ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ : ಅತೃಪ್ತರ ಸಭೆ ಮೂಲಕ ಎಚ್ಚರಿಕೆ ಸಂದೇಶ ರವಾನೆ

ಕಳೆದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ, ಬಲಾಢ್ಯ ರಾಜಕಾರಣಿ ಡಾ. ಕೆ.ಸುಧಾಕರ್ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕೆಚ್ಚಿ ನಿಂದ ರಾಜಕೀಯ ಕ್ಷೇತ್ರಕ್ಕೆ ಮೊದಲ ಬಾರಿ ಅಂಬೆಗಾಲಿಟ್ಟು ಬಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್ ರವರನ್ನು ಏನೂ ನೋಡದೆ ಅಖಂಡ ಬೆಂಬಲದಿಂ ದ ಇದೇ ಕಾಂಗ್ರೆಸ್ ಮುಖಂಡರುಗಳು ಹಗಲು ಇರುಳು ಶ್ರಮವಹಿಸಿ ಗೆಲ್ಲಿಸಿಸುವ ಮೂಲಕ ವಿಧಾನ ಸಭೆಯ ಮೆಟ್ಟಲು ಏರುವಂತೆ ಮಾಡಿದ್ದೆವು.ಇದು ನಿರರ್ಥಕ ಎಂದು ಈಗ ಅನಿಸುತ್ತಿದೆ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಕಾಂಗ್ರೆಸ್ ಅತೃಪ್ತರ ಸಭೆಯಲ್ಲಿ ಮುಖಂಡರು ಮಾತನಾಡಿದರು.

Profile Ashok Nayak May 15, 2025 10:00 AM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಗುಪ್ತಗಾಮಿನಿಯಂತೆ ಹರಿಯುತ್ತಿದ್ದ ಭಿನ್ನಮತ ಅತೃಪ್ತರ ಸಭೆಯ ಮೂಲಕ ಬಹಿರಂಗವಾಗಿ ಸ್ಪೋಟವಾಗಿದ್ದು ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆಯೋ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ. ತಾಲೂಕಿನ ನಂದಿಕ್ರಾಸ್ ಹತ್ತಿರ ಖಾಸಗಿ ತೋಟವೊಂದರಲ್ಲಿ ಮಂಗಳವಾರ ಸಭೆ ಸೇರಿದ್ದ 100ಕ್ಕೂ ಹೆಚ್ಚು ಅತೃಪ್ತ ನಾಯಕರ ಗುಂಪು ನಮ್ಮöನ್ನು ಕೆಗಣಿಸಿದ್ದೇ ಆದಲ್ಲಿ ಪಕ್ಷಕ್ಕೆ ಉಳಿಗಾಲವಿಲ್ಲ. ಎರಡು ವರ್ಷಗಳ ಅವಧಿಯಲ್ಲಿ ನಡೆದಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೆಲಕಚ್ಚುವ ಮೂಲಕ ಸಂಘಟನೆಯಲ್ಲಿ ಬಲವಿಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.

ಅಸಮಾಧಾನಗೊಂಡಿರುವ ಕಾಂಗ್ರೆಸ್ ಮುಖಂಡರುಗಳು ನೂರಕ್ಕೂ ಹೆಚ್ಚು ಮಂದಿ ಮಂಗಳವಾರ ಗುಪ್ತ ಸಭೆ ನಡೆಸುವ ಮೂಲಕ ಸಭೆಯಲ್ಲಿ ಸ್ಥಳೀಯ ಶಾಸಕರು, ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ

ಕಳೆದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ, ಬಲಾಢ್ಯ ರಾಜಕಾರಣಿ ಡಾ. ಕೆ.ಸುಧಾಕರ್ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕೆಚ್ಚಿನಿಂದ ರಾಜಕೀಯ ಕ್ಷೇತ್ರಕ್ಕೆ ಮೊದಲ ಬಾರಿ ಅಂಬೆಗಾಲಿಟ್ಟು ಬಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್ ರವರನ್ನು ಏನೂ ನೋಡದೆ ಅಖಂಡ ಬೆಂಬಲದಿಂ ದ ಇದೇ ಕಾಂಗ್ರೆಸ್ ಮುಖಂಡರುಗಳು ಹಗಲು ಇರುಳು ಶ್ರಮವಹಿಸಿ ಗೆಲ್ಲಿಸಿಸುವ ಮೂಲಕ ವಿಧಾನ ಸಭೆಯ ಮೆಟ್ಟಲು ಏರುವಂತೆ ಮಾಡಿದ್ದೆವು.ಇದು ನಿರರ್ಥಕ ಎಂದು ಈಗ ಅನಿಸುತ್ತಿದೆ ಎಂಬುದು ಮುಖಂಡ ಮಿಲ್ಟನ್ ವೆಂಕಟೇಶ್ ಅವರ ಬೇಸರದ ಮಾತಾಡಿದ್ದಾರೆ.

ಕೆಪಿಸಿಸಿ ಮಾಜಿ ಸದಸ್ಯರೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ ಏನು ಇಲ್ಲದ ವ್ಯಕಿಯನ್ನು ಕೇವಲ ಪ್ರೀತಿ ವಿಶ್ವಾಸದಿಂದಲೇ ಶಾಸಕರನ್ನಾಗಿ ಮಾಡಿದೆವು. ಆದರೆ ಅಧಿಕಾರಕ್ಕೇರಿದ ಕೂಡಲೇ ಆನೆ ನಡೆದಿದ್ದೆ ಹಾದಿ ಎಂಬAತೆ ತಮಗೆ ಇಷ್ಟ ಬಂದAತೆ ವರ್ತಿಸುತ್ತಾ, ತಮ್ಮ ಗೆಲುವಿಗೆ ಕಾರಣಕರ್ತರಾದ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಬಹಿರಂಗವಾಗಿಯೇ ಅವರಿಗೆ ತಿಳಿ ಹೇಳಿದ್ದಾಯಿತು.ಅವರು ಅರ್ಥ ಮಾಡಿಕೊಳ್ಳಲಿಲ್ಲ.ರೋಸಿ ಹೋದ ನಾವು ಇತ್ತೀಚೆ ಗಷ್ಟೇ ಕಾಂಗ್ರೆಸ್ ಪಕ್ಷದ ಸಂಘಟನೆ ಸಂಬAಧ ಕ್ಷೇತ್ರಕ್ಕೆ ಆಗಮಿಸಿದ್ದ ವೀಕ್ಷಕ ಅಭಿಷೇಕ್ ದತ್ತ ಅವರ ಮುಂದೆಯೇ ಇವರ ಕಾರ್ಯವೈಖರಿ,ವರ್ತನೆಯ ವಿರುದ್ಧ ಪ್ರತಿಭಟನೆ ಸಲ್ಲಿಸಿದ್ದು ಆಯಿತು. ಆದರೂ ಯಾವುದೇ ಪ್ರಯೋಜನ ಆಗಲಿಲ್ಲ ಎಂದು ಈ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎಂ.ಪಿ. ಚುನಾವಣೆಯ ನಂತರ ನಡೆದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿದೆ. ನಗರಸಭೆ, ಪಿಎಲ್‌ಡಿ ಬ್ಯಾಂಕ್, ಕೃಷಿ ವ್ಯವಸಾಯೋತ್ಪನ್ನ ಮಾರುಕಟ್ಟೆಯ ಸಮಿತಿ ಮುಂತಾದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ದಯನೀಯವಾಗಿ ಸೋತಿದೆ.ಇದಕ್ಕೆ ಕಾರಣ ಶಾಸಕ ಪ್ರದೀಪ್ ಈಶ್ವರ್ ಮಾತ್ರ. ಅವರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳದೆ ಇದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂಬುದು ಮೂಲ ಕಾಂಗ್ರೆಸ್ಸಿಗರ ಮಾತಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಹತ್ತಿರ ಬರುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿ ಸುವ ಅಭ್ಯರ್ಥಿಗಳಿಗೆ ಬಿ.ಫಾರಂ ಅನ್ನು ಶಾಸಕರಿಗೆ ಕೊಡಬಾರದು. ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ವಿತರಣೆ ಮಾಡಲಿ.ಇಲ್ಲದಿದ್ದರೆ ಪಕ್ಷದ ಅವನತಿ ಖಚಿತ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

