ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA K H Puttaswamy Gowda: ರೈತರ ಆರ್ಥಿಕ ಪ್ರಗತಿಗೆ ಹೈನುಗಾರಿಕೆ ಆಸರೆ: ಪುಟ್ಟಸ್ವಾಮಿಗೌಡ

ಹೈನುಗಾರಿಕೆ ರೈತರಿಗೆ ಪ್ರತಿದಿನ ಆದಾಯ ತಂದುಕೊಡುವ ಉದ್ಯಮವಾಗಿದೆ. ಕೃಷಿಯಲ್ಲಿ ಆರ್ಥಿಕ ಸಂಕಷ್ಟ ಎದುರಾದಾಗ ಹೈನುಗಾರಿಕೆಯ ಆದಾಯ ಕುಟುಂಬಗಳಿಗೆ ಆಸರೆಯಾಗುತ್ತದೆ. ಆದ್ದರಿಂದ ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ರೈತರ ಆರ್ಥಿಕ ಪ್ರಗತಿಗೆ ಹೈನುಗಾರಿಕೆ ಆಸರೆ: ಪುಟ್ಟಸ್ವಾಮಿಗೌಡ

-

Profile
Ashok Nayak Nov 17, 2026 11:20 PM

ಗೌರಿಬಿದನೂರು: ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಅವಲಂಬಿಸಿರುವ ಗ್ರಾಮೀಣ ರೈತ ಕುಟುಂಬಗಳಿಗೆ ಹಾಲು ಉತ್ಪಾದನೆ ಪ್ರಮುಖ ಆದಾಯದ ಮೂಲವಾಗಿದೆ. ಹೀಗಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿ, ಅಗತ್ಯ ಸಹಕಾರ ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda) ತಿಳಿಸಿದರು.

ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಹೈನುಗಾರಿಕೆ ರೈತರಿಗೆ ಪ್ರತಿದಿನ ಆದಾಯ ತಂದುಕೊಡುವ ಉದ್ಯಮವಾಗಿದೆ. ಕೃಷಿಯಲ್ಲಿ ಆರ್ಥಿಕ ಸಂಕಷ್ಟ ಎದುರಾದಾಗ ಹೈನುಗಾರಿಕೆಯ ಆದಾಯ ಕುಟುಂಬಗಳಿಗೆ ಆಸರೆಯಾಗುತ್ತದೆ. ಆದ್ದರಿಂದ ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಇದನ್ನೂ ಓದಿ:K H Puttaswamy Gowda: ಹೈನೋದ್ಯಮವೇ ಬಯಲುಸೀಮೆ ರೈತರ ಆಸರೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಸಂಘಗಳು ಹಾಲು ಸಂಗ್ರಹಿಸುವುದಕ್ಕೆ ಮಾತ್ರ ಸೀಮಿತವಾಗದೆ, ಹಾಲು ಉತ್ಪಾದಕರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕು. ರೈತರಿಗೆ ಉತ್ತಮ ಸೇವೆ ದೊರೆತಾಗ ಹೈನುಗಾರಿಕೆ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ನೂತನ ಕಟ್ಟಡವು ಗ್ರಾಮದ ಹಾಲು ಉತ್ಪಾದಕರಿಗೆ ಅನುಕೂಲ ವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಚಿಮುಲ್ ನಿರ್ದೇಶಕಿ ಸುಧಾ, ಡಾ. ನರೇಂದ್ರ ಬೂದಿಹಾಳ್, ಪಿಎಲ್‌ಡಿ ಬ್ಯಾಂಕ್ ಪ್ರತಿನಿಧಿಗಳು, ಬೊಮ್ಮಣ್ಣ ಹಾಗೂ ಕೆ.ಎಚ್.ಪಿ. ಬಣದ ಪ್ರಮುಖರು, ಚುನಾಯಿತ ಜನಪ್ರತಿನಿಧಿ ಗಳು, ಹಾಲು ಡೇರಿಯ ಅಧಿಕಾರಿಗಳು, ಸಂಘದ ಅಧ್ಯಕ್ಷರು, ನಿರ್ದೇಶಕರು, ಹಾಲು ಉತ್ಪಾದಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.