ಗುಡಿಬಂಡೆ: ಕ್ಷೇತ್ರದ ಇತಿಹಾಸದಲ್ಲೇ ಒಂದು ಬಾರಿ ಗೆದ್ದ ಶಾಸಕರು ಮತ್ತೆ ಗೆದ್ದಿರುವುದಿಲ್ಲ. ಅದನ್ನು ಸುಳ್ಳು ಮಾಡಿದಂತಹ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ( MLA SN Subba reddy)ಯವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಬೀಚಗಾನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಕೆ.ನರೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿ, ಶಾಸಕರಾದ ಸುಬ್ಬಾರೆಡ್ಡಿಯವರು ರಾಜಕೀಯಕ್ಕೆ ಬರುವುದಕ್ಕೂ ಮುಂಚೆಯಿಂದಲೇ ಅನೇಕ ಜನಪರ ಕಾರ್ಯಕ್ರಮಗಳನ್ನು ಕೈಗೊಂಡು ಜನರ ಸೇವೆ ಮಾಡಿದ್ದಾರೆ. ಆರೋಗ್ಯ, ಶಿಕ್ಷಣ, ಸಾಮೂಹಿಕ ವಿವಾಹ ಹೀಗೆ ಹತ್ತು ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: MLA S.N. Subbareddy: ರೈತರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಲು ಶಾಸಕ ಸುಬ್ಬಾರೆಡ್ಡಿ ಕರೆ
ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಬಾಗೇಪಲ್ಲಿ-ಗುಡಿಬಂಡೆ ವಿಧಾನಸಭಾ ಕ್ಷೇತ್ರದಲ್ಲಿ ಒಮ್ಮೆ ಗೆದ್ದ ಅಭ್ಯರ್ಥಿ ಮತ್ತೊಮ್ಮೆ ಗೆದ್ದಿರುವ ಇತಿಹಾಸವೇ ಇಲ್ಲ. ಆದರೆ ಅದನ್ನು ಸುಬ್ಬಾರೆಡ್ಡಿಯವರು ಹುಸಿ ಮಾಡಿದ್ದಾರೆ.
ಶಾಸಕರಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಿರಿಯ ಶಾಸಕರಾಗಿರುವ ಸುಬ್ಬಾರೆಡ್ಡಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ಅವರಿಗೆ ಸಚಿವ ಸ್ಥಾನ ನೀಡಿದರೇ ಹಿಂದುಳಿದ ನಮ್ಮ ಭಾಗ ಮತ್ತಷ್ಟು ಅಭಿವೃದ್ದಿಯಾಗಲಿದೆ. ಆದ್ದರಿಂದ ಕಾಂಗ್ರೇಸ್ ವರಿಷ್ಟರು ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.