ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಶಿಕ್ಷಣ ಉದ್ಯೋಗಕ್ಕಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಅಗತ್ಯ: ಚುಂಚಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ನಾಲ್ಕು ವರ್ಷಗಳ ಪದವಿ ಶಿಕ್ಷಣವು ಜೀವನದ ಅಂತ್ಯವಲ್ಲ, ಹೊಸ ಕಲಿಕೆಯ ಆರಂಭವಾಗಿದೆ. ನಿರಂತರ ವಾಗಿ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ಯಾಗಬೇಕು. ಪೋಷಕರು ಮತ್ತು ಶಿಕ್ಷಕರ ತ್ಯಾಗವನ್ನು ಸ್ಮರಿಸಿಕೊಂಡು ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು

ಚಿಕ್ಕಬಳ್ಳಾಪುರ: ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿರದೆ, ಉತ್ತಮ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜ ಸೇವೆಯ ಮನೋಭಾವ ಬೆಳೆಸುವ ಮಾಧ್ಯಮವಾಗಬೇಕು ಎಂದು ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.

ನಗರದ ಬಿ.ಜಿ.ಎಸ್ ಆಡಿಟೋರಿಯಂನಲ್ಲಿ ನಡೆದ ಎಸ್‌ಜೆಸಿ ತಾಂತ್ರಿಕ ಮಹಾವಿದ್ಯಾಲಯದ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿ ಮಾತನಾಡಿ ದರು. 

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದರೂ ಮಾನವೀಯ ಮೌಲ್ಯಗಳು, ಪೋಷಕರಿಗೆ ಗೌರವ, ಸಮಾಜದ ಬಗ್ಗೆ ಕಾಳಜಿ ಹಾಗೂ ಸೇವಾ ಮನೋಭಾವ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: Chikkaballapur News: ಅಂತ:ಕರಣದ ನಾಯಕತ್ವಕ್ಕೆ ಬಹುದೊಡ್ಡ ಮಾದರಿ ನಾಡು ಪ್ರಭು ಕೆಂಪೇಗೌಡ : ಜಿಲ್ಲಾಧಿಕಾರಿ ಜಿ.ಪ್ರಭು

ನಾಲ್ಕು ವರ್ಷಗಳ ಪದವಿ ಶಿಕ್ಷಣವು ಜೀವನದ ಅಂತ್ಯವಲ್ಲ, ಹೊಸ ಕಲಿಕೆಯ ಆರಂಭವಾಗಿದೆ. ನಿರಂತರವಾಗಿ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ಯಾಗಬೇಕು. ಪೋಷಕರು ಮತ್ತು ಶಿಕ್ಷಕರ ತ್ಯಾಗವನ್ನು ಸ್ಮರಿಸಿಕೊಂಡು ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ಪ್ರಭು ಜಿ. ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. 

ಉದ್ಯಮಶೀಲತೆ, ಸಂಶೋಧನೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿ ಯಾಗುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Chi 271

ಅಡ್ವಾನ್ಸ್ ಕಾರ್ಪೋರೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಾಯಿರಾಂ ಸಂತಾರಾಂ ಮಾತನಾಡಿ, ಕೃತಕ ಬುದ್ಧಿಮತ್ತೆ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್ ಸೇರಿದಂತೆ ಹೊಸ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿದ್ದು, ವಿದ್ಯಾರ್ಥಿಗಳು ನಿರಂತರ ಕಲಿಕೆ ಮತ್ತು ಕೌಶಲ್ಯ ವೃದ್ಧಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಡಾ.ಜಿ.ಟಿ.ರಾಜು ವೃತ್ತಿಜೀವನದಲ್ಲಿ ಯಶಸ್ಸಿನ ಜೊತೆಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ವಿದ್ಯಾರ್ಥಿಗಳಿಗೆ ಸಮಾನತೆ, ಕರ್ತವ್ಯನಿಷ್ಠೆ ಮತ್ತು ಸೇವಾ ಮನೋಭಾವದ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಬಿ.ಇ., ಎಂ.ಟೆಕ್., ಎಂ.ಬಿ.ಎ., ಬಿ.ಎಸ್‌ಸಿ ಆನರ್ಸ್ ಹಾಗೂ ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು, ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.