ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ: ನ್ಯಾ.ಎಸ್.ವಿ.ಕಾಂತರಾಜು

ಸಾಮಾನ್ಯವಾಗಿ ಶರೀರದ ಕಾಯಿಲೆಗಳಲ್ಲಿ ನಾನಾ ಬಗೆ ಇರುವಂತೆ ಮಾನಸಿಕ ಕಾಯಿಲೆಗಳಲ್ಲೂ ನಾನಾ ಬಗೆಗಳಿವೆ. ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ದು/ಮದ್ಯ ವ್ಯಸನ, ಬುದ್ದಿ ಮಾಂದ್ಯತೆ, ಮಕ್ಕಳಲ್ಲಿ ಕಂಡು ಬರುವ ನಡವಳಿಕೆ ದೋಷಗಳು ಮತ್ತಿತರ ಮನಸ್ಸಿನ ಕಾಯಿಲೆಗಳು, ಮನೋ ದೈಹಿಕ ಬೇನೆಗಳು ಸೇರಿದಂತೆ ಹಲವು ರೀತಿಯ ಮಾನಸಿಕ ರೋಗಗಳು ಇರುತ್ತವೆ.

ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ: ನ್ಯಾ.ಎಸ್.ವಿ.ಕಾಂತರಾಜು

-

Ashok Nayak Ashok Nayak Oct 11, 2025 12:23 AM

ಚಿಕ್ಕಬಳ್ಳಾಪುರ : ಮಾನಸಿಕ ರೋಗಿಗಳಿಗೆ ಉಚಿತ ಕಾನೂನು ನೆರವನ್ನು ಕಾನೂನು ಸೇವೆಗಳ ಪ್ರಾಧಿಕಾರದಿಂದ ನೀಡುವ ಸೌಲಭ್ಯವಿದೆ. ಅಲ್ಲದೇ ಯಾವುದೇ ನ್ಯಾಯಾಲಯದಲ್ಲಿ ಶುಲ್ಕವಿಲ್ಲದೆ ಉಚಿತವಾಗಿ ಅವರ ಪರವಾಗಿ ಪ್ರಕರಣವನ್ನು ನಡೆಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಂತರಾಜು.ಎಸ್.ವಿ. ತಿಳಿಸಿದರು. 

ತಾಲ್ಲೂಕಿನ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಚಿಕ್ಕಬಳ್ಳಾಪುರ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಾನಸಿಕ ರೋಗಿಗಳಿಗೆ ಆರೋಗ್ಯ ಸುಧಾರಿಸಲು ಉಚಿತ ಸಲಹೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಮಾನಸಿಕ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಪಡೆಯುವುದು ಅಗತ್ಯ ಎಂದರು.

ಇದನ್ನೂ ಓದಿ: Chief Minister Siddaramaiah: 2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯ ನಾಗರೀಕರರು ತಮ್ಮ ಮನಸ್ಸಿನ ಮೇಲೆ ಆಗುವ ಒತ್ತಡ, ಗೊಂದಲ, ನಿರಂತರ ಭಯ, ಆತಂಕವನ್ನು ಕೆಲವರು ನಿರ್ಲಕ್ಷ್ಯ ಮಾಡುತ್ತಾರೆ. ಇಂತಹ ನಿರ್ಲಕ್ಷ್ಯವನ್ನು ಮಾಡುವುದರಿಂದ ಹೆಚ್ಚಿನ ತೊಂದರೆಗೆ ಗುರಿಯಾಗುತ್ತಾರೆ. ಮಾನಸಿಕ ಆರೋಗ್ಯ ಮತ್ತು ಸಮಸ್ಯೆಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜೊತೆಗೆ ಮಾನಸಿಕ ಆರೋಗ್ಯ ಕುರಿತು ಅರಿವು ಮೂಡಿಸುವ ಹಾಗೂ ಮಾನಸಿಕ ರೋಗಕ್ಕೆ ತುತ್ತಾಗಿರುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸುವ, ಪರಿಹರಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಮಿತಿಯನ್ನು ರಚನೆ ಮಾಡಿಲಾಗಿದೆ. ಈ ಸಮಿತಿಯ ಮುಖಾಂತರ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಜನ ಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಈ ಎಲ್ಲಾ ಸೌಲಭ್ಯಗಳ ಕುರಿತು ಮಾನಸಿಕ ಅನಾರೋಗ್ಯಕ್ಕೆ ಒಳಗಾದ ವ್ಯಕ್ತಿಗಳ ಕುಟುಂಬದ ಸದಸ್ಯರು ಜಾಗೃತಿ ಹೊಂದಿ ಲಭ್ಯವಿರುವ ಕಾನೂನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಮಾನಸಿಕ ರೋಗಿಗಳಿಗೆ ಕೊಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ಮಾತನಾಡಿ, ಸಾಮಾನ್ಯವಾಗಿ ಶರೀರದ ಕಾಯಿಲೆಗಳಲ್ಲಿ ನಾನಾ ಬಗೆ ಇರುವಂತೆ ಮಾನಸಿಕ ಕಾಯಿಲೆಗಳಲ್ಲೂ ನಾನಾ ಬಗೆಗಳಿವೆ. ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ದು/ಮದ್ಯ ವ್ಯಸನ, ಬುದ್ದಿ ಮಾಂದ್ಯತೆ, ಮಕ್ಕಳಲ್ಲಿ ಕಂಡು ಬರುವ ನಡವಳಿಕೆ ದೋಷಗಳು ಮತ್ತಿತರ ಮನಸ್ಸಿನ ಕಾಯಿಲೆಗಳು, ಮನೋ ದೈಹಿಕ ಬೇನೆಗಳು ಸೇರಿದಂತೆ ಹಲವು ರೀತಿಯ ಮಾನಸಿಕ ರೋಗಗಳು ಇರುತ್ತವೆ. ಇಂತಹ ಮಾನಸಿಕ ಕಾಯಿಲೆಗಳನ್ನು ತಡೆಗಟ್ಟುವ ಮಾರ್ಗಗಳು, ಚಿಕಿತ್ಸಾ ಕ್ರಮಗಳನ್ನು ಹತ್ತಿರ ಸರ್ಕಾರಿ ಆಸ್ಪತ್ರೆಗಳ ತಜ್ಞವೈದ್ಯರ ಸಲಹೆ ಪಡೆದು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ.ಬಿ, ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ಡೈರೆಕ್ಟರ್ ಡಾ. ಎಂ.ಎಲ್. ಮಂಜುನಾಥ, ಮನೋ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಜಿ. ಹೇಮಂತ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಶಿವಕುಮಾರ್, ಮನೋವೈದ್ಯರಾದ ಡಾ. ಜಿ.ಹೇಮಂತ್ ಕುಮಾರ್, ಡಾ. ಎ. ಲಾವಣ್ಯ ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.