ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

PDO suspend: ನಿರ್ಲಕ್ಷ್ಯಕ್ಕೆ ಕಡಿವಾಣ: ಹೊಸಪೇಟೆ ಪಿಡಿಓ ಅಮಾನತು

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಹೊರಡಿಸಿದ ಆದೇಶದಲ್ಲಿ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪಗಳು ಯಮುನಾರಾಣಿ ವಿರುದ್ಧ ಕೇಳಿ ಬಂದಿರುವುದಾಗಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಸರ್ಕಾರಿ ನೌಕರರೊಂದಿಗೆ ಅಸಮರ್ಪಕವಾಗಿ ವರ್ತಿಸಿರುವುದಾಗಿ ಕೂಡ ದೂರಿನಲ್ಲಿ ತಿಳಿಸಲಾಗಿದೆ.

ನಿರ್ಲಕ್ಷ್ಯಕ್ಕೆ ಕಡಿವಾಣ: ಹೊಸಪೇಟೆ ಪಿಡಿಓ ಅಮಾನತು

-

Profile
Ashok Nayak Apr 17, 2026 11:28 PM

ಶಿಡ್ಲಘಟ್ಟ: ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭಾಗವಾಗಿ, ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಯಮುನಾರಾಣಿ ಜಿ ಅವರನ್ನು ಅಮಾನತ್ತುಗೊಳಿಸಲಾಗಿದೆ.

PDO

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಹೊರಡಿಸಿದ ಆದೇಶದಲ್ಲಿ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪಗಳು ಯಮುನಾರಾಣಿ ವಿರುದ್ಧ ಕೇಳಿ ಬಂದಿರುವುದಾಗಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಸರ್ಕಾರಿ ನೌಕರರೊಂದಿಗೆ ಅಸಮರ್ಪಕವಾಗಿ ವರ್ತಿಸಿರುವುದಾಗಿ ಕೂಡ ದೂರಿನಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ: Shidlaghatta News: ಜನಪದ ಪರಂಪರೆಗೆ ಜೀವ ತುಂಬಿದ ಕೋಲಾಟ ಪ್ರದರ್ಶನ

ಈ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಪ್ರಾಥಮಿಕ ಪರಿಶೀಲನೆ ನಡೆಸಿ ಆರೋಪಗಳ ಗಂಭೀರತೆ ಮನಗಂಡು ತಕ್ಷಣವೇ ಅಮಾನತು ಕ್ರಮ ಕೈಗೊಂಡಿದ್ದಾರೆ. ಅದೇ ಸಂದರ್ಭದಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ವಿಚಾರಣೆ ನಡೆಸಲು ಆದೇಶ ನೀಡಲಾಗಿದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೆ ಸೇವೆಯಿಂದ ದೂರವಿರಲು ಸೂಚಿಸಲಾಗಿದೆ.

ಸಾರ್ವಜನಿಕ ಸೇವೆಯಲ್ಲಿ ಶಿಸ್ತು, ಜವಾಬ್ದಾರಿತನ ಮತ್ತು ನೈತಿಕತೆ ಅತ್ಯಂತ ಮುಖ್ಯವಾಗಿದ್ದು, ಅವುಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸುತ್ತಾರೆ ತಿಳಿಸಲಾಗಿದೆ.