ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ದುಶ್ಚಟಗಳಿಗೆ ದಾಸರಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಮುನಿಕೃಷ್ಣ

ಸಾಮಾನ್ಯವಾಗಿ ಡ್ರಗ್ಸ್ ಎಂದ ಕೂಡಲೇ ಗಾಂಜಾ, ಆಫೀಮು ಎಂದುಕೊಳ್ಳುತ್ತಿರಾ. ಆದರೆ ಡ್ರಗ್ಸ್ ಗಳಲ್ಲಿ ಅನೇಕ ವಿಧಗಳಿವೆ. ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಾದ ತಾವು ಅರಿವು ಪಡೆದುಕೊಂಡು ಮತ್ತಷ್ಟು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ದುಶ್ಚಟಗಳಿಗೆ ದಾಸರಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. -

Profile
Ashok Nayak Jun 26, 2026 6:02 AM

ಗುಡಿಬಂಡೆ: ಇಂದಿನ ಕಾಲದಲ್ಲಿ ಸಾಕಷ್ಟು ಯುವಜನತೆ ಮೋಜು ಮಸ್ತಿಯ ಹೆಸರಿನಲ್ಲಿ ಮಾದಕ ವಸ್ತುಗಳ ಸೇವನೆ ಮಾಡುತ್ತಾ ತಮ್ಮ ಅಮೂಲ್ಯವಾದ ಜೀವನವನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಅಂತಹ ದುಶ್ಚಟಗಳಿಗೆ ದಾಸರಾಗದೇ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಅವರು, ಯುವಜನತೆ ದೇಶದ ಆಸ್ತಿ. ಆದರೆ ಇಂದಿನ ಯುವಜನತೆ ತಪ್ಪು ಹಾದಿಗಳನ್ನು ಹಿಡಿದು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಮಾದಕ ವಸ್ತುಗಳ ವ್ಯಸನಿ ಗಳಾಗಿ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ತಮ್ಮ ಪ್ರಾಣವನ್ನು ಕಳೆದು ಕೊಂಡು ತಮ್ಮನ್ನು ನಂಬಿಕೊಂಡಿರುವ ಕುಟುಂಬವನ್ನು ಬೀದಿಗೆ ತರುತ್ತಿದ್ದಾರೆ. ಸಾಮಾನ್ಯವಾಗಿ ಡ್ರಗ್ಸ್ ಎಂದ ಕೂಡಲೇ ಗಾಂಜಾ, ಆಫೀಮು ಎಂದುಕೊಳ್ಳುತ್ತಿರಾ. ಆದರೆ ಡ್ರಗ್ಸ್ ಗಳಲ್ಲಿ ಅನೇಕ ವಿಧಗಳಿವೆ. ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಾದ ತಾವು ಅರಿವು ಪಡೆದುಕೊಂಡು ಮತ್ತಷ್ಟು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: Gudibande News: ವಿದ್ಯುತ್ ಖಾಸಗೀಕರಣ ವಿರೋಧಿಸಿ ಗುಡಿಬಂಡೆಯಲ್ಲಿ ರೈತ ಸಂಘದ ಪ್ರತಿಭಟನೆ

ಇನ್ನೂ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುವುದು ಮಾತ್ರವಲ್ಲ, ಅದರ ಸೇವನೆ ಕೂಡ ಕಾನೂನು ಪ್ರಕಾರ ಅಪರಾಧವಾಗಿದೆ. ಸಮಾಜದಲ್ಲಿ ಮಾದಕ ವಸ್ತುಗಳು ಹಾಗೂ ಮದ್ಯಪಾನ ನಿಯಂತ್ರಿಸದಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣ ಅಸಾಧ್ಯ. ಎಲ್ಲಾದರೂ ಮಾದಕ ವಸ್ತುಗಳ ಬಳಕೆ ಅಥವಾ ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ಮಾಡದೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಪಟ್ಟಣದ ಮುಖ್ಯ ರಸ್ತೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೊಲೀಸರು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಜಾಥ ನಡೆಸಿದರು. ಈ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‍ ಮುತ್ತುರಾಜ್, ರಮೇಶ್, ಸಿಬ್ಬಂದಿಯಾದ ನರೇಂದ್ರ ಸೇರಿದಂತೆ ಸಿಬ್ಬಂದಿ, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.