Chikkaballapur News: ನಕಲಿ ವೈದ್ಯರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಯಾವುದೇ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಸರ್ಕಾರದ ಮಾರ್ಗಸೂಚಿಗಳನ್ವಯ ದಾಖಲೆಗಳನ್ನು ಸಲ್ಲಿಸದೆ ಅಥವಾ ನೋಂದಣಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅಂತಹ ಸಂಸ್ಥೆಗಳ ಹಾಗೂ ವೈದ್ಯರ ವಿರುದ್ಧ ಕೆಎಂಪಿಇ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಆರೋಗ್ಯ ಸಂಸ್ಥೆಗಳು ತಮ್ಮ ಸಂಸ್ಥೆಗೆ ಕಡ್ಡಾಯವಾಗಿ ಕೆಎಂಪಿಇ ಕಾಯ್ದೆ ಅಡಿಯಲ್ಲಿ ನೋಂದಣಿಯನ್ನು ಪಡೆಯಬೇಕಾಗಿರುತ್ತದೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಆರೋಗ್ಯ ಸಂಸ್ಥೆಗಳು ತಮ್ಮ ಸಂಸ್ಥೆಗೆ ಕಡ್ಡಾಯವಾಗಿ ಕೆಎಂಪಿಇ ಕಾಯ್ದೆ ಅಡಿಯಲ್ಲಿ ನೋಂದಣಿಯನ್ನು ಪಡೆಯಬೇಕಾಗಿರುತ್ತದೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆ.ಪಿ.ಎಂ.ಇ ಹಾಗೂ ಪಿಸಿ & ಪಿ.ಎನ್.ಡಿ.ಟಿ ನೋಂದಣಿ ಹಾಗೂ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಸರ್ಕಾರದ ಮಾರ್ಗಸೂಚಿಗಳನ್ವಯ ದಾಖಲೆಗಳನ್ನು ಸಲ್ಲಿಸದೆ ಅಥವಾ ನೋಂದಣಿ ಪಡೆಯದೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅಂತಹ ಸಂಸ್ಥೆಗಳ ಹಾಗೂ ವೈದ್ಯರ ವಿರುದ್ಧ ಕೆಎಂಪಿಇ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: India-China Trade: ಭಾರತ- ಚೀನಾ ವ್ಯಾಪಾರ ಮತ್ತೆ ಪುನರಾರಂಭ; ರಸಗೊಬ್ಬರ, ಸುರಂಗ ಯಂತ್ರ ರಫ್ತಿಗೆ ಡ್ರಾಗನ್ ರಾಷ್ಟ್ರ ಒಪ್ಪಿಗೆ
ಜಿಲ್ಲೆಯಲ್ಲಿ ಇತ್ತೀಚಿಗೆ ನಕಲಿ ವೈದ್ಯರು, ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಗುತ್ತಿರುವ ನಕಲಿ ವೈದ್ಯರನ್ನು ಗುರ್ತಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ಕಾರ್ಯನಿರ್ವಹಿಸಬೇಕು. ಏPಒಇ ಕಾಯ್ದೆ ಅಡಿಯಲ್ಲಿ ನೋಂದಣಿಯನ್ನು ಪಡೆಯದೆ ಕ್ಲಿನಿಕ್ ನಡೆಸುತ್ತಿರುವ ವೈದ್ಯರ ವಿರುದ್ಧ ಅಧಿನಿಯಮ ೨೦೦೭ರ ವಿಭಾಗ ೧೫ ಹಾಗೂ ಉಪವಿಭಾಗ ೮ರ ಅಡಿ ಕಾನೂನು ಕ್ರಮ ಜರುಗಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅನಧಿಕೃತವಾಗಿ ಚಿಕಿತ್ಸೆ ನೀಡುತ್ತಿದ್ದ ಶಿಡ್ಲಘಟ್ಟ ತಾಲ್ಲೂಕಿನ ಭಾಗ್ಯಮ್ಮರವರಿಗೆ ರೂ. ೭೫,೦೦೦ ಗಳು, ವೆಂಕಟಪ್ಪ ರವರಿಗೆ ರೂ. ೫೦,೦೦೦, ಮಣಿಕಂಠ-೨೦,೦೦೦ ಮತ್ತು ಶ್ರೀರಾಮರೆಡ್ಡಿ-೨೫,೦೦೦ ಹಾಗೂ ಚಿಂತಾಮಣಿ ತಾಲ್ಲೂಕಿನ ರಮಾದೇವಿಯವರಿಗೆ ೨೦,೦೦೦ರೂ.ಗಳನ್ನು ಕೆಎಂಪಿಇ ಅಧಿನಿಯಮ ೨೦೦೭ರ ವಿಭಾಗ ೧೫ ಹಾಗೂ ಉಪವಿಭಾಗ ೮ರ ಅಡಿಯಲ್ಲಿ ದಂಡವನ್ನು ವಿಧಿಸ ಲಾಗಿರುತ್ತದೆ. ಈ ರೀತಿಯ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಕಂಡುಬಂದರೂ ಕೂಡಲೆ ವರದಿ ಮಾಡಿದರೆ ಅಂತಹವರ ಮೇಲೆ ಕಾನೂನುಕ್ರಮ ಜರುಗಿಸಲಾಗುವುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ವರದಿ ನೀಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಮಾತನಾಡಿ, ಜಿಲ್ಲೆ ಯಲ್ಲಿ ಒಟ್ಟು ೩೦೫ ಆರೋಗ್ಯ ಸಂಸ್ಥೆಗಳು ನೋಂದಣಿಯಾಗಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆ ಯಾದ್ಯಂತ ಸುಮಾರು ೪೦ ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಗುರ್ತಿಸಲಾಗಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಚಿಂತಾಮಣಿ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ರಮಾದೇವಿ, ಭಾಗ್ಯಮ್ಮ, ವೆಂಕಟಪ್ಪ, ಮಣಿಕಂಠ ಮತ್ತು ಶ್ರೀರಾಮರೆಡ್ಡಿ ಎಂಬ ವ್ಯಕ್ತಿಗಳು ಸೂಕ್ತ ವೈದ್ಯ ವಿದ್ಯಾರ್ಹತೆ ಹೊಂದಿಲ್ಲದಿದ್ದರೂ ಅನಧಿಕೃತವಾಗಿ ನಕಲಿ ಕ್ಲಿನಿಕ್‌ಗಳನ್ನು ತೆರೆದು ಸಾರ್ವಜನಿಕರಿಗೆ ಚಿಕಿತ್ಸೆಯನ್ನು ನೀಡುತ್ತಿರುವುದರ ಖಚಿತ ಮಾಹಿತಿಯ ಮೇರೆಗೆ ಅನಿರೀಕ್ಷಿತ ದಾಳಿ ಕೈಗೊಂಡು ಸಂಸ್ಥೆಗಳನ್ನು ಸೀಜ್ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಲಾಗಿತ್ತು. ಅದರನ್ವಯ ನಕಲಿ ವೈದ್ಯರನ್ನು ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರರೆಡ್ಡಿ, ಜಿಲ್ಲಾ ಐಎಂಎ ಅಧ್ಯಕ್ಷ ಡಾ.ಅನಂತು, ಜಿಲ್ಲಾ ಆಯುಷ್ ಅಧಿಕಾರಿ ಡಾ. ತಬೀಬಾ ಬಾನು, ತಾಲ್ಲೂಕು ಆರೋಗ್ಯಾಧಿ ಕಾರಿಗಳು ಹಾಜರಿದ್ದರು.