ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಅಂಬೇಡ್ಕರ್ ಪ್ರತಿಮೆಗೆ ಪೂಜೆಗಿಂತ ಆಶಯಗಳ ಅಳವಡಿಕೆಯೇ ನಿಜವಾದ ಗೌರವ: ಇಒ ಆನಂದ್

ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅವರ ಚಿಂತನೆ, ಹೋರಾಟದ ಉದ್ದೇಶ ಹಾಗೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿ ಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ

ಚಿಂತಾಮಣಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್(Dr B R Ambedkar) ಅವರ ಪ್ರತಿಮೆಗೆ ಪೂಜೆ ಸಲ್ಲಿಸುವುದಕ್ಕಿಂತ ಅವರು ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಮತ್ತು ಸಹೋದ ರತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಆನಂದ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅವರ ಚಿಂತನೆ, ಹೋರಾಟದ ಉದ್ದೇಶ ಹಾಗೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿ ಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ದೀರ್ಘ ಚರ್ಚೆ, ವಿಚಾರ–ವಿಮರ್ಶೆ ಮತ್ತು ತಿದ್ದುಪಡಿಗಳ ಬಳಿಕ ಸಂವಿಧಾನ ಅಂಗೀಕಾರ ಗೊಂಡಿದ್ದು, ಅದು ಯಾರೊಬ್ಬರ ಏಕಪಕ್ಷೀಯ ಪ್ರಯತ್ನದ ಫಲವಲ್ಲ. ಭಾರತದ ವೈವಿಧ್ಯತೆ ಯನ್ನು ಒಗ್ಗೂಡಿಸಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನ ರೂಪುಗೊಂಡಿದೆ ಎಂದು ವಿವರಿಸಿದರು.

ಇದನ್ನೂ ಓದಿ: Chikkaballapur News: ಅರಿತ್‌ಮೆಟಿಕ್ ಜೀನಿಯಸ್ ಸ್ಪರ್ಧೆಯಲ್ಲಿ 1800 ವಿದ್ಯಾರ್ಥಿಗಳ ಭಾಗಿ

ಸಂವಿಧಾನದ ಪೀಠಿಕೆಯಲ್ಲಿರುವ ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವ, ಪ್ರಜಾ ಸತ್ತಾತ್ಮಕ ಗಣರಾಜ್ಯ ಹಾಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಆಶಯಗಳನ್ನು ವಿದ್ಯಾರ್ಥಿಗಳು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ, ಧರ್ಮ ಸೇರಿದಂತೆ ಯಾವುದೇ ವಿಭಜನೆಗಳು ಸಮಾಜದ ಒಗ್ಗಟ್ಟಿಗೆ ಅಡ್ಡಿಯಾಗದಂತೆ ಸಮಾನತೆಯ ಮೌಲ್ಯಗಳನ್ನು ಬಲಪಡಿಸ ಬೇಕು ಎಂದು ಕರೆ ನೀಡಿದರು.

ದೇಶದ ಎಲ್ಲ ನಾಗರಿಕರಿಗೂ ಮತದಾನದ ಹಕ್ಕು ದೊರೆಯಬೇಕೆಂಬ ಆಶಯಕ್ಕೆ ಅಂಬೇಡ್ಕರ್ ಬಲವಾದ ಧ್ವನಿಯಾಗಿದ್ದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಸಾಧನವಾಗಿದ್ದು, ಅದನ್ನು ಜವಾಬ್ದಾರಿಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಶಿಕ್ಷಣ, ಸಂವಿಧಾನ ಜ್ಞಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡ ಯುವಜನತೆ ದೇಶದ ಭವಿಷ್ಯ ವನ್ನು ಸದೃಢಗೊಳಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾತನಾಡಿ, ನವೆಂಬರ್ 26ರ ಸಂವಿಧಾನ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಆಯೋಜಿಸಲಾಗುವುದು. ತಾಲ್ಲೂಕಿ ನ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಂದ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಲಾಗುವುದು. ಅಲ್ಲಿಂದ 15 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವವರಿಗೆ ಬೆಂಗಳೂ ರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಯುವ ಸಂಸತ್ತಿನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ ಎಂದರು.

ತಹಶೀಲ್ದಾರ್ ಸುದರ್ಶನ್ ಯಾದವ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಡಾ.ಮುನಿರೆಡ್ಡಿ ಪ್ರಜಾಪ್ರಭುತ್ವ ದಿನದ ಮಹತ್ವ ವಿವರಿಸಿದರು. ಬಿಇಒ ಎ.ಸಿ.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ರೆಡ್ಡಿ, ವಲಯ ಅರಣ್ಯಾಧಿಕಾರಿ ಪೂಜಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.