ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ತರಗತಿ ಕೊಠಡಿಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿಯಿಂದ ಭೂಮಿಪೂಜೆ

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿರುವ ‘ಒನ್ ಸ್ಕೂಲ್ ಅಟ್ ಎ ಟೈಮ್’, ಬನಾರ್ಸ್ ಹಾಗೂ ಮೆಕ್‌ಡೊನಾಲ್ಡ್ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ಸಂಸ್ಥೆಯು ತನ್ನ 147ನೇ ಶಾಲಾ ಯೋಜನೆ ಯಡಿ ಸುಮಾರು 90 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂರು ತರಗತಿ ಕೊಠಡಿಗಳು, ಅಡುಗೆ ಮನೆ ಹಾಗೂ ಊಟದ ಕೋಣೆ ನಿರ್ಮಾಣಕ್ಕೆ ಮುಂದಾಗಿದೆ. ಕಾಮಗಾರಿಯನ್ನು ಮುಂದಿನ 10 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಡಿಕಲ್ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ‘ಒನ್ ಸ್ಕೂಲ್ ಅಟ್ ಎ ಟೈಮ್’ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗು ತ್ತಿರುವ ನೂತನ ತರಗತಿ ಕೊಠಡಿಗಳು, ಅಡುಗೆ ಮನೆ ಹಾಗೂ ಊಟದ ಕೋಣೆ ನಿರ್ಮಾಣ ಕಾಮಗಾರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಪ್ರಭು, ಸರ್ಕಾರದ ಎಲ್ಲ ಇಲಾಖೆಗಳು ಶಿಕ್ಷಣ ಇಲಾಖೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತವೆ. ದೇಶಕ್ಕೆ ಸದೃಢ ಮಾನವ ಸಂಪನ್ಮೂಲ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದರು.

ಇದನ್ನೂ ಓದಿ: Chinthamani News: ಜನರು ತೋರಿದ ಪ್ರೀತಿ–ಸಹಕಾರ ಎಂದಿಗೂ ಮರೆಯಲ್ಲ: ಎಸ್‌ಪಿ ಕುಶಲ್ ಚೌಕ್ಸೆ

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿರುವ ‘ಒನ್ ಸ್ಕೂಲ್ ಅಟ್ ಎ ಟೈಮ್’, ಬನಾರ್ಸ್ ಹಾಗೂ ಮೆಕ್‌ಡೊನಾಲ್ಡ್ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ಸಂಸ್ಥೆಯು ತನ್ನ 147ನೇ ಶಾಲಾ ಯೋಜನೆಯಡಿ ಸುಮಾರು 90 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂರು ತರಗತಿ ಕೊಠಡಿಗಳು, ಅಡುಗೆ ಮನೆ ಹಾಗೂ ಊಟದ ಕೋಣೆ ನಿರ್ಮಾಣಕ್ಕೆ ಮುಂದಾಗಿದೆ. ಕಾಮಗಾರಿಯನ್ನು ಮುಂದಿನ 10 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

3cbpm3KPS ಶಾಲೆ ಮಂಡಿಕಲ್- (7)_ok

ಜಿಲ್ಲೆಯ ಇತರ ಶಾಲೆಗಳ ಅಭಿವೃದ್ಧಿಗೂ ಸಂಸ್ಥೆಗಳು ಮುಂದಾಗಿದ್ದು, ಮತ್ತೊಂದು ಶಾಲೆಯಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಅನುದಾನದಲ್ಲಿ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ. ಇಂತಹ ಸೇವಾ ಕಾರ್ಯಗಳು ಶ್ಲಾಘನೀಯ ವಾಗಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ.ಆರ್.ಶ್ರೀನಿವಾಸ್, ಸಿ.ಎಸ್.ಕೇದಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ರಮೇಶ್, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ, ಮುಖ್ಯೋಪಾಧ್ಯಾಯ ಗೋವಿಂದಪ್ಪ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮಂಡಿಕಲ್ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.