕರಣ, ವ್ಯಾಪಾರಿಕರಣ ತಡೆಗಟ್ಟಬೇಕು. ಪ್ರತಿ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಬಡವರಿಗೆ ಉಚಿತ ಚಿಕಿತ್ಸೆ ಕಲ್ಪಿಸ ಬೇಕು

ಬಾಗೇಪಲ್ಲಿ: ನಿವೇಶನ, ವಸತಿ, ಉದ್ಯೋಗ ಕಡಿತ, ಬಲವಂತದ ಭೂಸ್ವಾಧೀನ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿಕೂಲಿ ಕಾರ್ಮಿಕರ ಸಮಸ್ಯೆ ನಿವಾರಣೆ ಮಾಡುವಂತೆ ಆಗ್ರಹಿಸಿ ನ. ೧ರಿಂದ ಡಿ.೧೫ ರವರೆಗೆ ರಾಜ್ಯದಾದ್ಯಂತ ಸಿಪಿಎಂ ರಾಜಕೀಯ ಸಹಿ ಪ್ರಚಾರಾಂದೋ ಲನ ಹಮ್ಮಿಕೊಂಡಿದೆ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ಬೆಳದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಮಾಡಬೇಕು. ಬಲವಂತ ಭೂಸ್ವಾಧೀನ ವಾಪಸ್ ಪಡೆಯಬೇಕು. ಭೂಸುಧಾರಣಾ ತಿದ್ದುಪಡಿ, ಎಪಿಎಂಸಿ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Bagepally News: ವಯೋ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಪುಸ್ತಕ ಬಿಡುಗಡೆ

ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ?೩೬ ಸಾವಿರ ಪಿಂಚಣಿ ಜಾರಿಗೊಳಿಸಬೇಕು. ಕಟ್ಟಡ, ಸಾರಿಗೆ ನೌಕರರಿಗೆ ಸೌಲಭ್ಯ ಕಲ್ಪಿಸಬೇಕು. ಶಿಕ್ಷಣದ ಖಾಸಗಿಕರಣ, ವ್ಯಾಪಾರಿಕರಣ ತಡೆಗಟ್ಟಬೇಕು. ಪ್ರತಿ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಬಡವರಿಗೆ ಉಚಿತ ಚಿಕಿತ್ಸೆ ಕಲ್ಪಿಸ ಬೇಕು ಎಂದು ಒತ್ತಾಯಿಸಿದರು.

ಬಿಪಿಎಲ್ ಪಡಿತರ ಚೀಟಿ ಕಡಿತಗೊಳಿಸದೇ ಅರ್ಹರಿಗೆ ಬಿಪಿಎಲ್ ಪಡಿತರ ವಿತರಿಸಬೇಕು. ನಿವೇಶನ ರಹಿತರಿಗೆ ನಿವೇಶನ, ಮನೆ ವಿತರಿಸಬೇಕು. ಮಹಿಳೆಯರ, ಹೆಣ್ಣುಮಕ್ಕಳ ಮೇಲಿನ ಹಲ್ಲೆ, ದೌರ್ಜನ್ಯ, ಆತ್ಯಾಚಾರ ತಡೆಯಬೇಕು ಎಂದರು.

ಬಯಲುಸೀಮೆ ಜಿಲ್ಲೆಗೆ ಕೃಷ್ಣಾ ನದಿ,ಎತ್ತಿನೊಳೆ ನೀರನ್ನು ಹರಿಸಬೇಕು. ಧರ್ಮಸ್ಥಳದಲ್ಲಿನ ಅಸಹಜ ಸಾವು, ಭೂ ಕಬಳಿಕೆ, ಮೈಕ್ರೋಫೈನಾನ್ಸ್ ಸಮಗ್ರ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ನ.೧ ರಿಂದ ಡಿ. ೧೫ರವರೆಗೂ ಮನೆ ಮನೆಗೆ ಭೇಟಿ ಮಾಡಿ, ಜನರ ಸಮಸ್ಯೆಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಡಿಸೆಂಬರ್ ೫ ರಿಂದ ೧೫ ರವರೆಗೆ ಪ್ರಜಾನಾಟ್ಯ ಕಲಾ ಮಂಡಳಿಯಿAದ ಕ್ರಾಂತಿಗೀತೆಗಳ ಮೂಲಕ ಜಾಗೃತಿ ಮೂಡಿಸ ಲಾಗುವುದು. ಡಿ. ೨೧ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ೧೫ ಸಾವಿರ ಹಾಗೂ ಕ್ಷೇತ್ರದಿಂದ ೬ ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರುನಾಗರಾಜ್, ಅಶ್ವತ್ಥಪ್ಪ, ಡಿ.ಟಿ.ಮುನಿಸ್ವಾಮಿ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಜಿ.ಮುಸ್ತಾಫ, ಕೆ.ಮುನಿಯಪ್ಪ, ಎಚ್.ಎ.ರಾಮಲಿಂಗಪ್ಪ, ಬಿ.ಎಚ್.ರಫೀಕ್, ಇಮ್ರಾನ್, ನರಸಿಂಹರೆಡ್ಡಿ, ಚಂಚುರಾಯನ ಪಲ್ಲಿ ಕೃಷ್ಣಪ್ಪ, ಎ.ಸೋಮಶೇಖರ ಇದ್ದರು.