SIR: ಎಸ್‌ಐಆರ್ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹ
ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಎಸ್‌ಐಆರ್ ಪ್ರಕ್ರಿಯೆ ಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು. ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾ ತ್ಮಕ ಲೋಪಗಳಿಂದ ಯಾರಿಗೂ ಅನ್ಯಾಯವಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು
-
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಲವು ತೊಂದರೆಗಳನ್ನು ಎದುರಿಸು ತ್ತಿದ್ದು, ಎನ್ಯೂಮರೇಷನ್ ಫಾರಂ ವಿತರಣೆಗೆ ನಿಗದಿಪಡಿಸಿರುವ ಆ.8ರ ಗಡುವನ್ನು ವಿಸ್ತರಿಸಿ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಜಾಗೃತ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮತಕಾವಲು ಸಮಿತಿ ಜಿಲ್ಲಾಧ್ಯಕ್ಷ ಮೊಹಮ್ಮದ್ ನೂರುಲ್ಲಾ ಹಾಗೂ ಎದ್ದೇಳು ಕರ್ನಾಟಕ ಜಿಲ್ಲಾ ಕೋಆರ್ಡಿನೇಟರ್ ಶಮೀರ್ ಜಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಸಾಕಷ್ಟು ಗೊಂದಲ ಉಂಟಾಗಿದ್ದು, ದಾಖಲೆಗಳ ಸಂಗ್ರಹ ಹಾಗೂ ಫಾರಂ ಭರ್ತಿಗೆ ನಿಗದಿ ಪಡಿಸಿರುವ ಅವಧಿ ಸಾಕಾಗುವುದಿಲ್ಲ. ಆದ್ದರಿಂದ ಆ.8ರ ಗಡುವನ್ನು ವಿಸ್ತರಿಸಿ ಜನರಿಗೆ ಸಮರ್ಪಕ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Chinthamani News: ನಿಯಮಿತ ಮಣ್ಣು ಪರೀಕ್ಷೆಯಿಂದ ವೆಚ್ಚ ಕಡಿಮೆ, ಆದಾಯ ಹೆಚ್ಚಳ: ಕೃಷಿ ವಿಜ್ಞಾನಿಗಳ ಸಲಹೆ
ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ನಾಗರಿಕರಿಂದ ಮತ್ತೆ ದಾಖಲೆಗಳನ್ನು ಕೇಳುತ್ತಿರುವುದು ಏಕೆ? ಮನೆ ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯವೈಖರಿ ಯಲ್ಲಿ ಏಕರೂಪತೆ ಇಲ್ಲದಿರುವುದಕ್ಕೆ ಕಾರಣವೇನು? ದಾಖಲೆಗಳ ಕೊರತೆಯಿಂದ ಅರ್ಹ ಮತದಾರರ ಹೆಸರುಗಳು ಕೈಬಿಡುವ ಅಪಾಯ ಉಂಟಾಗುವುದಿಲ್ಲವೇ? ಗ್ರಾಮೀಣ ಪ್ರದೇಶದ ಜನರು, ಹಿರಿಯ ನಾಗರಿಕರು, ವಲಸೆ ಕಾರ್ಮಿಕರು ಹಾಗೂ ದುರ್ಬಲ ವರ್ಗದ ಮತದಾರರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆಯೇ? ಎಂದು ಪ್ರಶ್ನಿಸಿದರು.
ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು. ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾ ತ್ಮಕ ಲೋಪಗಳಿಂದ ಯಾರಿಗೂ ಅನ್ಯಾಯವಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜೀವಿಕ ಸಂಘಟನೆಯ ವೆಂಕಟನಾರಾಯಣಮ್ಮ, ಈಶ್ವರಪ್ಪ, ಗೋಪಾಲ್. ಎಸ್ಡಿ ಪಿಐ ಸಲ್ಮಾನ್, ಜೀವಿಕ ನಾರಾಯಣಸ್ವಾಮಿ ಮತ್ತಿತರರು ಇದ್ದರು.