ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೇ 19ರಿಂದ - 25ರವರೆಗೆ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಮತ್ತು ಜನಜಾತೀಯ ಗರಿಮಾ ಉತ್ಸವ-2026

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್ ಅವರು ಮಾತನಾಡಿ, ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒಟ್ಟು 79,156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 549 ಜಿಲ್ಲೆಗಳ, 2911-ಬ್ಲಾಕ್ ಗಳಲ್ಲಿ 63000 ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಯೋಜನೆ ರೂಪಿಸಿದೆ

ಪರಿಶಿಷ್ಟ ಪಂಗಡದ ಸಮುದಾಯದವರು ಹೆಚ್ಚಾಗಿ ವಾಸಿಸುವ ಗ್ರಾಮಗಳಲ್ಲಿ ಇಂದಿನಿಂದ ಜನಜಾತೀಯ ಗರಿಮಾ ಉತ್ಸವ ಅರಿವು ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು.

ಚಿಕ್ಕಬಳ್ಳಾಪುರ: ಪರಿಶಿಷ್ಟ ಪಂಗಡದ ಸಮುದಾಯದವರು ಹೆಚ್ಚಾಗಿ ವಾಸಿಸುವ ಗ್ರಾಮಗಳಲ್ಲಿ ಇಂದಿನಿಂದ ಜನಜಾತೀಯ ಗರಿಮಾ ಉತ್ಸವ ಅರಿವು ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳ ಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯ ದಲ್ಲಿ ಜಿಲ್ಲಾ ಪಂಚಾಯತ್ ನ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಹಮ್ಮಿಕೊಂಡಿದ್ದ ಜನ್ ಭಾಗೀದರ್ತಿ ಸಬ್‌ಸೆ ದೂರ್ ಸಬ್‌ಸೆ ಪಹಲೆ ಕ್ಯಾಂಪೇನ್  ಮತ್ತು ಜನಜಾತೀಯ ಗರಿಮಾ ಉತ್ಸವದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯವು ಅನುಷ್ಠಾನಗೊಳಿಸುವ “ಧರ್ತಿ ಆಬಾ ಜನ ಭಾಗೀದಾರಿ ಅಭಿಯಾನ ಮತ್ತು ಆದಿ ಕರ್ಮಯೋಗಿ ಅಭಿಯಾನದಡಿ ಜಿಲ್ಲೆ ಉತ್ತಮ ಸಾಧನೆ ಮಾಡಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ಕೇಂದ್ರ ಸರ್ಕಾರದ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಭಾಜನವಾಗಿತ್ತು. ಅದೇ ರೀತಿ ಈ ಅಭಿಯಾನದಡಿ ಕೆಲಸ ನಿರ್ವಹಿಸುತ್ತಿರುವ 17 ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು. ಈ ಕುರಿತು ಶೇ.50 ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪರಿಶಿಷ್ಟ ಪಂಗಡದ ಸಮುದಾಯದ ಗ್ರಾಮಗಳಿಗೆ ಮೇ 25ರ ವರೆಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ಅಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿ ಮೂಲ ಸೌಕರ್ಯಗಳನ್ನು ಒದಗಿಸಲು ಹಾಗೂ ಮಾದರಿ ಗ್ರಾಮ ಗಳನ್ನಾಗಿ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಇದನ್ನೂ ಓದಿ: Chikkaballapur News: ಅಂಗಡಿಗಳ ಮೇಲೆ ದಾಳಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ 3100 ರೂ.ಗಳ ದಂಡ ಸಂಗ್ರಹ : ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್

ಪ್ರಸ್ತುತ ಜಿಲ್ಲೆಯ 31 ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಿದೆ. ಈ ಗ್ರಾಮಗಳಲ್ಲದೆ ಇನ್ನು 80 ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡದ ಸಮುದಾಯದವರು ಶೇ.50 ರಷ್ಟಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದಾರೆ ಆ ಗ್ರಾಮಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಅಗತ್ಯ ಕ್ರಮವಹಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗೆ ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್ ಮಾತನಾಡಿ, ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒಟ್ಟು 79,156 ಕೋಟಿ ರೂ.ಗಳ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 549 ಜಿಲ್ಲೆಗಳ, 2911-ಬ್ಲಾಕ್ ಗಳಲ್ಲಿ 63000 ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ದೇಶದ ಸುಮಾರು 5 ಕೋಟಿ ಜನರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. 2024-25 ರಿಂದ 2028-29ನೇ ಸಾಲಿನ ವರೆಗೆ 5 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳ್ಳುವ ನಿರೀಕ್ಷೆ ಇದೆ. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4000 ಕೋಟಿ ರೂಗಳ ಅನುದಾನವನ್ನು ಈ ಅಭಿಯಾನದಡಿ ನಿಗದಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ 31 ಗ್ರಾಮಗಳನ್ನು (6 ತಾಲ್ಲೂಕು) ಆಯ್ಕೆ ಮಾಡಿ ಭೌತಿಕ ಗುರಿ ನಿಗದಿಪಡಿಸಲಾಗಿದ್ದು, ವಿವಿಧ 17 ಇಲಾಖೆಗಳು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ ಎಂದು ಹೇಳಿದರು.

cbpm1s (1)

ಈ ಅಭಿಯಾನದಡಿ ಜಿಲ್ಲೆಯಲ್ಲಿ ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಶೀತಲ ಶೇಖರಣೆಗಳು, ಶುದ್ದ ನೀರಿನ ಘಟಕಗಳು, ಅಂಗನವಾಡಿಗಳು, ಶಾಲಾ ಕಟ್ಟಡಗಳು ಹಾಗೂ ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮಿಕಿ ಮತ್ತು ಬುಡಕಟ್ಟು ಸಮುದಾಯದ ಸ್ವಾತಂತ್ರ‍್ಯ ಹೋರಾಟ ಗಾರ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿರ್ಮಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.