ಹಾಲು ಉತ್ಪಾದಕರಿಗೆ 10 ಲೀಟರ್ ಸಾಮರ್ಥ್ಯದ ಕ್ಯಾನ್ ವಿತರಣೆ
ಇತ್ತೀಚಿನ ದಿನಗಳಲ್ಲಿ ರೈತರು ಹಾಲಿನ ಉತ್ಪಾದನೆಗಿಂತ ಇತರೆ ಬೆಳೆಗಳತ್ತ ಹೆಚ್ಚಿನ ಗಮನ ಹರಿಸುತ್ತಿರುವುದರಿಂದ ತಾಲೂಕು ಮಟ್ಟದಲ್ಲಿ ಹಾಲಿನ ಉತ್ಪಾದನೆ ಕುಸಿಯುತ್ತಿದೆ. ಹೀಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ ಹಾಲಿನ ಉತ್ಪಾದನೆ ಹೆಚ್ಚಿಸಲು ಸಂಘದಿAದ ವಿವಿಧ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ
-
ಚಿಕ್ಕಬಳ್ಳಾಪುರ: ಹಾಲು ಉತ್ಪಾದಕರನ್ನು ಉತ್ತೇಜಿಸಿ ಹಾಲಿನ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಚಿಕ್ಕಪೈಲಗುರ್ಕಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ 90 ಹಾಲು ಉತ್ಪಾದಕರಿಗೆ ತಲಾ 10 ಲೀಟರ್ ಸಾಮರ್ಥ್ಯದ ಸ್ಟೀಲ್ ಹಾಲಿನ ಕ್ಯಾನ್‌ಗಳನ್ನು ವಿತರಿಸಲಾಯಿತು.
ಸಂಘದಲ್ಲಿ ನಡೆದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪೆರೇಸಂದ್ರ ಕ್ಷೇತ್ರದ ನಿರ್ದೇಶಕ ಡಾ.ಕೆ.ವಿ.ನಾಗರಾಜು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: Chikkaballapur News: ಮಾರುಕಟ್ಟೆ ಮೌಲ್ಯ ಪರಿಗಣಿಸಿ ಸೂಕ್ತ ಪರಿಹಾರ ನೀಡಲು ಕ್ರಮ: ಜಿ.ಪ್ರಭು
ಈ ಸಂದರ್ಭದಲ್ಲಿ ಮಾತನಾಡಿದ ಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ಇತ್ತೀಚಿನ ದಿನಗಳಲ್ಲಿ ರೈತರು ಹಾಲಿನ ಉತ್ಪಾದನೆಗಿಂತ ಇತರೆ ಬೆಳೆಗಳತ್ತ ಹೆಚ್ಚಿನ ಗಮನ ಹರಿಸುತ್ತಿರುವುದರಿಂದ ತಾಲೂಕು ಮಟ್ಟದಲ್ಲಿ ಹಾಲಿನ ಉತ್ಪಾದನೆ ಕುಸಿಯುತ್ತಿದೆ. ಹೀಗಾಗಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ ಹಾಲಿನ ಉತ್ಪಾದನೆ ಹೆಚ್ಚಿಸಲು ಸಂಘದಿಂದ ವಿವಿಧ ಕ್ರಮಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದರು.
ಇದೇ ವೇಳೆ ಹಾಲು ಒಕ್ಕೂಟದಿಂದ ದೊರೆಯುವ ತುರ್ತು ಕರೆ, ರಾಸು ವಿಮೆ, ಮೇವಿನ ಇಳುವರಿ, ಚಿಮುಲ್ ವಿಮೆ, ಪಶು ಆಹಾರ ಬಳಕೆ ವಿಧಾನ, ಮೇವಿನ ಪ್ರೋತ್ಸಾಹಧನ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.
ಸಂಘದ ಅಧ್ಯಕ್ಷ ಸಿ.ವಿ.ಎಂ.ಕೃಷ್ಣ, ಆಡಳಿತ ಮಂಡಳಿ ಸದಸ್ಯರು, ಉಪ ವ್ಯವಸ್ಥಾಪಕ ಡಾ. ಮನೋರಂಜನ್ ರೆಡ್ಡಿ ಹಾಗೂ ವಿಸ್ತರಣಾಧಿಕಾರಿ ನವೀನ್ ಚಂದ್ರ ಪಿ. ಉಪಸ್ಥಿತರಿದ್ದರು.