ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA BN Ravikumar: ಮೇ.18ರಂದು ಶಾಸಕ ಬಿ.ಎನ್.ರವಿಕುಮಾರ್ ನೇತೃತ್ವದಲ್ಲಿ ದೇವೇಗೌಡರ ಜನ್ಮದಿನ ಸಂಭ್ರಮ

ಶಾಸಕ ಬಿ. ಎನ್. ರವಿಕುಮಾರ್ ಮಾತನಾಡಿ,ಮಾಜಿ ಪ್ರಧಾನಿ ದೇವೇಗೌಡರು ರೈತರ ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ದೇಶದ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ

ಮೇ.18ರಂದು ಶಾಸಕ ನೇತೃತ್ವದಲ್ಲಿ ದೇವೇಗೌಡರ ಜನ್ಮದಿನ ಸಂಭ್ರಮ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ  ಅವರ ಜನ್ಮದಿನವನ್ನು ಸೋಮವಾರ ೧೮ನೇ ತಾರೀಕು ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. -

Profile
Ashok Nayak May 16, 2026 10:24 PM

ಶಿಡ್ಲಘಟ್ಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(Former Prime Minister HD DeveGowda) ಅವರ ಜನ್ಮದಿನವನ್ನು ಸೋಮವಾರ 18ನೇ ತಾರೀಕು ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ.

ಶಿಡ್ಲಘಟ್ಟ ಶಾಸಕ ಬಿಎನ್ ರವಿಕುಮಾರ್(Shidlaghatta MLA B.N.Ravikumar) ಅವರ ನೇತೃತ್ವ ದಲ್ಲಿ ತಾಲೂಕಿನ ಹೊರವಲಯದ ಹಂಡಿಗನಾಳ ಗ್ರಾಮದ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ: MLA B.N. Ravikumar: ದಿಬ್ಬೂರಹಳ್ಳಿ–ತಿಮ್ಮಸಂದ್ರ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಬಿ.ಎನ್. ರವಿಕುಮಾರ್

ಈ ಕುರಿತು ಶಾಸಕ ಬಿ. ಎನ್. ರವಿಕುಮಾರ್ ಮಾತನಾಡಿ,ಮಾಜಿ ಪ್ರಧಾನಿ ದೇವೇಗೌಡರು ರೈತರ ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ದೇಶದ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಅವರ ಶಾಲೆಯ ಶಿಕ್ಷಕರಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಅನ್ನಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದು ಶಾಸಕ ರವಿಕುಮಾರ್ ತಿಳಿಸಿದರು.