ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನ ಕಾರ್ಯ ಕ್ರಮದ ಉದ್ಘಾಟನಾ ಸಮಾರಂಭವನ್ನು ಫೆ.10ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಬಾಗೇಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ
ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಫೆ.10ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಬಾಗೇಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯ ಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾದ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾ ರ್ಜುನ ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಬಾಗೇಪಲ್ಲಿ ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ ವಹಿಸ ಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕ ಪಿ.ಇ.ಪ್ರದೀಪ್ ಈಶ್ವರ್, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕ ಬಳ್ಳಾಪುರ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಪುರಸಭೆ ಅಧ್ಯಕ್ಷ ಎ. ಶ್ರೀನಿವಾಸ್ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಜೆ. ರವಿಶಂಕರ್, ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾ ಧಿಕಾರಿ ಡಾ. ಎನ್.ಮಂಜುಳ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯ ದರ್ಶಿ ಡಾ. ಶಮ್ಲಾ ಇಕ್ಬಾಲ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ. ಮಹೇಶ್ ಬಿ. ಶಿರೂರು, ತೋಟಗಾರಿಕೆ ನಿರ್ದೇಶಕ ಡಾ. ಜಿ.ಟಿ. ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮೊಹಮ್ಮದ ಪರವೇಜ ಬಂಥನಾಳ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಂ.ಆರ್. ಶಿವಣ್ಣ, ಬಾಗೇಪಲ್ಲಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ತಿಮ್ಮಂಪಲ್ಲಿ ಚೌಡರೆಡ್ಡಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಎಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳು, ಎಲ್ಲಾ ರೈತ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.