ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ಗಣೇಶೋತ್ಸವಕ್ಕೆ ಅನಗತ್ಯ ಷರತ್ತು ವಿಧಿಸಬೇಡಿ: ಹಿಂದೂ ಸಂಘಟನೆಗಳ ಆಗ್ರಹ

ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಧಾರ್ಮಿಕ ಹಾಗೂ ಶಾಸ್ತ್ರೋಕ್ತ ವಿಧಿ–ವಿಧಾನಗಳ ಮೂಲಕ ಗಣೇಶೋತ್ಸವ ಆಚರಿಸಲು ಮುಕ್ತ ಅವಕಾಶ ಕಲ್ಪಿಸಬೇಕು. ವರ್ಷಕ್ಕೊಮ್ಮೆ ನಡೆಯುವ ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧಗಳನ್ನು ವಿಧಿಸಬಾರದು ಎಂದು ಆಗ್ರಹಿಸಿದರು.

ಗೌರಿಬಿದನೂರು: ಗಣೇಶೋತ್ಸವ(Ganeshotsava) ಸೇರಿದಂತೆ ಹಿಂದೂ ಧಾರ್ಮಿಕ ಹಬ್ಬಗಳ ಆಚರಣೆಗೆ ಏಕಗವಾಕ್ಷಿ ಪದ್ಧತಿ ಹೆಸರಿನಲ್ಲಿ ಕಠಿಣ ಷರತ್ತುಗಳನ್ನು ವಿಧಿಸಿ ಸಂಘಟಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್(Vishwa Hindu Parishad) ಹಾಗೂ ಹಿಂದೂ ಜಾಗರಣ ವೇದಿಕೆ(Hindu Jagarana Vedike) ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಧಾರ್ಮಿಕ ಹಾಗೂ ಶಾಸ್ತ್ರೋಕ್ತ ವಿಧಿ–ವಿಧಾನಗಳ ಮೂಲಕ ಗಣೇಶೋತ್ಸವ ಆಚರಿಸಲು ಮುಕ್ತ ಅವಕಾಶ ಕಲ್ಪಿಸಬೇಕು. ವರ್ಷಕ್ಕೊಮ್ಮೆ ನಡೆಯುವ ಗಣೇಶೋ ತ್ಸವಕ್ಕೆ ಅನಗತ್ಯ ನಿರ್ಬಂಧಗಳನ್ನು ವಿಧಿಸಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: Gauribidanur News: ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ: ಮಂಜುನಾಥ್ ಆರೋಪ

ಹಿಂದೂ ಜಾಗರಣ ವೇದಿಕೆ ತಾಲೂಕು ಸಂಯೋಜಕ ನವೀನ್ ಕುಮಾರ್ ಎಸ್.ವಿ. ಮಾತನಾಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಲು ಹಿಂದೂ ಸಮಾಜ ಸಿದ್ಧವಿದೆ. ಆದರೆ ನಿಯಮಗಳು ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನ್ವಯವಾಗಬೇಕು. ಒಂದು ಸಮುದಾಯದ ಹಬ್ಬಗಳಿಗೆ ಮಾತ್ರ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ತಾರತಮ್ಯ ಮಾಡಬಾರದು ಎಂದು ಒತ್ತಾಯಿಸಿದರು.

ಗಣೇಶೋತ್ಸವ ಬಂದಾಗ ಮಾತ್ರ ಶಾಂತಿ ಸಭೆ, ಅನುಮತಿ, ನಿಯಮ ಹಾಗೂ ಷರತ್ತುಗಳ ಕುರಿತು ಹೆಚ್ಚು ಒತ್ತು ನೀಡಲಾಗುತ್ತಿದೆ. ಶಬ್ದ, ವಾಯು ಹಾಗೂ ಜಲ ಮಾಲಿನ್ಯದ ನಿಯಮಗಳು ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೂ ಸಮಾನವಾಗಿ ಅನ್ವಯವಾಗಬೇಕು. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು ಎಂದು ಹೇಳಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸಂಘಟಕರಿಗೆ ಅನಗತ್ಯ ಕಿರಿಕಿರಿ ಉಂಟುಮಾಡಬಾರದು. ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡದೆ ಸಮಾನ ಕಾನೂನು ಜಾರಿಗೊಳಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಯಾನಂದ್, ವಕೀಲ ಧನಂಜಯ್, ಹಿಂದೂ ಜಾಗರಣ ವೇದಿಕೆ ನಗರ ಸಂಯೋಜಕ ವೆಂಕಟೇಶ್ ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.