ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA K H Puttaswamy Gowda: ರೈತರ ಆರ್ಥಿಕ ಪ್ರಗತಿಗೆ ಹೈನುಗಾರಿಕೆ ಆಸರೆ: ಶಾಸಕ ಪುಟ್ಟಸ್ವಾಮಿಗೌಡ

ಸಹಕಾರ ಸಂಘಗಳು ರೈತರಿಂದ ಹಾಲು ಸಂಗ್ರಹಿಸುವುದಕ್ಕೆ ಮಾತ್ರ ಸೀಮಿತವಾಗದೆ, ಹಾಲು ಉತ್ಪಾದಕರಿಗೆ ಅಗತ್ಯ ಮಾಹಿತಿ, ತಾಂತ್ರಿಕ ಮಾರ್ಗದರ್ಶನ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕು. ಸಂಘಗಳ ಮೂಲಕ ರೈತರಿಗೆ ಉತ್ತಮ ಸೇವೆ ದೊರೆತಾಗ ಹೈನುಗಾರಿಕೆ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ.

ರೈತರ ಆರ್ಥಿಕ ಪ್ರಗತಿಗೆ ಹೈನುಗಾರಿಕೆ ಆಸರೆ: ಶಾಸಕ ಪುಟ್ಟಸ್ವಾಮಿಗೌಡ

-

Profile
Ashok Nayak Nov 22, 2026 4:24 PM

ಗೌರಿಬಿದನೂರು: ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಅವಲಂಬಿಸಿರುವ ರೈತ ಕುಟುಂಬಗಳಿಗೆ ಹೈನುಗಾರಿಕೆ ಪ್ರಮುಖ ಆದಾಯದ ಮೂಲವಾಗಿದ್ದು, ರೈತರ ಆರ್ಥಿಕ ಪ್ರಗತಿಗೆ ನೆರವಾಗಿದೆ. ಹೀಗಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿ, ಅಗತ್ಯ ಸಹಕಾರ ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda) ತಿಳಿಸಿದರು.

ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಹೆಚ್ಚಿನ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿವೆ. ಹೈನುಗಾರಿಕೆಯಿಂದ ಪ್ರತಿನಿತ್ಯ ಆದಾಯ ದೊರೆಯುವುದರಿಂದ ಕೃಷಿಯಲ್ಲಿ ಎದುರಾಗುವ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಕುಟುಂಬಗಳಿಗೆ ಆರ್ಥಿಕ ಆಸರೆಯಾಗುತ್ತದೆ. ಆದ್ದರಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಅವರ ಸಮಸ್ಯೆ ಗಳಿಗೆ ಸ್ಪಂದಿಸಬೇಕು ಎಂದರು.

ಇದನ್ನೂ ಓದಿ: MLA K H Puttaswamy Gowda: ರೈತರ ಆರ್ಥಿಕ ಪ್ರಗತಿಗೆ ಹೈನುಗಾರಿಕೆ ಆಸರೆ: ಪುಟ್ಟಸ್ವಾಮಿಗೌಡ

ಸಹಕಾರ ಸಂಘಗಳು ರೈತರಿಂದ ಹಾಲು ಸಂಗ್ರಹಿಸುವುದಕ್ಕೆ ಮಾತ್ರ ಸೀಮಿತವಾಗದೆ, ಹಾಲು ಉತ್ಪಾದಕರಿಗೆ ಅಗತ್ಯ ಮಾಹಿತಿ, ತಾಂತ್ರಿಕ ಮಾರ್ಗದರ್ಶನ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕು. ಸಂಘಗಳ ಮೂಲಕ ರೈತರಿಗೆ ಉತ್ತಮ ಸೇವೆ ದೊರೆತಾಗ ಹೈನುಗಾರಿಕೆ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ನೂತನ ಕಟ್ಟಡವು ಗ್ರಾಮದ ಹಾಲು ಉತ್ಪಾದಕರಿಗೆ ಅನುಕೂಲವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಚಿಮುಲ್ ನಿರ್ದೇಶಕಿ ಸುಧಾ, ಡಾ. ನರೇಂದ್ರ ಬೂದಿಹಾಳ್, ಪಿಎಲ್‌ಡಿ ಬ್ಯಾಂಕ್‌ನ ಬೊಮ್ಮಣ್ಣ, ಕೆ.ಎಚ್.ಪಿ. ಬಣದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಹಾಲು ಡೇರಿಯ ಅಧಿಕಾರಿಗಳು, ಸಂಘದ ಅಧ್ಯಕ್ಷರು, ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.