ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ: ಪ್ರಾಂಶುಪಾಲ ಇಂತಿಯಾಜ್ ಅಭಿಮತ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರು ತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯ ಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳು ಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು

ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ

ಅಪಘಾತ, ತೀವ್ರ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗೆ ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ. ಹೀಗಾಗಿ ಪ್ರತಿಯೊಬ್ಬರು ಸ್ವಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ನ್ಯಾಷನಲ್ ಪದವಿ ಕಾಲೇಜಿನ  ಪ್ರಾಂಶುಪಾಲ ಇಂತಿಯಾಜ್ ತಿಳಿಸಿದರು.

Ashok Nayak Ashok Nayak Aug 21, 2025 9:25 PM

ಬಾಗೇಪಲ್ಲಿ: ಅಪಘಾತ, ತೀವ್ರ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗೆ ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ. ಹೀಗಾಗಿ ಪ್ರತಿಯೊಬ್ಬರು ಸ್ವಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ನ್ಯಾಷನಲ್ ಪದವಿ ಕಾಲೇಜಿನ ಪ್ರಾಂಶುಪಾಲ ಇಂತಿಯಾಜ್ ತಿಳಿಸಿದರು.

ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಪದವಿ ಕಾಲೇಜು ಹಾಗು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನ ಹಳ್ಳಿ ಶ್ರೀ ಸತ್ಯ ಸಾಯಿ ಆಸ್ಪತ್ರೆಯ ಸಹಯೋಗದೊಂದಿಗೆ ನ್ಯಾಷನಲ್ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Chikkaballapur News: ನಕಲಿ ವೈದ್ಯರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯ ಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತ ದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡು ವುದು ಅತಿ ಅಗತ್ಯವಾಗಿದ್ದು, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಈ ಶಿಬಿರದಲ್ಲಿ 104 ಯೂನಿಟ್ ರಕ್ತವನ್ನು ನೀಡಿದರು. ಈ ಶಿಬಿರದಲ್ಲಿ ಪಾಲ್ಗೊಂಡು ಎಲ್ಲಾ ರಕ್ತ ಧಾನಿಗಳಿಗೆ ಈ ಶಿಬಿರದಲ್ಲಿ ಪ್ರಸಸ್ತಿ ಪತ್ರ ನೀಡಲಾಯಿತು, ಶಿಬಿರದಲ್ಲಿ ಎನ್.ಸಿ.ಸಿ. ವಿಧ್ಯಾರ್ಥಿಗಳು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೋಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಶೈಲಾ, ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಆಸ್ಪತ್ರೆಯ ವ?ದ್ಯರಾದ ಡಾ, ಮಾನಸ, ಮಹೇಶ್, ಶಶಿಕುಮಾರ್, ಸುನಿಲ್, ವಿಲಾಸ್, ಮುಬೀನ್, ಟಿ.ಎ. ಪ್ರತಾಪ್, ಕೇಶವ, ನರೇಂದ್ರ, ಮೌನಿಕಾ, ಶೃತಿ, ದಿವ್ಯ, ಶಿವಕುಮಾರ್, ಚಂದ್ರಶೇಖರ ಸೇರಿದಂತೆ ನ್ಯಾಷನಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗು ಎನ್.ಸಿ.ಸಿ. ವಿದ್ಯಾರ್ಥಿಗಳು ಉಪನ್ಯಾಸಕರು ಹಾಜರಿದ್ದರು.