ಚಿಕ್ಕಬಳ್ಳಾಪುರ: ವಿಶ್ವ ಕೌಶಲ್ಯ ಸ್ಪರ್ಧೆ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ವಿಶ್ವ ಕೌಶಲ್ಯ ಸ್ಪರ್ಧೆ-2026 ಚೀನಾದ ಶಾಂಘೈ ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂಡಿಯಾ ಸ್ಕಿಲ್ಸ್-2025 ರ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂಡಿಯಾ ಸ್ಕಿಲ್ಸ್-2025ರ ಸ್ಪರ್ಧೆಗೆ ನೋಂದಣಿ ಪ್ರಾರಂಭವಾಗಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸ್ಕೀಲ್ ಇಂಡಿಯಾ ವೆಬ್ ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: Chikkaballapur News:: ಡಿಸ್ಕವರಿ ವಿಲೇಜ್‌ನಲ್ಲಿ ಪೌರಕಾರ್ಮಿಕರ ದಿನಾಚರಣೆ ಆಯೋಜಿಸಿದ ನಗರಸಭೆ
ವಿಶ್ವ ಕೌಶಲ್ಯ ಸ್ಪರ್ಧೆ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಯು ೨೦೨೬ರಲ್ಲಿ ಚೀನಾದ ಶಾಂಘೈ ನಗರದಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ೭೫ ಕ್ಕೂ ಹೆಚ್ಚು ದೇಶಗಳಿಂದ ೧,೦೦೦ ಕ್ಕೂ ಅಧಿಕ ಕೌಶಲ್ಯಯುತ ಯುವಜನತೆ (೧೬ ರಿಂದ ೨೫ ವರ್ಷ ವಯಸ್ಸಿನವರು) ೬೩ ವಿವಿಧ ಕೌಶಲ್ಯ ವಿಭಾಗಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ ಶ್ರೇಷ್ಠತೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸುತ್ತಾರೆ.
ಈ ಸ್ಪರ್ಧೆಯ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-೨೦೨೫ ಅನ್ನು ಪ್ರಾರಂಭಿಸಿದೆ. ಈ ಸ್ಪರ್ಧೆಯ ವಿಜೇತರಿಗೆ ಉನ್ನತ ಮಟ್ಟದ ತರಬೇತಿ ಮತ್ತು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವರು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶವನ್ನು ಪಡೆಯಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ೯೬೦೬೪೯೨೨೧೬ ಗೆ ಸಂಪರ್ಕಿಸಬಹುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್ ಇದ್ದರು.