World Social Justice Day: ವಾಹನ ಚಾಲಕರು ವಾಹನ ಚಲಾಯಿಸುವಾಗ ಜವಾಬ್ದಾರಿಯಿಂದ ಚಲಾಯಿಸಬೇಕು
ಲಿಂಗ ಅಸಮಾನತೆ, ನಿರುದ್ಯೋಗ, ಮಾನವ ಹಕ್ಕುಗಳು ಮತ್ತು ಸಾಮಾಜಿಕ ರಕ್ಷಣೆಗಳಂತಹ ಸಮಸ್ಯೆಗಳನ್ನು ನಿಭಾಯಿಸಿ, ಸಾಮಾಜಿಕ ನ್ಯಾಯವನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ಶಕುಂತಲಾ ಆರ್ ( Principal Civil Judge and JMF C Judge Shakuntala R.) ರವರು ಹೇಳಿದರು
-
ಚಿಂತಾಮಣಿ: ಲಿಂಗ ಅಸಮಾನತೆ, ನಿರುದ್ಯೋಗ, ಮಾನವ ಹಕ್ಕುಗಳು ಮತ್ತು ಸಾಮಾಜಿಕ ರಕ್ಷಣೆಗಳಂತಹ ಸಮಸ್ಯೆಗಳನ್ನು ನಿಭಾಯಿಸಿ, ಸಾಮಾಜಿಕ ನ್ಯಾಯವನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನ(World Social Justice Day)ವನ್ನು ಆಚರಿಸ ಲಾಗುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಧೀಶ ರಾದ ಶಕುಂತಲಾ ಆರ್ ( Principal Civil Judge and JMF C Judge Shakuntala R.) ರವರು ಹೇಳಿದರು.
ಚಿಂತಾಮಣಿ ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚಿಂತಾಮಣಿ ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ರಸ್ತೆ ಸುರಕ್ಷತಾ ಕಾರ್ಯಕ್ರಮವನ್ನು ಆಯೋಜಿಸ ಲಾಗಿತ್ತು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದವರು
ಜೀವನದಲ್ಲಿ ಪ್ರತಿಯೊಬ್ಬರಿಗೆ ಶಿಕ್ಷಣ, ರಾಜಕೀಯ,ಆರ್ಥಿಕ,ಸಾಂಸ್ಕೃತಿಕ ಮತ್ತು ಇನ್ನಿತರ ಎಲ್ಲಾ ಕ್ಷೇತ್ರಗಳಲ್ಲಿ ಸಮಾಜಿಕ ನ್ಯಾಯದ ಪ್ರಕಾರ ಅವಕಾಶಗಳು ಸಿಗಬೇಕು. ಆಗ ವಿಶ್ವ ಸಾಮಾಜಿಕ ನ್ಯಾಯ ದಿನಕ್ಕೆ ಅರ್ಥ ಬರುತ್ತದೆ ಎಂದರು.
ಇದನ್ನೂ ಓದಿ: Chinthamani News: ಮುಂದಿನ ಪೀಳಿಗೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಉದ್ಯೋಗ ಸಿಗುವುದು ಅನುಮಾನ : ಇ ಒ ಆನಂದ್
ನಂತರ ಏ ಆರ್ ಟಿ ಓ ಕಚೇರಿಯ ಅಧಿಕಾರಿ ಬೈರಾರೆಡ್ಡಿ ಮಾತನಾಡಿ, ವಾಹನ ಚಾಲಕರು ವಾಹನ ಚಲಾಯಿಸುವಾಗ ಜವಾಬ್ದಾರಿಯಿಂದ ಚಲಾಯಿಸಬೇಕು! ಅಜಾಗರೂಕತೆ ಹಾಗೂ ನಿರ್ಲಕ್ಷದಿಂದ ಚಾಲಕರು ವಾಹನವನ್ನು ಚಲಾಯಿಸುವುದರಿಂದ ಅಪಘಾತಗಳು ಸಂಭವಿ ಸುವ ಸಾಧ್ಯತೆಗಳು ಇರುವುದರಿಂದ ರಸ್ತೆ ಸುರಕ್ಷತಾ ಹಾಗೂ ಕಾನೂನನ್ನು ಪಾಲನೆ ಮಾಡಿ ವಾಹನಗಳನ್ನು ಚಲಾಯಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್ ಆನಂದ್, ಮೋಟಾರ್ ವಾಹನ ನಿರೀಕ್ಷಕ ನರಸೇಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್, ಡಿವೈ ಎಸ್ ಪಿ ಮುರುಳೀಧರ್, ಕೆಎಸ್ಆರ್‌ಟಿಸಿ ವಿಭಾಗದ ವ್ಯವಸ್ಥಾಪಕರಾದ ಸುಜಾತ ಸೇರಿದಂತೆ ಆಟೋ ವಾಹನ ಚಾಲಕರು,ಗೂಡ್ಸ್ ವಾಹನ ಚಾಲಕರು,ಮತ್ತಿತರರು ಇದ್ದರು.