ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Birth Anniversary of the Onake Obavva: ಮುಂದಿನ ವರ್ಷದಿಂದ ಒನಕೆ ಓಬವ್ವ ಜಯಂತಿಯನ್ನು ಪ್ರತ್ಯೇಕವಾಗಿ ಆಚರಿಸಲು ನಿರ್ಧಾರ: ಡಾ. ಶ್ರೀನಿವಾಸಪ್ಪ

ಈ ಬಾರಿ ಜಿಲ್ಲಾಡಳಿತದ ಮೇಲಿನ ಗೌರವದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ. ಆದರೆ ಸಮುದಾಯದ ಮುಖಂಡರನ್ನು ವೇದಿಕೆಗೆ ಆಹ್ವಾನಿಸದೆ ಕಡೆಗಣಿಸಿರುವುದು ಬೇಸರ ತಂದಿದೆ ಎಂದು ಏಡುಕೊಂಡಲು ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಸಂಸ್ಥಾಪಕ ಹಾಗೂ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಗೌರವಾಧ್ಯಕ್ಷ ಡಾ. ಶ್ರೀನಿವಾಸಪ್ಪ ಸ್ಪಷ್ಟಪಡಿಸಿದರು.

ಮುಂದಿನ ವರ್ಷದಿಂದ ಒನಕೆ ಓಬವ್ವ ಜಯಂತಿಯ ಪ್ರತ್ಯೇಕ ಆಚರಣೆ

-

Profile
Ashok Nayak Nov 12, 2026 10:02 PM

ಚಿಕ್ಕಬಳ್ಳಾಪುರ: ಜಿಲ್ಲಾಡಳಿತದ ವತಿಯಿಂದ ಕನ್ನಡ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ(Birth Anniversary of the Heroic Woman Onake Obavva) ಯನ್ನು ಮುಂದಿನ ವರ್ಷದಿಂದ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಪ್ರತ್ಯೇಕವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಈ ಬಾರಿ ಜಿಲ್ಲಾಡಳಿತದ ಮೇಲಿನ ಗೌರವದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ. ಆದರೆ ಸಮುದಾಯದ ಮುಖಂಡರನ್ನು ವೇದಿಕೆಗೆ ಆಹ್ವಾನಿಸದೆ ಕಡೆಗಣಿಸಿರುವುದು ಬೇಸರ ತಂದಿದೆ ಎಂದು ಏಡುಕೊಂಡಲು ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಸಂಸ್ಥಾಪಕ ಹಾಗೂ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಗೌರವಾಧ್ಯಕ್ಷ ಡಾ. ಶ್ರೀನಿವಾಸಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ ಆಯೋಜಿಸಿದ್ದ ಒನಕೆ ಓಬವ್ವ ಜಯಂತಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಅಚ್ಚುಕಟ್ಟಾಗಿ ನಡೆದಿರುವುದು ಸಂತಸ ತಂದಿದೆ. 

ಇದನ್ನೂ ಓದಿ: Onake Obavva Jayanti: ಒನಕೆ ಓಬವ್ವರ ಸಾಹಸ, ಸ್ವಾಮಿಭಕ್ತಿ, ಕಾರ್ಯತತ್ಪರತೆ ಇಂದಿನ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ ಜಿ. ಪ್ರಭು

ಕಾರ್ಯಕ್ರಮದಲ್ಲಿ ನಮ್ಮ ಸಂಘಟನೆಯಿಂದ ಜಿಲ್ಲೆಯ ಎಂಟು ತಾಲ್ಲೂಕುಗಳ ಪದಾಧಿಕಾರಿಗಳು ಹಾಗೂ ಸಮುದಾಯದ ಬಂಧುಗಳು 18 ಬಸ್‌ಗಳಲ್ಲಿ  ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿ ದ್ದರು. ಇದರಿಂದ ಕನ್ನಡ ಭವನದ ಎಲ್ಲ ಆಸನಗಳು ಭರ್ತಿಯಾಗಿದ್ದವು. ವೇದಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ನಮ್ಮ ಸಂಘಟನೆಯೂ ಸಹಕಾರ ನೀಡಿದೆ ಎಂದರು.

ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಬಲಾಡ್ಯ ಸಮುದಾಯಗಳ ಜಯಂತಿಗಳ ಸಂದರ್ಭದಲ್ಲಿ ಆಯಾ ಸಮುದಾಯದ ಮುಖಂಡರನ್ನು ವೇದಿಕೆಗೆ ಆಹ್ವಾನಿಸಿ ಗೌರವಿಸಲಾಗುತ್ತದೆ. ಆದರೆ ಬಲಹೀನ ಸಮುದಾಯಗಳ ಜಯಂತಿಗಳಲ್ಲಿ ಈ ಪರಿಪಾಠ ಅನುಸರಿಸದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ. ಸಮುದಾಯದ ಮುಖಂಡರನ್ನು ಆಹ್ವಾನಿಸದೆ ಜಿಲ್ಲಾಡಳಿತ ಅನುಸರಿಸಿರುವ ನಡೆ ಬೇಸರ ಮೂಡಿಸಿದೆ. ಜಿಲ್ಲಾಧಿಕಾರಿಗಳ ಮೇಲಿನ ಗೌರವದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರ ವನಿತೆ ಒನಕೆ ಓಬವ್ವ ಅವರಿಗೆ ಗೌರವ ನಮನ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ಪ್ರತ್ಯೇಕ ಕಾರ್ಯಕ್ರಮ: ಮುಂದಿನ ವರ್ಷದಿಂದ ಜಿಲ್ಲಾಡಳಿತದೊಂದಿಗೆ ಸೇರಿ ಜಯಂತಿ ಆಚರಿಸುವುದಿಲ್ಲ. ಬದಲಾಗಿ ನಮ್ಮ ಸಮುದಾಯದ ಮುಖಂಡರಿಗೆ ಗೌರವ ದೊರೆಯುವ ರೀತಿಯಲ್ಲಿ ಪ್ರತ್ಯೇಕವಾಗಿ ಖಾಸಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದೇವೆ. ಅಂಬೇಡ್ಕರ್ ಜಯಂತಿ, ಒನಕೆ ಓಬವ್ವ ಜಯಂತಿ ಸೇರಿದಂತೆ ಸಮುದಾಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಂಘಟನೆಯ ವತಿಯಿಂದಲೇ ಪ್ರತ್ಯೇಕವಾಗಿ ನಡೆಸಲಾಗುವುದು ಎಂದರು.

1556930 onake

ಸಮುದಾಯದಲ್ಲಿ ಗುಂಪುಗಾರಿಕೆ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಬಲಗೈ ಜಾತಿಗಳ ಒಕ್ಕೂಟದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಂಟು ತಾಲ್ಲೂಕುಗಳ ಪದಾಧಿಕಾರಿಗಳು ಹಾಗೂ ಸಮುದಾಯದ ಬಂಧುಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘಟನೆಯ ಏಕತೆಗೆ ಧಕ್ಕೆಯಾಗುವಂತಹ ಯಾವುದೇ ಬೆಳವಣಿಗೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ನಮ್ಮ ಸಂಘಟನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಿದ್ದಾರೆ. ಆದರೆ ಸಮುದಾಯದ ಇಷ್ಟೊಂದು ಜನರು ಪಾಲ್ಗೊಂಡಿದ್ದರೂ ಯಾವೊಬ್ಬ ಜನಪ್ರತಿನಿಧಿಯೂ ಕಾರ್ಯಕ್ರಮಕ್ಕೆ ಆಗಮಿಸದಿರುವುದು ನೋವು ತಂದಿದೆ. ನಮ್ಮನ್ನು ಕಡೆಗಣಿಸಿದವರಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕ ಸಮಾರಂಭದ ಶಿಷ್ಟಾಚಾರ ಮತ್ತು ವೇದಿಕೆ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿಗಳು ನಿರ್ವಹಿಸಬೇಕಾಗಿತ್ತು. ಈ ವಿಚಾರದಲ್ಲಿ ನಾವು ಯಾರ ವಿರುದ್ಧವೂ ವೈಯಕ್ತಿಕ ಆರೋಪ ಮಾಡುತ್ತಿಲ್ಲ. ಸಮುದಾಯಕ್ಕೆ ಮುಖಂಡರಿಗೆ ಸೂಕ್ತ ಗೌರವ ಮತ್ತು ಪ್ರಾತಿನಿಧ್ಯ ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಸ್ಪಷ್ಟಪಡಿಸಿದರು.