Chikkaballapur News: ಪೋಕ್ಸೋ ಕಾಯ್ದೆಯ ಜಾಗೃತಿ ಮೂಡಿಸಿ : ನ್ಯಾ.ಮಂಜುನಾಥಾಚಾರಿ
ವಕೀಲರ ಸಂಘದ ಅದ್ಯಕ್ಷ ಎ.ನಂಜುಂಡಪ್ಪ ಮಾತನಾಡಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುವು ದನ್ನು ತಪ್ಪಿಸಲು ಕಠಿಣ ಶಿಕ್ಷೆ ಒಳಗೊಂಡ ಪೊಕ್ಸೊ ಕಾಯ್ದೆ ಬಗ್ಗೆ ತಾವೆಲ್ಲರೂ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು. ಪೊಲೀಸ್ ಇಲಾಖೆ ಹೆಣ್ಣು ಮಕ್ಕಳ ರಕ್ಷಣೆ ಗಾಗಿ ವಿಶೇಷ ಆಪ್ ತಯಾರಿಸಿದ್ದು ಸ್ಮಾರ್ಟ್ ಫೋನಿನಲ್ಲಿ ಅದನ್ನು ಅಳವಡಿಸಿಕೊಂಡು ಇತರರಿಗೆ ಜಾಗೃತಿ ಮೂಡಿಸಿ ಎಂದರು


ಬಾಗೇಪಲ್ಲಿ: ಹೆಣ್ಣು ಮಕ್ಕಳು ಮತ್ತು ಮಕ್ಕಳು ರಕ್ಷಣೆ ಹಾಗೂ ಪೋಷಣೆಗಾಗಿ ಪೋಕ್ಸೋ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಜಾರಿಗೆ ಬಂದಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಪ್ರಧಾನ ತಾಲ್ಲೂ ಕು ಮತ್ತು ಸತ್ರ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಂಜು ನಾಥಾಚಾರಿ ಹೇಳಿದರು. ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖಾ, ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನ್ಯೂ ಹೊರೈಜಾನ್ ಶಾಲೆಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪೋಕ್ಸೋ ಮತ್ತು ಬಾಲ ನ್ಯಾಯ ಕಾಯ್ದೆಯ ಕಾನೂನು ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Chikkaballapur News: ಅಪರಾಧ ಪ್ರಕರಣಗಳ ಪತ್ತೆಗೆ ಸಾರ್ವಜನಿಕರ ಸಹಕಾರ ಅಗತ್ಯ : ಎಸ್ಪಿ.ಕುಶಲ್ ಚೌಕ್ಸೆ
ಸುಸ್ಥಿರ ಸಮಾಜ ನಿರ್ಮಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಕೇವಲ ಹಕ್ಕು ಮತ್ತು ಕರ್ತವ್ಯ ತಿಳಿದು ಕೊಂಡರೆ ಸಾಲದು, ಅದರಂತೆ ನಡೆದಾಗ ಮಾತ್ರ ನಾವು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬಾಳಿ ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ವಕೀಲರ ಸಂಘದ ಅದ್ಯಕ್ಷ ಎ.ನಂಜುಂಡಪ್ಪ ಮಾತನಾಡಿ ಮಕ್ಕಳ ಮೇಲೆ ದೌರ್ಜನ್ಯ ನಡೆಯುವು ದನ್ನು ತಪ್ಪಿಸಲು ಕಠಿಣ ಶಿಕ್ಷೆ ಒಳಗೊಂಡ ಪೊಕ್ಸೊ ಕಾಯ್ದೆ ಬಗ್ಗೆ ತಾವೆಲ್ಲರೂ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು. ಪೊಲೀಸ್ ಇಲಾಖೆ ಹೆಣ್ಣು ಮಕ್ಕಳ ರಕ್ಷಣೆ ಗಾಗಿ ವಿಶೇಷ ಆಪ್ ತಯಾರಿಸಿದ್ದು ಸ್ಮಾರ್ಟ್ ಫೋನಿನಲ್ಲಿ ಅದನ್ನು ಅಳವಡಿಸಿಕೊಂಡು ಇತರರಿಗೆ ಜಾಗೃತಿ ಮೂಡಿಸಿ ಎಂದರು.
ಈ ಸಂದರ್ಭದಲ್ಲಿ ಬಿಇಓ ವೆಂಕಟೇಶಪ್ಪ. ಎನ್, ಶಿಕ್ಷಣ ಸಂಯೋಜಕರಾದ ಎನ್.ವೆಂಕಟರಾಮ್, ದೈಹಿಕ ಶಿಕ್ಷಣ ಪರವೀಕ್ಷಕ ರಂಗನಾಥ ಶಾಲೆಯ ಟ್ರಸ್ಟಿ ಬಿ.ಪೃಥ್ವಿರಾಜ್, ಮುಖ್ಯ ಶಿಕ್ಷಕ ಶ್ರೀನಿವಾಸ್ ರೆಡ್ಡಿ ಹಾಗೂ ಶಾಲಾ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಇದ್ದರು.