Celebrations in Chikkaballapur: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ : ಚಿಕ್ಕಬಳ್ಳಾಪುರದಲ್ಲಿ ಸಂಭ್ರಮಾಚರಣೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ವನ್ನು ಕಾಂಗ್ರೆಸ್ ಕಚೇರಿ ಎದುರು ಎಲ್‌ಇಡಿ ಪರದೆಯ ಮೂಲಕ ಸಾರ್ವಜನಿಕರಿಗೆ ನೇರಪ್ರಸಾರ ಮಾಡಲಾಯಿತು. ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
-
ಚಿಕ್ಕಬಳ್ಳಾಪುರ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್( D.K. Shivakumar as the 25th Chief Minister) ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಹಾಗೂ ಅಭಿಮಾನಿಗಳು, ಒಕ್ಕಲಿಗ ಸಮುದಾಯದ ಮುಖಂಡರು ಬುಧವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಾ ಚರಣೆ ನಡೆಸಿ ಒಳ್ಳೆಯದಾಗಲಿ ಎಂದು ಹರಕೆ ತೀರಿಸಿದರು.
ನಗರ ಹೊರವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಡಿ.ಕೆ.ಶಿವಕುಮಾರ್ ಅವರ ಹೆಸರಿನಲ್ಲಿ ಅರ್ಚನೆ ಮಾಡಿಸಿ, ಇವರ ನೇತೃತ್ವದ ಸರಕಾರಕ್ಕೆ ಒಳ್ಳೆಯದಾಗಲಿ ಎಂದು ಬೇಡಿದರು.ನಂತರ ಅಭಿಮಾನಿಗಳ ಸಮ್ಮುಖದಲ್ಲಿ ಈಡುಗಾಯಿ ಸೇವೆ ಪೂರೈಸಿದ ನಂತರ ಜನತೆಗೆ ಸಿಹಿ ವಿತರಣೆಯ ಕಾರ್ಯ ಕ್ರಮಗಳು ಜರುಗಿದವು.
ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಮುಖಂಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್. ರಮೇಶ್ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿ ಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: DK Shivakumar: ಸಾಷ್ಟಾಂಗ ನಮಸ್ಕಾರ ಮಾಡಿ ಶಕ್ತಿಸೌಧಕ್ಕೆ ಡಿಕೆಶಿ ಎಂಟ್ರಿ; ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ
ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷ ಸಂಕಷ್ಟಕ್ಕೆ ಸಿಲುಕಿದ ಪ್ರತಿಯೊಂದು ಸಂದರ್ಭದಲ್ಲೂ ಟ್ರಬಲ್ ಶೂಟರ್‌ನಂತೆ ಕಾರ್ಯನಿರ್ವಹಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು 135 ಶಾಸಕರ ಬಲದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿ ಯಾಗಿದ್ದಾರೆ. ಅವರ ಪಕ್ಷನಿಷ್ಟ ಸೇವೆ ಮತ್ತು ನಾಯಕತ್ವವನ್ನು ಪರಿಗಣಿಸಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಹರಕೆ ಹೊತ್ತಿದ್ದೆವು. ಇದೀಗ ಅದು ಈಡೇರಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೃತಜ್ಞತೆ ಅರ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಹಿಂದಿನAತೆಯೇ ಇನ್ನಷ್ಟು ಬಲಿಷ್ಠವಾಗಲಿದೆ. ಡಿ.ಕೆ.ಶಿವಕುಮಾರ್ ಅವರು ಜನಪರ ಮತ್ತು ಅಭಿವೃದ್ಧಿ ಪರ ಆಡಳಿತದ ಮೂಲಕ 2028ರ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂಬುದು ಜಿಲ್ಲೆಯ ಜನರ ಒತ್ತಾಯವಾಗಿದೆ. ಪಕ್ಷ ಯಾರಿಗೆ ಅವಕಾಶ ನೀಡಿದರೂ ಅದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.
ನೇರಪ್ರಸಾರ ವೀಕ್ಷಿಸಿ ಸಂಭ್ರಮ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ವನ್ನು ಕಾಂಗ್ರೆಸ್ ಕಚೇರಿ ಎದುರು ಎಲ್‌ಇಡಿ ಪರದೆಯ ಮೂಲಕ ಸಾರ್ವಜನಿಕರಿಗೆ ನೇರ ಪ್ರಸಾರ ಮಾಡಲಾಯಿತು. ಬಳಿಕ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಸುರೇಶ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಜನಪರ ಆಡಳಿತ ಮುಂದುವರಿಯಲಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದ್ದು, 2028ರಲ್ಲಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಮುಖಂಡರಾದ ಮಂಗಳಾ ಪ್ರಕಾಶ್ ಮಾತನಾಡಿ, ಪಕ್ಷದ ಸಾಮಾನ್ಯ ಕಾರ್ಯ ಕರ್ತರಿಗೂ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಯಂತಹ ಮಹತ್ವದ ಹುದ್ದೆ ನೀಡಲಿದೆ ಎಂಬ ಸಂದೇಶವನ್ನು ಪಕ್ಷವು ಜಗತ್ತಿಗೆ ನೀಡಿದೆ. 27ನೇ ವಯಸ್ಸಿಗೆ ಶಾಸಕರಾಗಿ ಆಯ್ಕೆಯಾದ ಇವರು ಮಂತ್ರಿಯೂ ಆಗಿ ಕೆಲಸ ಮಾಡಿದ್ದಾರೆ. ಪಕ್ಷಕ್ಕಾಗಿ ಶ್ರಮಿಸಿದವರಿಗೆ ಉನ್ನತ ಸ್ಥಾನಮಾನ ದೊರೆಯಲಿದೆ ಎಂಬುದು ಇದರಿಂದ ಮನವರಿಕೆ ಆಗಿದೆ. ಇವರ ಏಳಿಗೆ ಸಹಿಸದೆ ಬಿಜೆಪಿ ಸರಕಾರ ದ್ವೇಷದಿಂದ ತಿಹಾರ್ ಜೈಲಿಗೆ ಹಾಕಿತ್ತು. ಆದರೂ ಹೆದರದೆ ಬಂಡೆತರ ನಿಂತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜನಾರ್ಧನ್, ವಕೀಲ ವಿನೋದ್, ಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.