ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮೇಲೆ ನಡೆಸಿರುವ ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

ಅಕ್ರಮ ಆಸ್ತಿಗಳಿಕೆ, ವಿದೇಶಿ ವಿನಿಮಯ ನಿರ್ವಹಣೆ ಕಾಯಿದೆ ಉಲ್ಲಂಘನೆ ಆರೋಪದಡಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು ರಾಜಕೀಯ ಪ್ರೇರಿತ ಅಲ್ಲ, ಅದೊಂದು ಸಹಜ ಕಾನೂನು ಪ್ರಕ್ರಿಯೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು

ಇಡಿ ದಾಳಿ ರಾಜಕೀಯ ಪ್ರೇರಿತ ಅಲ್ಲ

ಸೀಕಲ್ ರಾಮಚಂದ್ರಗೌಡ

Profile Ashok Nayak Jul 15, 2025 10:52 PM

ಚಿಕ್ಕಬಳ್ಳಾಪುರ : ಅಕ್ರಮ ಆಸ್ತಿಗಳಿಕೆ, ವಿದೇಶಿ ವಿನಿಮಯ ನಿರ್ವಹಣೆ ಕಾಯಿದೆ ಉಲ್ಲಂಘನೆ ಆರೋಪದಡಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು ರಾಜಕೀಯ ಪ್ರೇರಿತ ಅಲ್ಲ, ಅದೊಂದು ಸಹಜ ಕಾನೂನು ಪ್ರಕ್ರಿಯೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿರುವ ಅವರು ಇಡಿ ದಾಳಿಯಿಂದ ಆತಂಕ, ಭಯ ಬಿದ್ದಿರುವ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿಯ ಪಿತೂರಿಯಿಂದ ಇಡಿ ದಾಳಿ ನಡೆಸಿದೆ ಎಂದು ಆರೋಪಿ ಸಿರುವುದು ಸತ್ಯಕ್ಕೆ ದೂರ ಎಂದರು.

ಇದನ್ನೂ ಓದಿ: Chikkaballapur News: ಜಿಲ್ಲೆಯಲ್ಲಿ 7ಕೋಟಿಗೂ ಅಧಿಕ ಉಚಿತ ಟಿಕೆಟ್ ವಿತರಣೆ ಆಗಿದೆ : ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್ ರಮೇಶ್

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಎಸ್.ಎನ್.ಸುಬ್ಬಾರೆಡ್ಡಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಸ್ತಿ ಆದಾಯದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ, ಆದಾಯದ ಮೂಲಗಳನ್ನು ಮುಚ್ಚಿಟ್ಟು ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದಾಖಲೆಗಳ ಸಮೇತ ನ್ಯಾಯಾ ಲಯಕ್ಕೆ ದೂರು ಸಲ್ಲಿಸಲಾಗಿದೆ.

ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಇದೀಗ ಇಡಿ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಲಿದ್ದು ಶಾಸಕ ಸುಬ್ಬಾರೆಡ್ಡಿ ಅವರು ಸೂಕ್ತ ದಾಖಲೆ, ಉತ್ತರ ನೀಡಿದರೆ ಅವರು ಇಡಿ ದಾಳಿಯ ಕಾನೂನಿನ ಕುಣಿಕೆಯಿಂದ ಪಾರಾಗ ಲಿದ್ದಾರೆ.

ಒಂದೊಮ್ಮೆ ಸೂಕ್ತ ದಾಖಲೆ ನೀಡದಿದ್ದಲ್ಲಿ ಮತ್ತು ಕಾನೂನು ಉಲ್ಲಂಘಿಸಿ ಅಧಿಕ ಆಸ್ತಿ ಸಂಪಾದಿಸಿ ಮಾಹಿತಿ ಮುಚ್ಚಿಟ್ಟಿದರೆ ಅವರು ಕಾನೂನಿನ ಕ್ರಮ ಎದುರಿಸಬೇಕಾಗುತ್ತದೆ. ಇಡಿ ಕೇಳುವ ಎಲ್ಲ ಮಾಹಿತಿಯನ್ನು ಒದಗಿಸಿ ಅದು ಸರಿಯಾಗಿದ್ದಲ್ಲಿ ಏನೂ ಸಮಸ್ಯೆಯಾಗದು ಎಂದರು.

ಸಂವಿಧಾನ ಬದ್ಧವಾಗಿ ಶಾಸಕರಾಗಿ ಆಯ್ಕೆಯಾದವರು ಮೊದಲು ಕಾನೂನನ್ನು ಗೌರವಿಸು ವಂತಾಗಬೇಕು, ಆ ಮೂಲಕ ಕ್ಷೇತ್ರದ ಮತದಾರರಿಗೆ ಮಾದರಿಯಾಗಬೇಕು, ಅದು ಬಿಟ್ಟು ಇನ್ನೊಬ್ಬರ ಮೇಲೆ ವಿನಾಕಾರಣ ಸುಳ್ಳು ಆರೋಪ ಮಾಡುವುದು ಶಾಸಕರಿಗೆ ಸೂಕ್ತವಲ್ಲ ಎಂದರು.

ನೀವು ಈಗಾಗಲೇ ಸಚಿವ ಸ್ಥಾನಕ್ಕೆ ಕಣ್ಣಿಟ್ಟು ಟವೆಲ್ ಹಾಕಿದ್ದೀರಿ. ನಿಮ್ಮ ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಆಕಾಂಕ್ಷಿಗಳ ದಂಡು  ಇದ್ದು ನಿಮಗೆ ಸಚಿವ ಸ್ಥಾನವನ್ನು ತಪ್ಪಿಸಲು ನಿಮ್ಮದೇ ಕಾಂಗ್ರೆಸ್ ಪಕ್ಷದ ಸಚಿವ ಸ್ಥಾನದ ಆಕಾಂಕ್ಷಿಗಳು ಏಕೆ ಪಿತೂರಿ ನಡೆಸಿರಬಾರದು ಎಂದು ಪ್ರಶ್ನಿಸಿದರು.

ಮೊದಲು ನಿಮ್ಮ ಪಕ್ಷದಲ್ಲಿನ ನಿಮ್ಮ ಶತ್ರುಗಳನ್ನು ಗುರುತಿಸಿ ಅವರು ಮಾಡುವ ಪಿತೂರಿಗಳಿಂದ ತಪ್ಪಿಸಿಕೊಳ್ಳಿ ಆನಂತರ ಬೇರೆ ಪಕ್ಷದವರ ಬಗ್ಗೆ ಮಾತನಾಡಿ ಎಂದು  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.