ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ; ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಿ

ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಮುಚ್ಚಿಡದೆ ಕುಟುಂಬದ ಸದಸ್ಯರು, ಆತ್ಮೀಯರು ಹಾಗೂ ವೈದ್ಯರೊಂದಿಗೆ ಹಂಚಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು. ತೀವ್ರ ಮಾನಸಿಕ ಒತ್ತಡ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗೆ ಭೇಟಿ ನೀಡಿ ನೆರವು ಪಡೆಯಬೇಕು

ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಮಲಿಂಗೇಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ: ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸ್ವೀಕರಿಸಿ, ಆಶಾವಾದಿ ಮನೋಭಾವ ಹಾಗೂ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ದೈಹಿಕ ಕಾಯಿಲೆ ಗಳಂತೆ ಮಾನಸಿಕ ಸಮಸ್ಯೆಗಳಿಗೂ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದರಿಂದ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ಹೇಳಿದರು.

ನಗರದ ಸಂತ ಜೋಸೆಫ್ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ; Chikkaballapur News: ಕೃಷಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಗಳ ಸಮನ್ವಯ ಅಗತ್ಯ

ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಮುಚ್ಚಿಡದೆ ಕುಟುಂಬದ ಸದಸ್ಯರು, ಆತ್ಮೀಯರು ಹಾಗೂ ವೈದ್ಯರೊಂದಿಗೆ ಹಂಚಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು. ತೀವ್ರ ಮಾನಸಿಕ ಒತ್ತಡ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗೆ ಭೇಟಿ ನೀಡಿ ನೆರವು ಪಡೆಯಬೇಕು. ಟೆಲಿ-ಮಾನಸ್ 14416 ಸಹಾಯವಾಣಿಯ ಮೂಲಕ ವೂ ಮಾನಸಿಕ ಆರೋಗ್ಯ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಮತ್ತು ಶಿಸ್ತುಬದ್ಧ ಜೀವನ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ. ಮಾನಸಿಕ ನೆಮ್ಮದಿಗೆ ಮನೋಭಾವವೂ ಮುಖ್ಯವಾಗಿದ್ದು, ಜೀವನದಲ್ಲಿ ಸಮತೋಲನ ಕಾಪಾಡಿ ಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಪರೀಕ್ಷೆ ಸೇರಿದಂತೆ ಜೀವನದ ವಿವಿಧ ಹಂತಗಳಲ್ಲಿ ಒತ್ತಡ ಎದುರಾಗುವುದು ಸಹಜ. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ನಿರಂತರ ಅಭ್ಯಾಸ ಮತ್ತು ಪ್ರಯತ್ನಕ್ಕೆ ಆದ್ಯತೆ ನೀಡಬೇಕು. ಯಾವುದೇ ಕ್ಷಣ ಅಥವಾ ಪರೀಕ್ಷೆಯನ್ನು ಜೀವನದ ಅಂತಿಮ ನಿರ್ಧಾರಕ ಹಂತವೆAದು ಭಾವಿಸದೆ, ಸಮಸ್ಯೆಗಳನ್ನು ಧೈರ್ಯದಿಂದ ಸಂಬಂಧಪಟ್ಟವರೊಂದಿಗೆ ಹಂಚಿಕೊಳ್ಳಬೇಕು ಎಂದು ಸಲಹೆ ನೀಡಿದರು.

14cbpm1ramlingaವಿಶ್ವ ಮಾನಸಿಕ ದಿನಾಚರಣೆ- (5) _ok

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್ ಮಾತನಾಡಿ, ಖಿನ್ನತೆ, ಆತಂಕ, ವ್ಯಸನ ಹಾಗೂ ಮಕ್ಕಳ ವರ್ತನೆ ಮತ್ತು ಭಾವನಾತ್ಮಕ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ಗುರುತಿಸಿ ತಜ್ಞರಿಂದ ಚಿಕಿತ್ಸೆ ಕೊಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವಿ. ಕಾಂತರಾಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರೇಮ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಸಿ. ಚೇತನ್, ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಅರುಳ್ ಅಮುದ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯ ಕ್ರಮಾಧಿಕಾರಿ ಡಾ. ಶಿವಕುಮಾರ್, ಮನೋವೈದ್ಯರಾದ ಡಾ. ಜಿ. ಹೇಮಂತ್ ಕುಮಾರ್, ಡಾ. ಎ. ಲಾವಣ್ಯ, ಡಾ. ಜಿ.ಎಸ್. ಹರ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.