Karnataka State Junior Athletics Championship: ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಜಿಲ್ಲಾ ತಂಡ ಆಯ್ಕೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇದೇ ತಿಂಗಳ 11 ಮತ್ತು 12ರಂದು ನಡೆಯಲಿರುವ ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ 14, 16, 18 ಹಾಗೂ 20 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ತಂಡವನ್ನು ಆಯ್ಕೆ ಮಾಡಲಾಗುತ್ತಿದೆ. ಜಿಲ್ಲಾ ಮಟ್ಟದ ಆಯ್ಕೆ ಸ್ಪರ್ಧೆಯು ಆ.6ರಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯ ಲಿದ್ದು, ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಲಾಗಿದೆ.
-
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇದೇ ತಿಂಗಳ 11 ಮತ್ತು 12ರಂದು ನಡೆಯಲಿರುವ ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ 14, 16, 18 ಹಾಗೂ 20 ವರ್ಷದೊಳಗಿನ ಬಾಲಕ ಮತ್ತು ಬಾಲಕಿ ಯರ ತಂಡವನ್ನು ಆಯ್ಕೆ ಮಾಡಲಾಗುತ್ತಿದೆ.
ಜಿಲ್ಲಾ ಮಟ್ಟದ ಆಯ್ಕೆ ಸ್ಪರ್ಧೆಯು ಆ.6ರಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಭಾಗವಹಿಸು ವಂತೆ ಕೋರಲಾಗಿದೆ.
ಇದನ್ನೂ ಓದಿ: Dasara sports meet 2025: ಕುಸ್ತಿಪಟು ವಿನೇಶಾ ಫೋಗಟ್ ಅತಿಥಿ
ಆಯ್ಕೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು **ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ)**ನಲ್ಲಿ ನೋಂದಾಯಿತ ವಿಶಿಷ್ಟ ಗುರುತು ಸಂಖ್ಯೆ (ಯುಐಡಿ) ಹಾಗೂ ಜನ್ಮ ದಿನಾಂಕ ದೃಢೀಕರಿಸುವ ದಾಖಲೆಯನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ (ಮೊ. 97406 15534) ಹಾಗೂ ಜಯಂತಿ ಗ್ರಾಮ ನಾರಾಯಣಸ್ವಾಮಿ (ಮೊ. 98971 823974) ಅವರನ್ನು ಸಂಪರ್ಕಿಸಬಹುದು.