Chikkaballapur News: ಸರಕಾರಿ ಶಾಲೆ, ವಸತಿ ಶಾಲೆ, ಅಂಗನವಾಡಿಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡೆ ಗಾನಹಳ್ಳಿ ಅಂಗನ ವಾಡಿ ಕೇಂದ್ರ, ಕೊಲಿಮೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟವನ್ನು ಹಾಗೂ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುಳ ಅವರು ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳು, ವಸತಿ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುಳ ಅವರು ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳು, ವಸತಿ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ಹಾಗೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡೆ ಗಾನಹಳ್ಳಿ ಅಂಗನವಾಡಿ ಕೇಂದ್ರ, ಕೊಲಿಮೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟವನ್ನು ಹಾಗೂ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಇದನ್ನೂ ಓದಿ: Chikkaballapur News: ಬಾಗೇಪಲ್ಲಿಯ ಪಿ.ಎಂ.ಶ್ರೀ ಶಾಲೆ ಜಿಲ್ಲಾ ಅತ್ಯುತ್ತಮ ಶಾಲೆ ಪ್ರಶಸ್ತಿಗೆ ಆಯ್ಕೆ
ನಂತರ ಪೋಶೆಟ್ಟಹಳ್ಳಿಯ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಯನ್ನು ಪರಿಶೀಲಿಸಿದರು. ಆ ನಂತರ ಮಂಚೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಮಕ್ಕಳ ಕಲಿಕಾ ಪ್ರಕ್ರಿಯೆಯನ್ನು ಪರಿವೀಕ್ಷಿಸಿದರು. ಆ ನಂತರ ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೊನೆಯದಾಗಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಮಾತನಾಡಿ, ಕುಡಿಯುವ ನೀರು ಪೂರೈಕೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮ ಮತ್ತು ವಾರ್ಡ್ ಗಳಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಪ್ರಮಾಣ ಉತ್ತಮವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗ ದಂತೆ ಕ್ರಮವಹಿಸಬೇಕು, ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸುವ ವ್ಯವಸ್ಥೆ ಜಿಲ್ಲೆಯಲ್ಲಿ ನಿರಂತರವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.