ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Youth Festival: ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ; ಕಲೆ, ಸಾಹಿತ್ಯ, ಸಂಸ್ಕೃತಿಯಲ್ಲಿ ತೊಡಗಿಸಿಕೊಳ್ಳಲು ಯುವಜನರಿಗೆ ಕರೆ

ಯುವಜನೋತ್ಸವವು ಯುವ ಸಮೂಹದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಜಾನಪದ ಕಲೆಗಳ ಮಹತ್ವ, ಸಂಸ್ಕೃತಿಯ ಅಸ್ಮಿತೆ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಅಗತ್ಯವನ್ನು ಅರಿತುಕೊಳ್ಳಬೇಕು

ಚಿಕ್ಕಬಳ್ಳಾಪುರ : ಯುವಜನರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರ ಸೃಜನಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಯುವಜನೋತ್ಸವ ಆಯೋಜಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು.

ನಗರದ ಸರ್. ಎಂ.ವಿ. ಜಿಲ್ಲಾ ಕ್ರೀಡಾಂಗಣದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ( Youth Festival ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವಜನೋತ್ಸವವು ಯುವ ಸಮೂಹದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ವದ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಜಾನಪದ ಕಲೆಗಳ ಮಹತ್ವ, ಸಂಸ್ಕೃತಿಯ ಅಸ್ಮಿತೆ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಅಗತ್ಯವನ್ನು ಅರಿತುಕೊಳ್ಳಬೇಕು ಎಂದರು.

ಇದನ್ನೂ ಓದಿ: Chikkaballapur News: ವಿದ್ಯಾರ್ಥಿಗಳಲ್ಲಿ ಸಂಸದೀಯ ಮೌಲ್ಯ, ನಾಯಕತ್ವ ಗುಣ ಬೆಳೆಸಲು ಅಣಕು ಯುವ ಸಂಸತ್ ಸಹಕಾರಿ: ನ್ಯಾ. ರಾಮಲಿಂಗೇಗೌಡ

ಯುವಜನರು ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅನುಕೂಲವಾಗುತ್ತದೆ. ಸ್ಪರ್ಧೆಯಲ್ಲಿ ಗೆಲುವು ಸಾಧಿಸುವುದಕ್ಕಿಂತ ಭಾಗವಹಿಸುವುದು ಮುಖ್ಯ. ಪ್ರತಿಯೊಬ್ಬರೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ

ಯುವಜನೋತ್ಸವದ ಅಂಗವಾಗಿ ಜಾನಪದ ನೃತ್ಯ, ಜಾನಪದ ಗೀತೆ, ಚಿತ್ರಕಲೆ ಹಾಗೂ ಬೀದಿ ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇದರೊಂದಿಗೆ ‘ನಶಾಮುಕ್ತ ಯುವ’ ವಿಷಯದ ಕುರಿತು ಪ್ರಾದೇಶಿಕ ಭಾಷೆ, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಕವಿತೆ ರಚಿಸುವ ಸ್ಪರ್ಧೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿ ಣಾಮಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವ ತಿಳಿಸುವುದು ಇದರ ಉದ್ದೇಶವಾಗಿದೆ.

ಯುವಜನರು ತಮ್ಮ ಕಲಾತ್ಮಕ ಪ್ರತಿಭೆ, ಸಾಹಿತ್ಯಾಸಕ್ತಿ ಮತ್ತು ಸೃಜನಶೀಲ ಆಲೋಚನೆಗಳನ್ನು ಸ್ಪರ್ಧೆಗಳ ಮೂಲಕ ಹೊರಹಾಕಲು ಯುವಜನೋತ್ಸವ ಉತ್ತಮ ಅವಕಾಶ ಕಲ್ಪಿಸಿದೆ. ಸರ್ಕಾರದ ಆಶಯದಂತೆ ಯುವಜನರ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕ ವಾಗಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಅಧಿಕಾರಿ ಹಾಗೂ ತಹಶೀಲ್ದಾರ್ ಮಹೇಶ್ ಪಾತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾಳುಗಳು ಉಪಸ್ಥಿತರಿದ್ದರು.