ನಮ್ಮ ಅಸಮಾಧಾನ ಇಲ್ಲಿಗೆ ನಿಲ್ಲುವುದಿಲ್ಲ.ಮುಂದಿನ ದಿನಗಳಲ್ಲಿ ಶಾಸಕರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ನೇರವಾಗಿಯೇ ವಿರೋಧ ವ್ಯಕ್ತಪಡಿಸುವುದಾಗಿಯೂ ಹೆಸರು ಹೇಳಲು ಇಚ್ಛಿಸದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮ ಅಸಮಾಧಾನವನ್ನು  ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಬೂದಿ ಮುಚ್ಚಿದ ಕೆಂಡದAತಿದ್ದ ಕಾಂಗ್ರೆಸ್ ಮುಖಂಡರ ಭಿನ್ನಮತ ಮಂಗಳವಾರ ಬಹಿರಂಗವಾಗಿ ಸ್ಪೋಟಗೊಂಡಿದ್ದು, ಮುಂದೆ ಯಾವ ಹಂತಕ್ಕೆ ಬಂದು ನಿಲ್ಲುತ್ತದೆಯೋ, ಹೈ ಕಮಾಂಡ್ ಭಿನ್ನಮತವನ್ನು ತಣಿಸಲು ಏನುಕ್ರಮ ತೆಗೆದುಕೊಳ್ಳುತ್ತದೆಯೋ ಕಾದು ನೋಡ ಬೇಕಿದೆ.

ನಗರದ ಹೊರವಲಯದ ತೋಟವೊಂದರಲ್ಲಿ ನಡೆದ ಅತೃಪ್ತರ ಸಭೆಯಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಂದಿ ಎಂ ಆಂಜನಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಂಚೇನಹಳ್ಳಿ ಪ್ರಕಾಶ್, ಮಂಡಿಕಲ್ ಕಾಂಗ್ರೆಸ್ ಮುಖಂಡ ಅಜಿತ್ ಪ್ರಸಾದ್, ಕೆಪಿಸಿಸಿ ಮಾಜಿ ಸದಸ್ಯ, ಮಾಜಿ ಶಾಸಕ ಎಸ್ ಎಂ ಮುನಿಯಪ್ಪ, ಲಾಯರ್ ನಾರಾಯಣ ಸ್ವಾಮಿ, ಅಡ್ಡಗಲ್ ಗ್ರಾಮ ಪಂಚಾಯತ್ ಸದಸ್ಯ ಎನ್.ವಿ.ಶಂಕರ್, ನಗರ ಸಭೆ  ಮಾಜಿ ಸದಸ್ಯ ಮಿಲ್ಟನ್ ವೆಂಕಟೇಶ್, ಮಂಡಿಕಲ್ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಿ.ವಿ ರಾಜೇಶ್,  ಕೋಚಿ ಮುಲ್ ಮಾಜಿ ನಿರ್ದೇಶಕ ಭರಣಿ ವೆಂಕಟೇಶ್ ಒಳಗೊಂಡಂತೆ ಇನ್ನೂ ಅನೇಕ ಮಂದಿ ಕಾಂಗ್ರೆಸ್ ಮುಖಂಡರುಗಳು ಈ ಅತೃಪ್ತರ ಸಭೆಯಲ್ಲಿ ಭಾಗವಹಿಸಿದ್ದರು.