ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka State Police Housing Corporation: ಪೊಲೀಸ್ ವಸತಿ ಗೃಹ ಸಮುಚ್ಚಯ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ

ಚಿಕ್ಕಬಳ್ಳಾಪುರ ನಗರದಲ್ಲಿ ಪ್ರಥಮ ದರ್ಜೆ ಕಾಲೇಜಿನ ಹಾಗೂ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಟ್ಟಡಗಳ ಕಾಮಗಾರಿಗಳನ್ನು ತಲಾ 6 ಕೋಟಿ ವೆಚ್ಚದಲ್ಲಿ ದಾಖಲೆಯ ಅವಧಿ ಯಲ್ಲಿ ಅಂದರೆ ಕೇವಲ 10 ತಿಂಗಳ ಅವಧಿಯಲ್ಲಿ ಗುಣಮಟ್ಟದಲ್ಲಿ ಪೂರ್ಣ ಗೊಳಿಸಲಾಯಿತು.

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ(Karnataka State Police Housing Corporation)ದ ವತಿಯಿಂದ ಚಿಕ್ಕಬಳ್ಳಾ ಪುರ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ “ಪೊಲೀಸ್ ವಸತಿ ಗೃಹ ಸಮುಚ್ಚಯದ” ಕಾಮಗಾರಿಯು ಗುಣಮಟ್ಟದಲ್ಲಿ ಹಾಗೂ ತ್ವರಿತವಾಗಿ ಆಗಬೇಕು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಯೋಜನಾ ಗುತ್ತಿಗೆ ದಾರರಿಗೆ ಸೂಚನೆ ನೀಡಿದರು.

ನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ “ಪೊಲೀಸ್ ವಸತಿ ಗೃಹ ಸಮುಚ್ಚಯದ ಕಾಮಗಾರಿಗೆ” ಅವರು ಗುರುವಾರ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಪ್ರಥಮ ದರ್ಜೆ ಕಾಲೇಜಿನ ಹಾಗೂ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಟ್ಟಡಗಳ ಕಾಮಗಾರಿಗಳನ್ನು ತಲಾ 6 ಕೋಟಿ ವೆಚ್ಚದಲ್ಲಿ ದಾಖಲೆಯ ಅವಧಿಯಲ್ಲಿ ಅಂದರೆ ಕೇವಲ 10 ತಿಂಗಳ ಅವಧಿಯಲ್ಲಿ ಗುಣಮಟ್ಟದಲ್ಲಿ ಪೂರ್ಣ ಗೊಳಿಸಲಾಯಿತು. ಅದೇ ರೀತಿ ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ವಿವಿಧ ಕಾಮಗಾರಿ ಗಳು ವೇಗಗತಿಯಲ್ಲಿ ನಡೆಯುತ್ತಿವೆ. ಅದೇ ರೀತಿ ಈ ವಸತಿ ಸಮುಚ್ಚಯವೂ ನಿಗದಿತ ವೇಳೆಯಲ್ಲಿ ಪೂರ್ಣವಾಗಬೇಕು ಎಂದರು.

ಇದನ್ನೂ ಓದಿ: Chikkaballapur News: ಮಾ.24 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

ಆ ನಿಟ್ಟಿನಲ್ಲಿ ಯೋಜನಾ ಅಭಿಯಂತರರು ಹಾಗೂ ಗುತ್ತಿಗೆದಾರರು ನಿಗಾ ವಹಿಸಬೇಕು. ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವತಿಯಿಂದ ನಿರ್ಮಾಣವಾಗುವ ಕಾಮಗಾರಿ ಗಳಿಗೆ ಅನುದಾನದ ಕೊರತೆ ಆಗುವುದಿಲ್ಲ. ಆದ್ದರಿಂದ ಕಾಮಗಾರಿಯು ಯಾವುದೇ ಕಾರಣಕ್ಕೂ ವಿಳಂಬವಾಗಕೂಡದು. ಜೊತೆಗೆ ವೈಜ್ಞಾನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ನೂತನವಾಗಿ ನಿರ್ಮಾಣವಾಗುವ ಈ ಕಟ್ಟಡದಲ್ಲಿ ತಂಪು ಹವಾಗುಣ ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡಿ ಕಟ್ಟಡ ನಿರ್ಮಾಣ ಕಾರ್ಯ ಆಗಬೇಕು.

cbpm1l

ಪೊಲೀಸರಿಂದ ಶಾಂತಿ ಸುವ್ಯವಸ್ಥೆ: ಪೊಲೀಸ್ ಇಲಾಖೆ ಸಧೃಡವಾಗಿದ್ದು, ಇಲಾಖೆಯ ಸಿಬ್ಬಂದಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಿದರೆ, ಹೆಚ್ಚು ಕಾರ್ಯಕ್ಷಮತೆ ಯಿಂದ ಕೆಲಸ ಮಾಡಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಎಲ್ಲ ಸೌಲತ್ತುಗಳನ್ನು ಒದಗಿಸಲು ಇಲಾಖೆಯ ಮುಖ್ಯಸ್ಥರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನಾಥ್ ರೈ, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ತಹಶೀಲ್ದಾರ್ ರಶ್ಮಿ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.