ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಶಿಥಿಲಾವಸ್ಥೆಯಲ್ಲಿರುವ ಸಾರ್ವಜನಿಕ ಕಟ್ಟಡಗಳನ್ನು ಗುರುತಿಸಿ ಸ್ಥಳಾಂತರಗೊಳಿಸಲು ಜಿಲ್ಲಾಧಿಕಾರಿ ಜಿ ಪ್ರಭು ಸೂಚನೆ

ನಗರ ಪ್ರದೇಶಗಳಲ್ಲಿನ ಕಟ್ಟಡಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಇಂಜಿನಿಯರ್ ಗಳಿಂದ ಪರಿಶೀಲನೆ ಮಾಡಿಸಿ ಸಂಬಂಧಪಟ್ಟ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸುವುದು ಹಾಗೂ ಅದರ ಪ್ರತಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು ಕಡ್ಡಾಯ.

ಜಿಲ್ಲೆಯಲ್ಲಿ ಅಕಾಲಿಕ ಮಳೆ-ಗಾಳಿ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಗುರುತಿಸಿ ಸ್ಥಳಾಂತರಗೊಳಿಸಲು ಅತ್ಯವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಕಾಲಿಕ ಮಳೆ-ಗಾಳಿ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಶಿಥಿಲಾ ವಸ್ಥೆಯಲ್ಲಿರುವ ಆಸ್ಪತ್ರೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಗುರುತಿಸಿ ಸ್ಥಳಾಂತರಗೊಳಿಸಲು ಅತ್ಯವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು(District Collector G Prabhu) ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾ ವ್ಯಾಪ್ತಿಯ ಗ್ರಾಮಾಂತರ ಪ್ರದೇಶದಲ್ಲಿನ ಕಟ್ಟಡಗಳನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಪರಿಶೀಲನೆ ಮಾಡ ಬೇಕು. ನಂತರ ಆಯಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ನಗರ ಪ್ರದೇಶಗಳಲ್ಲಿನ ಕಟ್ಟಡಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಇಂಜಿನಿಯರ್ ಗಳಿಂದ ಪರಿಶೀಲನೆ ಮಾಡಿಸಿ ಸಂಬಂಧಪಟ್ಟ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಾಂತ್ರಿಕ ವರದಿ ಸಲ್ಲಿಸುವುದು ಹಾಗೂ ಅದರ ಪ್ರತಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು ಕಡ್ಡಾಯ.

ಇದನ್ನೂ ಓದಿ: Chikkaballapur News: ಸರ್ಕಾರಿ ಶಾಲೆಗೇ ಮಕ್ಕಳನ್ನು ದಾಖಲಿಸಿ, ಉತ್ತಮ ಭವಿಷ್ಯ ಕಲ್ಪಿಸಿ: ಉಪನಿರ್ದೇಶಕ ರಮೇಶ್.ವಿ ಮನವಿ

ವರದಿ ಸ್ವೀಕೃತಗೊಂಡ ನಂತರ ಸಂಬAಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಶಿಥಿಲಾ ವಸ್ಥೆಯಲ್ಲಿರುವ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳನ್ನು ಹಾಗೂ ಶಾಲೆ ಮತ್ತು ಅಂಗನ ವಾಡಿ ಕೇಂದ್ರಗಳನ್ನು ಸುಸ್ಥಿತಿಯಲ್ಲಿರುವ ಬದಲಿಕಟ್ಟಡಗಳಿಗೆ ಸ್ಥಳಾಂತರಿಸುವುದು. ಯೋಗ್ಯವಲ್ಲದ ಮತ್ತು ತೀರಾ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮತ್ತು ಖಾಲಿಯಿರುವ ಹಳೆಯ ಕಟ್ಟಡಗಳನ್ನು ಎಂಜಿನಿಯರ್ ವಿಭಾಗದ ಮೂಲಕ ತಪಾಸಣೆ ನಡೆಸಿ ನೆಲಸಮ ಮಾಡುವ ಬಗ್ಗೆ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ತಪ್ಪದೆ ಈ ಕಚೇರಿಗೆ ವರದಿಯನ್ನು ಸಲ್ಲಿಸಬೇಕು. ಇದರಲ್ಲಿ ಯಾವುದೇ ಲೋಪ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.