ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ಟಿಪಿಒ ಹನುಮಂತರಾಯಪ್ಪ

ಗುಡಿಬಂಡೆ ತಾಲೂಕಿನಲ್ಲಿ ಎರಡನೇ ಬಾರಿಗೆ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ರುವುದು ಸಂತಸದ ವಿಚಾರವಾಗಿದೆ. ಜಿಲ್ಲೆಯ ಆರು ತಾಲೂಕುಗಳಿಂದ ಆಗಮಿಸಿರುವ ಬಾಲಕ ಮತ್ತು ಬಾಲಕಿಯರು ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು.

ಗುಡಿಬಂಡೆ: ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು. ಪಂದ್ಯಾವಳಿಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ಟಿಪಿಒ ಹನುಮಂತರಾಯಪ್ಪ ತಿಳಿಸಿದರು.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಕಬಡ್ಡಿ(Kabaddi) ಪಂದ್ಯಾವಳಿಯಲ್ಲಿ ಮಾತನಾಡಿದರು.

ಗುಡಿಬಂಡೆ ತಾಲೂಕಿನಲ್ಲಿ ಎರಡನೇ ಬಾರಿಗೆ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ರುವುದು ಸಂತಸದ ವಿಚಾರವಾಗಿದೆ. ಜಿಲ್ಲೆಯ ಆರು ತಾಲೂಕುಗಳಿಂದ ಆಗಮಿಸಿರುವ ಬಾಲಕ ಮತ್ತು ಬಾಲಕಿಯರು ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ಸಹಕಾರ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ.

ಇದನ್ನೂ ಓದಿ: Kabaddi Player protest: ಜಿಲ್ಲಾಡಳಿತ ಭವನದ ಎದುರು ಬಾಲಕಿಯರ ಪ್ರತಿಭಟನೆ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆದ್ದರಿಂದ ವಿದ್ಯಾರ್ಥಿಗಳು ಗೆಲುವಿನ ಸಂದರ್ಭದಲ್ಲಿ ಹಿಗ್ಗದೆ, ಸೋಲಿನ ಸಂದರ್ಭದಲ್ಲಿ ಕುಗ್ಗದೆ ಕ್ರೀಡಾಸ್ಫೂರ್ತಿಯಿಂದ ಮುನ್ನಡೆಯಬೇಕು. ಪಂದ್ಯಾವಳಿಯಲ್ಲಿ ವಿಜೇತರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದು, ಎಲ್ಲ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ, ಗುಡಿಬಂಡೆ ತಾಲೂಕು ಹಲವು ವರ್ಷಗಳಿಂದ ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಈ ಹಿಂದೆ ಹಲವು ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಆದರೆ, ತಾಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣದ ಕೊರತೆಯಿಂದ ಕ್ರೀಡಾಪಟುಗಳು ತೊಂದರೆ ಅನುಭವಿಸುತ್ತಿದ್ದಾರೆ.

ಕ್ರೀಡಾಂಗಣ ನಿರ್ಮಾಣಕ್ಕಾಗಿ ಈಗಾಗಲೇ ನಾಲ್ಕರಿಂದ ಐದು ಎಕರೆ ಜಮೀನು ಮೀಸಲಿಡಲಾಗಿದೆ. ಆದ್ದರಿಂದ ಶಾಸಕರು, ಶಿಕ್ಷಕರು, ಸಾರ್ವಜನಿಕರು ಹಾಗೂ ಕ್ರೀಡಾಭಿಮಾನಿಗಳೊಂದಿಗೆ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಶೀಘ್ರ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಕ್ರೀಡಾಭಿಮಾನಿಗಳು ಹಾಜರಿದ್ದರು.