ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

D Devraj Urs: ದೇವರಾಜ ಅರಸು ಹಿಂದುಳಿದ ವರ್ಗಗಳ ಚಾಂಪಿಯನ್: ಎನ್. ಆಂಜಿನಪ್ಪ

ಹಿಂದುಳಿದ ವರ್ಗಗಳಲ್ಲಿಯೂ ಬಡತನ, ಅನಕ್ಷರತೆ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆ ಇತ್ತು. ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅರಸು ಅವರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಆಡಳಿತ ದಿಂದ ಹಿಂದುಳಿದ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆಗಳಾದವು

ಚಿಕ್ಕಬಳ್ಳಾಪುರ: ಹಿಂದುಳಿದ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯ ವಾಗಿ ಬೆಳೆಯಲು ಶಕ್ತಿ ತುಂಬಿ, ಅವರನ್ನು ಮುಖ್ಯವಾಹಿನಿಗೆ ತರಲು ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದ ಡಿ.ದೇವರಾಜ ಅರಸು(D Devraj Urs) ಅವರು ಹಿಂದುಳಿದ ವರ್ಗಗಳ ಚಾಂಪಿಯನ್‌ ಆಗಿ ಇತಿಹಾಸದಲ್ಲಿ ಉಳಿದಿದ್ದಾರೆ ಎಂದು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಎನ್. ಆಂಜಿನಪ್ಪ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರ ಯದಲ್ಲಿ ಗುರುವಾರ ನಡೆದ ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಹಿಂದುಳಿದ ವರ್ಗಗಳಲ್ಲಿಯೂ ಬಡತನ, ಅನಕ್ಷರತೆ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆ ಇತ್ತು. ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅರಸು ಅವರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಆಡಳಿತ ದಿಂದ ಹಿಂದುಳಿದ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆಗಳಾದವು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಮಾತನಾಡಿ, ಭೂಸುಧಾರಣಾ ಕಾಯ್ದೆ ಜಾರಿಗೆ ತಂದು ‘ಉಳುವವನೇ ಭೂಮಿಯ ಒಡೆಯ’ ಎಂಬ ಹಕ್ಕು ಕಲ್ಪಿಸುವ ಮೂಲಕ ಸಾವಿರಾರು ರೈತರು ಭೂಮಿಯ ಮಾಲೀಕರಾಗಲು ಅರಸು ಕಾರಣರಾದರು. ಹಾವನೂರು ಆಯೋಗದ ವರದಿಯನ್ನು ಜಾರಿಗೊಳಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿದರು. ವಸತಿ ನಿಲಯಗಳ ಸ್ಥಾಪನೆಯ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಉತ್ತೇಜನ ನೀಡಿದರು ಎಂದರು.

963181 ok

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಮಾತನಾಡಿ, ಅರಸು ಅವರು ಜಾರಿಗೆ ತಂದ ಭೂಸುಧಾರಣೆ ಹಾಗೂ ಸಾಮಾಜಿಕ ನ್ಯಾಯದ ಕ್ರಮ ಗಳು ಇಂದಿಗೂ ಪ್ರಸ್ತುತವಾಗಿವೆ. ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ನೆರವಾಗುವ ಭತ್ಯೆ ಯೋಜನೆಯನ್ನೂ ಅವರು ಜಾರಿಗೆ ತಂದಿದ್ದರು. ಇಂದಿನ ಯುವನಿಧಿ ಯೋಜನೆ ಅದರ ಮುಂದು ವರಿದ ರೂಪವಾಗಿದೆ. ವಿದ್ಯಾರ್ಥಿಗಳು ಅರಸು ಅವರ ಜೀವನ ಮತ್ತು ಸಾಧನೆಗಳನ್ನು ಅಧ್ಯಯನ ಮಾಡಿ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಬಿ.ವಿ. ಪ್ರಕಾಶ್ ಮಾತನಾಡಿ, ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದು, ಜೀತಪದ್ಧತಿ, ಬಾಲಕಾರ್ಮಿಕ ಪದ್ಧತಿ ಹಾಗೂ ಮಲಹೊರುವ ಪದ್ಧತಿ ನಿರ್ಮೂ ಲನೆಗೆ ಕ್ರಮ ಕೈಗೊಂಡರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಹಾಗೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ವಾಪಸಂದ್ರದ ರಂಗನಾಥಸ್ವಾಮಿ ದೇವಾಲಯದಿಂದ ಆರಂಭವಾದ ದೇವರಾಜ ಅರಸು ಅವರ ಪಲ್ಲಕ್ಕಿ ಮೆರವಣಿಗೆ ವಿವಿಧ ಕಲಾತಂಡಗಳು ಹಾಗೂ ಬೃಹತ್ ಭಾವಚಿತ್ರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.