ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 10 ದಿನಗಳಲ್ಲಿ ಪರಿಹಾರಕ್ಕೆ ಸೂಚನೆ
ಜಿಲ್ಲೆಯ 154 ಹಾಸ್ಟೆಲ್ಗಳಲ್ಲಿ ಪರಿಶೀಲನೆ ನಡೆಸಿದಾಗ 48 ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಅಭಾವ ಇರುವುದು ಕಂಡುಬಂದಿದೆ. ಈ ಪೈಕಿ 44 ಹಾಸ್ಟೆಲ್ಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ತಾಲೂಕುವಾರು ಅಂಕಿಅಂಶಗಳ ಪ್ರಕಾರ ಚಿಂತಾಮಣಿ ತಾಲೂಕಿನಲ್ಲಿ 23 ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 11 ಹಾಸ್ಟೆಲ್ಗಳು ನೀರಿನ ಸಮಸ್ಯೆಯಿಂದ ಹೆಚ್ಚು ಬಾಧಿತವಾಗಿವೆ.
-
ಚಿಕ್ಕಬಳ್ಳಾಪುರ: ಜಿಲ್ಲೆಯ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ, ಮುಂದಿನ 10 ದಿನಗಳೊಳಗೆ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಅಭಾವ ನಿರ್ವಹಣೆ ಕುರಿತು ಜಿಲ್ಲಾ ಪಂಚಾ ಯಿತಿ ಸಿಇಒ ನವೀನ್ ಭಟ್ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಸಭೆಯಲ್ಲಿ ಸಮೀಕ್ಷಾ ವರದಿಯನ್ನು ಪರಿಶೀಲಿಸಿ, ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ 154 ಹಾಸ್ಟೆಲ್ಗಳಲ್ಲಿ ಪರಿಶೀಲನೆ ನಡೆಸಿದಾಗ 48 ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಅಭಾವ ಇರುವುದು ಕಂಡುಬಂದಿದೆ. ಈ ಪೈಕಿ 44 ಹಾಸ್ಟೆಲ್ಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ತಾಲೂಕುವಾರು ಅಂಕಿಅಂಶಗಳ ಪ್ರಕಾರ ಚಿಂತಾಮಣಿ ತಾಲೂಕಿನಲ್ಲಿ 23 ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 11 ಹಾಸ್ಟೆಲ್ಗಳು ನೀರಿನ ಸಮಸ್ಯೆಯಿಂದ ಹೆಚ್ಚು ಬಾಧಿತವಾಗಿವೆ.
ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೋರ್ವೆಲ್ ಗಳ ದುರಸ್ತಿ, ಕೊಳವೆಬಾವಿಗಳ ಆಳ ಹೆಚ್ಚಿಸುವುದು, ಮೋಟಾರ್ ಅಳವಡಿಕೆ ಹಾಗೂ ವಿದ್ಯುತ್ ಸಂಬಂಧಿತ ಕಾಮಗಾರಿಗಳನ್ನು ಒಂದು ವಾರದಿಂದ 10 ದಿನಗಳೊಳಗೆ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಮಸ್ಯೆ ಪರಿಹಾರ ಕಾರ್ಯಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಲು ಸೂಚಿಸಿದ ಸಿಇಒ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಉಪನಿರ್ದೇಶಕರು ಪ್ರತಿ ಎರಡು ದಿನಗಳಿಗೊಮ್ಮೆ ಪ್ರಗತಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಡಿಯುಡಿಸಿ ಯೋಜನಾ ನಿರ್ದೇಶಕರು ಸೇರಿದಂತೆ ನಾಲ್ಕೂ ಕಲ್ಯಾಣ ಇಲಾಖೆಗಳ ಉಪನಿರ್ದೇಶಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.