ಗುಡಿಬಂಡೆ: ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಸಿ. ಮುನಿರಾಜು ರವರ 48ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ತಾಲೂಕು ಘಟಕ ಹಾಗೂ ಮಹಿಳಾ ಮೋರ್ಚಾ ಘಟಕದ ವತಿಯಿಂದ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಬಿಜೆಪಿ ತಾಲೂಕು ಕಾರ್ಯದರ್ಶಿ ಆಂಬರೀಶ್ ಮಾತನಾಡಿ, ಬಡವರ ಪರ ಕೆಲಸ ಮಾಡು ವಂತಹ ಸಿ.ಮುನಿರಾಜು ರವರ ಹುಟ್ಟುಹಬ್ಬದ ನಿಮಿತ್ತ ಪ್ರತಿ ವರ್ಷ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: Gudibande News: ಸರ್ಕಾರಿ ಶಾಲೆಗಳಿಗೆ ದಾನಿಗಳ ಸಂಖ್ಯೆ ಹೆಚ್ಚಾಗಲಿ: ಎಸ್.ಡಿ.ಎಂ.ಸಿ ಅಧ್ಯಕ್ಷ ನಂಜುಂಡಪ್ಪ
ಅದೇ ರೀತಿ, ಈ ಬಾರಿಯೂ ಸಹ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅವರನ್ನು ಶಾಸಕರನ್ನಾಗಿ ಮಾಡಿದರೇ ನಮ್ಮ ಕ್ಷೇತ್ರ ಮತ್ತಷ್ಟು ಅಭಿವೃದ್ದಿಯಾಗಲಿದೆ ಎಂದರು.
ಇದೇ ಸಮಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಲಕ್ಷ್ಮೀ ಮಾತನಾಡಿದರು. ಈ ಸಮಯದಲ್ಲಿ ಬಿಜೆಪಿ ಅಧ್ಯಕ್ಷ ಗಂಗಿರೆಡ್ಡಿ, ಮುಖಂಡರಾದ ಆಶಾ ಜಯಪ್ಪ, ಮಧುಸೂಧನ್, ಪ್ರೆಸ್ ಶಿವಪ್ಪ, ಗಗನ್ ಸೇರಿದಂತೆ ಹಲವರು ಹಾಜರಿದ್ದರು.