MY Bharat: ಮಾದಕ ವ್ಯಸನ ಮುಕ್ತ ಯುವಜನತೆಯಿಂದ ವಿಕಸಿತ ಭಾರತ ನಿರ್ಮಾಣ ಸಾಧ್ಯ: ಮಹೇಂದ್ರ ರೆಡ್ಡಿ
15 ರಿಂದ 29 ವರ್ಷದೊಳಗಿನ ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯಕ್ಕೂ ಧಕ್ಕೆಯಾಗುತ್ತದೆ. ಹೀಗಾಗಿ ‘ನಶಾ ಮುಕ್ತ ಯುವಜನತೆ, ವಿಕಸಿತ ಭಾರತ’ ಎಂಬ ಸಂಕಲ್ಪದೊಂದಿಗೆ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು
-
ಚಿಕ್ಕಬಳ್ಳಾಪುರ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸು ವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಯುವಶಕ್ತಿಯೇ ದೇಶದ ನಿಜವಾದ ಸಂಪತ್ತಾಗಿದ್ದು, ಯುವಕರು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ವಿಕಸಿತ ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಯುವಜನ ಅಧಿಕಾರಿ ಎ.ಮಹೇಂದ್ರ ರೆಡ್ಡಿ ಕರೆ ನೀಡಿದರು.
ನಗರದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈ ಭಾರತ್ (MY Bharat) ಚಿಕ್ಕಬಳ್ಳಾಪುರ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ವಿಕಸಿತ ಭಾರತ ಯುವ ಸಂಸತ್ತು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
15 ರಿಂದ 29 ವರ್ಷದೊಳಗಿನ ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿ ಣಾಮ ಬೀರುವುದಲ್ಲದೆ, ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯಕ್ಕೂ ಧಕ್ಕೆಯಾಗುತ್ತದೆ. ಹೀಗಾಗಿ ‘ನಶಾ ಮುಕ್ತ ಯುವಜನತೆ, ವಿಕಸಿತ ಭಾರತ’ ಎಂಬ ಸಂಕಲ್ಪದೊಂದಿಗೆ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದು, ಅಲ್ಲಿ ವಿಜೇತರಾದವರಿಗೆ ಜನವರಿ 12ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಯುವ ದಿನಾಚರಣೆ ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಜು ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ಮೈಗೂಡಿಸಿಕೊಳ್ಳಬೇಕು. ಮಾದಕ ವ್ಯಸನಗಳಿಂದ ದೂರವಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಪ್ರತಿಭೆ, ಜ್ಞಾನ ಮತ್ತು ಕೌಶಲ್ಯಗಳನ್ನು ದೇಶದ ಪ್ರಗತಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
‘ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ’ ವಿಷಯದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ವಿಚಾರಧಾರೆ ಹಾಗೂ ವಾಕ್ಚಾತುರ್ಯ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ನಾರಾಯಣಸ್ವಾಮಿ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ರಮೇಶ್, ಮೈ ಭಾರತ್ ಜಿಲ್ಲಾ ಯುವಜನ ಅಧಿಕಾರಿ ಎ.ಮಹೇಂದ್ರ ರೆಡ್ಡಿ, ಸಿಬ್ಬಂದಿ ಪ್ರವೀಣ್ ಸೇರಿದಂತೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.