ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: ಮಡಿವಾಳ ಸಮುದಾಯವನ್ನು ಎಸ್‌ಸಿಗೆ ಸೇರಿಸಲು ಒತ್ತಾಯ: ಸೆ.9ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ದೇಶದ 18 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ-ಧೋಬಿ ಸಮುದಾಯಕ್ಕೆ ಈಗಾಗಲೇ ಪರಿಶಿಷ್ಟ ಜಾತಿ ಸ್ಥಾನಮಾನ ದೊರೆತಿದೆ. ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಈ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ

18 ರಾಜ್ಯಗಳಲ್ಲಿ ಸಿಕ್ಕಿರುವ ಎಸ್‌ಸಿ ಸ್ಥಾನಮಾನ ಕರ್ನಾಟಕದಲ್ಲೇಕಿಲ್ಲ?

-

Profile
Ashok Nayak Sep 2, 2026 10:08 PM

ಚಿಂತಾಮಣಿ: ಮಡಿವಾಳ ಸಮುದಾಯವನ್ನು ತಕ್ಷಣ ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬಲವಾದ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಸೆ.9ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಎಸ್‌ಸಿ ಹೋರಾಟ ಸಮಿತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಮಡಿವಾಳರ ಸಂಘದ ವತಿಯಿಂದ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದರು.

ಇದನ್ನೂ ಓದಿ: Chinthamani News: ಜಮೀನು ಮಂಜೂರಾಗದೆ ನೊಂದ ಮಾಜಿ ಸೈನಿಕನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಜೆ.ಕೆ. ಕೃಷ್ಣಾರೆಡ್ಡಿ

ದೇಶದ 18 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ-ಧೋಬಿ ಸಮುದಾಯಕ್ಕೆ ಈಗಾಗಲೇ ಪರಿಶಿಷ್ಟ ಜಾತಿ ಸ್ಥಾನಮಾನ ದೊರೆತಿದೆ. ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಈ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.

ಸೆ.9ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರದ ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಜಿಲ್ಲಾದ್ಯಂತದ ಮಡಿವಾಳ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಎಸ್‌ಸಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಸ್.ಸಿದ್ಧಗಂಗಯ್ಯ ಮಾತನಾಡಿ, ಹಲವು ವರದಿಗಳು ಸಚಿವ ಸಂಪುಟಕ್ಕೆ ಸಲ್ಲಿಕೆಯಾಗಿದ್ದರೂ ಬೇಡಿಕೆ ಈಡೇರಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಿ, ಅಂತಿಮವಾಗಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿ.ಆರ್.ಪ್ರಕಾಶ್, ಆರ್.ವಿ.ರಾಜಣ್ಣ, ಆರ್.ಮಂಜುನಾಥ್, ಸುನಿಲ್ ಕುಮಾರ್ ಕೆ.ಸಿ.,ರಾಘವೇಂದ್ರ ಜಿ. ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.