ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Dr.M.C.Sudhakar: ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ: ಕನಂಪಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಾಧ್ಯಮಗಳೊಂದಿಗೆ ಮಾತನಾಡಿದ ಚಿಮುಲ್ ನಿರ್ದೇಶಕ ಊಲವಾಡಿ ಅಶ್ವಥ್‌ ನಾರಾಯಣ ಬಾಬು ಅವರು, ಡಾ.ಎಂ.ಸಿ.ಸುಧಾಕರ್ ಅವರು ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿ ಇಡೀ ರಾಜ್ಯದಲ್ಲೇ ಹಲವು ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಅವರ ಅವಧಿಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಯಶಸ್ವಿಯಾಗಿ ಇಲಾಖೆಯನ್ನು ಮುನ್ನಡೆಸಿದ್ದಾರೆ.

ಡಾ.ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಶಾಸಕ ಡಾ.ಎಂ. ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ,ಚಿಂತಾಮಣಿ ನಗರದ ಹೊರವಲಯದ ಕನಂಪಲ್ಲಿಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕಾಂಗ್ರೆಸ್ ಕಾಶಾಸಕ ಡಾ.ಎಂ. ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ,ಚಿಂರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. -

Profile
Ashok Nayak Jun 23, 2026 7:32 PM

ಚಿಂತಾಮಣಿ: ಶಾಸಕ ಡಾ.ಎಂ.ಸಿ.ಸುಧಾಕರ್(Dr.M.C.Sudhakar) ಅವರಿಗೆ ಸಚಿವ ಸ್ಥಾನ ನೀಡ ಬೇಕೆಂದು ಒತ್ತಾಯಿಸಿ, ಚಿಂತಾಮಣಿ ನಗರದ ಹೊರವಲಯದ ಕನಂಪಲ್ಲಿಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಮುಲ್ ನಿರ್ದೇಶಕ ಊಲವಾಡಿ ಅಶ್ವಥ್‌ ನಾರಾಯಣ ಬಾಬು ಅವರು, ಡಾ.ಎಂ.ಸಿ.ಸುಧಾಕರ್ ಅವರು ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿ ಇಡೀ ರಾಜ್ಯದಲ್ಲೇ ಹಲವು ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಅವರ ಅವಧಿಯಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಮತ್ತು ಯಶಸ್ವಿಯಾಗಿ ಇಲಾಖೆಯನ್ನು ಮುನ್ನಡೆಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಸಿಇಟಿ ಹಾಗೂ ಇತರ ನೇಮಕಾತಿ ಪರೀಕ್ಷೆಗಳನ್ನು ನಡೆಸಿಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: Chinthamani News: ಇರಗಂಪಲ್ಲಿ ಗ್ರಾಮ ಸಭೆ: ಮೂಲ ಸೌಕರ್ಯಗಳ ಕೊರತೆ ಹಿನ್ನೆಲೆ ಸಾರ್ವಜನಿಕರ ಆಕ್ರೋಶ

ಮುಂದುವರಿದು ಮಾತನಾಡಿದ ಅವರು ಪ್ರಸ್ತುತ ರಾಷ್ಟ್ರ ಮಟ್ಟದಲ್ಲಿ ನೀಟ್ ಪರೀಕ್ಷೆಯ ಅಸ್ತವ್ಯಸ್ಥತೆಯಿಂದಾಗಿ ಕೇಂದ್ರ ಸರ್ಕಾರವೇ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಿದೆ. ಆದರೆ ಸುಧಾಕರ್ ಅವರ ಆಡಳಿತ ಅವಧಿಯಲ್ಲಿ ಅಂತಹ ಯಾವುದೇ ಲೋಪದೋಷಗಳು ನಮ್ಮ ರಾಜ್ಯ ದಲ್ಲಿ ಸಂಭವಿಸಿರಲಿಲ್ಲ.

cbpm5p

ಹೀಗಾಗಿ, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು ಮತ್ತು ಅದೇ ಉನ್ನತ ಶಿಕ್ಷಣ ಇಲಾಖೆಯ ಜವಾಬ್ದಾರಿ ಯನ್ನು ವಹಿಸಬೇಕು ಎಂದು ನಮ್ಮ ತಾಲೂಕಿನ ಸಮಸ್ತ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಪರವಾಗಿ ಹೈಕಮಾಂಡ್ ಮತ್ತು ರಾಜ್ಯದ ನಾಯಕರಲ್ಲಿ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುರುಗಮಲ್ಲ ಲಕ್ಷ್ಮೀನಾರಾಯಣ ರೆಡ್ಡಿ, ನಗರಾ ಭಿವೃದ್ಧಿ ಅಧ್ಯಕ್ಷರಾದ ಶ್ರೀನಾಥ್ ಬಾಬು, ಆರ್ ಎಂ ಜೆ ಶ್ರೀನಿವಾಸ್, ಮಾಜಿ ಜಿಲ್ಲಾ ಪಂಚಾ ಯತಿ ಸದಸ್ಯರಾದ ಬುಕ್ಕನಹಳ್ಳಿ ಶಿವಣ್ಣ, ಚಿನ್ನಪ್ಪ, ಕಾಂಗ್ರೆಸ್ ಮುಖಂಡರಾದ ಉಮೇಶ್, ಸಿ ಕೆ ಎಲ್ ಚಾಂದ್ ಪಾಷಾ, ವಿನಾಯಕ್ ನಗರ ಮೋಹನ, ಅತಾವುಲ್ಲ, ರಿಜ್ವಾನ್, ರತ್ನಮ್ಮ, ನಿಜಾಂ, ಸಿ ಕೆ ಶಬ್ಬೀರ್ ಪಾಷಾ, ಕೆ ಪಿ ಸಿ ಸಿ ಸದಸ್ಯರಾದ ಕೃಷ್ಣಮೂರ್ತಿ, ನಡಂಪಲ್ಲಿ ಶ್ರೀನಿವಾಸ್,ಗೋಪಾಲ ರೆಡ್ಡಿ, ಜೈ ಭೀಮ್ ಮುರಳಿ,ಶೇಕ್ ಸಾಧಿಕ್ ರಜ್ವಿ, ಚಿನ್ನಸಂದ್ರ ಬಾಬು, ರಾಣಿಯಮ್ಮ, ಜಗನ್ನಾಥ್, ಚಿನ್ನಸಂದ್ರ ಬಾಬು, ಖಿಜಾರ್ ಪಾಷಾ, ಚಂದ್ರಶೇಖರ್, ಮುನಿನಾರಾಯಣಪ್ಪ ಸೇರಿದಂತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.