ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಅಮೃತವನ ರಚನೆಯ ಭಾಗವಾಗಿ ಕೆ.ವಿ.ಕ್ಯಾಂಪಸ್‌ನಲ್ಲಿ ಒಂದೇ ದಿನ 8 ಸಾವಿರ ಸಸಿನಾಟಿಗೆ ಜಿಲ್ಲಾ ನ್ಯಾ.ರಾಮಲಿಂಗೇಗೌಡ ಚಾಲನೆ

ಜಿಲ್ಲೆಯಲ್ಲಿ ಹತ್ತರು ವರ್ಷಗಳಿಂದ ಅಂತರ್ಜಲ ಮಟ್ಟ ಸಾವಿರಾರು ಅಡಿಗೆ ಕುಸಿದಿರುವುದು ಕಳವಳ ಕಾರಿ ಸಂಗತಿಯಾಗಿದೆ. ಇದರಿಂದಾಗಿ ಜನಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿರುವಷ್ಟೇ ಅಲ್ಲದೆ ಜನತೆ ಕೂಡ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಪರಿಸರ ಸಂರಕ್ಷಣೆಯ ಮೂಲಕ ಮಳೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಮಿಯವಾಕಿ ಮಾದರಿಯ ಅರಣ್ಯೀ ಕರಣಕ್ಕೆ ಆದ್ಯತೆ ನೀಡಲಾಗಿದೆ

ಒಂದೇ ದಿನ 8 ಸಾವಿರ ಸಸಿನಾಟಿಗೆ ಜಿಲ್ಲಾ ನ್ಯಾ.ರಾಮಲಿಂಗೇಗೌಡ ಚಾಲನೆ

ಅಮೃತವನ ರಚನೆಯ ಭಾಗವಾಗಿ ಕೆ.ವಿ.ಕ್ಯಾಂಪಸ್‌ನಲ್ಲಿ ಒಂದೇ ದಿನ 8 ಸಾವಿರ ಸಸಿನಾಟಿಗೆ ಮಂಗಳವಾರ ಜಿಲ್ಲಾ ನ್ಯಾಯಧೀಶ ರಾಮಲಿಂಗೇಗೌಡ ಚಾಲನೆ ನೀಡಿದರು. -

Profile
Ashok Nayak Jun 23, 2026 6:46 PM

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಅಂತರ್ಜಲ ಮಟ್ಟ, ಮಳೆಯ ಕೊರತೆ ಮತ್ತು ಹೆಚ್ಚುತ್ತಿರುವ ನೀರಿನ ಬವಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಪಾನಿನ ಮಿಯವಾಕಿ ಮಾದರಿಯ ಅಮೃತವನ ಅರಣ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಕಾರ್ಯ ಸಾಧನೆಗೆ ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಲಿಂಗೇಗೌಡ(Principal District and Sessions Judge Ramalingegowda) ತಿಳಿಸಿದರು.

ನಗರದ ಹೊರವಲಯದ ಕೆ.ವಿ. ಕ್ಯಾಂಪಸ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ದರೆ ಫೌಂಡೇಶನ್ ಬೆಂಗಳೂರು ಹಾಗೂ ಕೆ.ವಿ. ಮತ್ತು ಪಂಚಗಿರಿ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಯಂಪ್ರೇರಿತ ಸಸಿ ನೆಡುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಅಂತರ್ಜಲ ಮಟ್ಟ ಸಾವಿರಾರು ಅಡಿಗೆ ಕುಸಿದಿರುವುದು ಕಳವಳ ಕಾರಿ ಸಂಗತಿಯಾಗಿದೆ. ಇದರಿಂದಾಗಿ ಜನಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿ ರುವಷ್ಟೇ ಅಲ್ಲದೆ ಜನತೆ ಕೂಡ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಪರಿಸರ ಸಂರಕ್ಷಣೆಯ ಮೂಲಕ ಮಳೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಮಿಯವಾಕಿ ಮಾದರಿಯ ಅರಣ್ಯೀಕರಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಅರಣ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ದಲಿತರ ಭೂಮಿ ವಿವಾದ ತಾರಕಕ್ಕೆ: ಜೂ.29ರಂದು ಜಿಲ್ಲಾವ್ಯಾಪಿ ಹೋರಾಟದ ಎಚ್ಚರಿಕೆ

