ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Miss World pageant: ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಂಚಿದ ಚಿಕ್ಕಬಳ್ಳಾಪುರದ ಡಾ.ವಿ.ಮೋನಿಷಾ

ಚಿಂತಾಮಣಿಯ ರಾಯಲ್ ಶಾಲೆ ಹಾಗೂ ಏನಿಗದಲೆ ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು, ಉಡುಪಿಯ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ: ಶಿಕ್ಷಣ, ಆರೋಗ್ಯ ಸೇವೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಚಿಕ್ಕಬಳ್ಳಾಪುರ ಮೂಲದ ಡಾ.ವಿ.ಮೋನಿಷಾ(Dr V Monisha) ಅವರು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಅತ್ಯುತ್ತಮ ದೈಹಿಕ ಸಾಮರ್ಥ್ಯ ಪ್ರದರ್ಶಿಸಿದ ಸ್ಪರ್ಧಾಳು ಪ್ರಶಸ್ತಿ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

Dr Monisha

ಚಿಂತಾಮಣಿಯ ರಾಯಲ್ ಶಾಲೆ ಹಾಗೂ ಏನಿಗದಲೆ ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು, ಉಡುಪಿಯ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ವಾಲಿಬಾಲ್ ಮತ್ತು ಬ್ಯಾಸ್ಕೆಟ್‌ ಬಾಲ್ ಕ್ರೀಡೆಗಳಲ್ಲಿ ರಾಜ್ಯ ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆ ಮಾಡಿ ಗುರುತಿಸಿ ಕೊಂಡಿದ್ದರು.

ಇದನ್ನೂ ಓದಿ; Chikkaballapur News: ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ

ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಹಲವು ಮಹತ್ವದ ಯೋಜನೆಗಳ ಅನುಷ್ಠಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದೇಶ ಗಳಲ್ಲಿ ತರಬೇತಿ ಪಡೆದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನಾ ಲೇಖನಗಳನ್ನೂ ಪ್ರಕಟಿಸಿದ್ದಾರೆ.

ಇತ್ತೀಚೆಗೆ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಅತ್ಯುತ್ತಮ ದೈಹಿಕ ಕ್ಷಮತೆ, ಆರೋಗ್ಯಕರ ಜೀವನಶೈಲಿ ಮತ್ತು ಆತ್ಮವಿಶ್ವಾಸದ ಪ್ರದರ್ಶನಕ್ಕಾಗಿ ಅತ್ಯುತ್ತಮ ದೈಹಿಕ ಸಾಮರ್ಥ್ಯ ಪ್ರಶಸ್ತಿ ಪಡೆದಿದ್ದಾರೆ.

ಈ ಸಾಧನೆಯನ್ನು ಕುಟುಂಬ, ಗುರುಗಳು ಹಾಗೂ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಸಮರ್ಪಿಸಿ ರುವ ಡಾ. ಮೋನಿಷಾ, ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದ್ದಾರೆ. ಅವರ ಈ ಸಾಧನೆ ಚಿಕ್ಕಬಳ್ಳಾಪುರ ಜಿಲ್ಲೆಯ ಯುವಜನತೆ ಹಾಗೂ ಮಹಿಳೆಯರಿಗೆ ಪ್ರೇರಣೆಯಾಗಿದೆ.