ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಡಾ.ಬಿ.ಆರ್.ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹೇಳಿಕೆ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅವರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ

-

Ashok Nayak
Ashok Nayak Dec 7, 2025 3:27 PM

ಬಾಗೇಪಲ್ಲಿ: ಅಸಮಾನತೆಯ ವಿರುದ್ಧ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟದ ಫಲವಾಗಿ ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಅವರ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿಯಾಗಿವೆ ಎಂದು ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು.

ಪಟ್ಟಣದ ಡಿ.ವಿ.ಜಿ.ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಥಳಿಗೆ ಮಾಲಾ ಅರ್ಪಣೆ ಮಾಡಿ ಮಾತನಾಡಿದರು.

ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅವರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

ಇದನ್ನೂ ಓದಿ: Bagepally News: ಕಸಾಪದಿಂದ ತಾಲ್ಲೂಕು ಮಟ್ಟದ ರಸಪ್ರಶ್ನೆ ಲಿಖಿತ ಪರೀಕ್ಷೆ ಕಾರ್ಯಕ್ರಮ

ಧ್ವನಿಯೇ ಇಲ್ಲದೆ ಬದುಕುತ್ತಿದ್ದ ಅಸಂಖ್ಯಾತ ಶೋಷಿತ ಸಮುದಾಯಗಳಿಗೆ ಗಟ್ಟಿ ಧ್ವನಿಯಾಗಿದ್ದ ಬಾಬಾ ಸಾಹೇಬರ ವಿಚಾರ ಧಾರೆಗಳ ಪುಟಗಳನ್ನು ತಿರುವಿ ಹೋದಂತೆ ಹೊಸ ಹೊಸ ವಿಚಾರಗಳು ,ಕಟು ಸತ್ಯಗಳು, ಬದುಕಿಗೆ ಪ್ರೇರಣೆ ತುಂಬುವ ಘಟನೆಗಳು ಸಿಗುತ್ತವೆ. ಹಾಗಾಗಿ ಅವರ ತತ್ವ ಮತ್ತು ಸಿದ್ಧಾಂತಗಳನ್ನು ಬದುಕಲ್ಲಿ ಅಳವಡಿಸಿಕೊಂಡು ಬಾಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ, ಸಮಾಜ ಕಲ್ಯಾಣ ಇಲಾಖೆ ಮಂಜುಳಾ, ವ್ಯವಸ್ಥಾಪಕ ನಾಗರಾಜು, ನಾರಾಯಣ ಸ್ವಾಮಿ ಅತಾವುಲ್ಲಾ, ಬಿ.ವಿ.ವೆಂಕಟರವಣ, ಕೋಟಪ್ಪ, ಪೈಪಾಳ್ಯ ರವಿ, ಜಯಂತ್, ಕಿರಣ್ ಕುಮಾರ್, ನರಸಿಂಹಪ್ಪ, ಆದಿ, ಗಂಗುಲಮ್ಮ ಹಾಗೂ ಸಾರ್ವಜನಿಕರು ಹಾಜರಿದ್ದರು.