ಪರಿಸರ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ನೆಟ್ಟು ಸಮರ್ಪಕವಾಗಿ ಪೋಷಿಸಿದರೆ ಭವಿಷ್ಯದಲ್ಲಿ ನೀರಿನ ಬಿಕ್ಕಟ್ಟು ತಗ್ಗಿಸುವ ಜೊತೆಗೆ ಹಸಿರು ವಾತಾವರಣ ನಿರ್ಮಾಣಕ್ಕೂ ಸಹಕಾರಿಯಾಗಲಿದೆ. ಜನಜಾನುವಾರು ಗಳಷ್ಟೆ ಅಲ್ಲದೆ ಪಶು ಪಕ್ಷಿ ಕ್ರಿಮಿ ಕೀಟಗಳಿಗೂ ಆಶ್ರಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಅಮೃತವನ ನಿರ್ಮಾಣದ ಭಾಗವಾಗಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಈಗಾಗಲೇ 25 ಸಾವಿರಕ್ಕೂ ಹೆಚ್ಚು ಸಸಿಗಳನ್ನು ವಿವಿಧ ಪ್ರದೇಶಗಳಲ್ಲಿ ನೆಡಲಾಗಿದ್ದು, ಅವುಗಳ ಪಾಲನೆ ಮತ್ತು ಪೋಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮುಂಗಾರು ಅವಧಿ ಮುಕ್ತಾಯ ಗೊಳ್ಳುವ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಪರಿಸರ ಸಮತೋಲಕ್ಕೆ ಕಾರಣವಾಗುವ ಈ ಮಹತ್ಕಾರ್ಯದಲ್ಲಿ ಸರ್ಕಾರಿ ಇಲಾಖೆ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು ಮತ್ತು ನಾಗರೀಕರು ಒಗ್ಗಟ್ಟಿನಿಂದ ಕೈಜೋಡಿಸ ಬೇಕೆಂದು ಅವರು ಮನವಿ ಮಾಡಿದರು.

ಅರಣ್ಯ ಸಂವರ್ಧನೆ ಕೇವಲ ಅರಣ್ಯ ಇಲಾಖೆ ಅಥವಾ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ತನ್ನದೇ ಆದ ಕೊಡುಗೆ ನೀಡಬೇಕು. ಇಂತಹ ಸಮೂಹ ಪ್ರಯತ್ನಗಳಿಂದ ಮಾತ್ರ ಹಸಿರು ಚಿಕ್ಕಬಳ್ಳಾಪುರ ನಿರ್ಮಾಣದ ಕನಸು ನನಸಾಗಲಿದೆ ಎಂದು ಹೇಳಿದರು.

cbpm3miyavaki

ಕೆ.ವಿ. ಮತ್ತು ಪಂಚಗಿರಿ ದತ್ತಿಗಳ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಮಾತನಾಡಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ರಾಜ್ಯಾದ್ಯಂತ 5 ಕೋಟಿ ಸಸಿಗಳನ್ನು ನೆಡುವ ಅಭಿಯಾನ ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಗೊಂಡಿರುವ 5 ಲಕ್ಷ ಸಸಿ ನಾಟಿ ಮಾಡುವ ಈ ಕಾರ್ಯಕ್ರಮ ವಿಶೇಷ ಮಹತ್ವ ಪಡೆದಿದೆ. ಒಂದೇ ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಮೂರು ವರ್ಷಗಳ ಕಾಲ ಸಮರ್ಪಕವಾಗಿ ಪೋಷಿಸಿದರೆ ದಟ್ಟವಾದ ಅರಣ್ಯ ನಿರ್ಮಾಣವಾಗಲಿದೆ,ಇದು ಸ್ಥಳೀಯ ಹವಾಮಾನ, ಜೀವ ವೈವಿಧ್ಯತೆ ಮತ್ತು ಭೂಗರ್ಭ ಜಲಮಟ್ಟ ಸುಧಾರಣೆಗೆ ಸಹಕಾರಿ ಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ಪರಿಸರ ಹೋರಾಟಗಾರ ಗುಂಪುಮರದ ಆನಂದ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ವಕೀಲರು ಹಾಗೂ ಸಾರ್ವಜನಿಕ ರು ಭಾಗವಹಿಸಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪವನ್ನು ಪುನರುಚ್ಚರಿಸಿದರು.

ಕೆ.ವಿ ಆಂಗ್ಲಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ.ಶಿಲ್ಪ ಅವರೊಂದಿಗೆ ಗಿಡ ನಾಟಿ ಕಾರ್ಯದಲ್ಲಿ ಭಾಗವಹಿಸಿ ನೆರೆದಿದ್ದವರ ಆಕರ್ಷಣೆಗೆ ಪಾತ್ರವಾದರು.