Chikkaballapur News: ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳಿಗೆ ಒತ್ತು ನೀಡಿ, ದಲ್ಲಾಳಿಗಳ ಕಮಿಷನ್ ತಪ್ಪಿಸಲು ಕ್ರಮ : ತಹಸೀಲ್ದಾರ್ ಮನಿಷಾ ಮಹೇಶ್ ಎನ್ ಪತ್ರಿ
ಹಲವು ತಿಂಗಳುಗಳಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳ ಅಳವಡಿಕೆ, ದಳ್ಳಾಳಿಗಳ ಕಾಟ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ರೈತರು ನೋವು ತೋಡಿಕೊಳ್ಳುತ್ತಿದ್ದರು. ಇದರ ಹಿನ್ನಲೆಯಲ್ಲಿ ಸಭೆ ನಡೆಸಿ,ಸಮಸ್ಯೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಎಪಿಎಂಸಿ ಕಾರ್ಯದರ್ಶಿ ಯವರಿಗೆ ಸೂಚಿಸಲಾಗಿದೆ

ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲಭೂತ ಸೌಲಭ್ಯಗಳಾದ ಶೌಚಾಲಯ,ಕುಡಿಯುವ ನೀರು,ರೈತ ಭವನ ಮತ್ತು ದಲ್ಲಾಳಿಗಳ ಕಾಟ ಹೆಚ್ಚಾಗಿದ್ದು, ರೈತರು ನಿತ್ಯವೂ ಹಲವಾರು ಸವಾಲುಗಳನ್ನು ಎದುರಿಸುವಂತಾಗುತ್ತಿದೆ. ಇವೆಲ್ಲದರ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ತಹಶೀಲ್ದಾರ್ ಮನಿಷಾ ಮಹೇಶ್ ಎನ್ ಪತ್ರಿ ತಿಳಿಸಿದರು.

ಬಾಗೇಪಲ್ಲಿ: ಎಪಿಎಂಸಿ ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು,ರೈತ ಭವನ ಮತ್ತು ದಲ್ಲಾಳಿಗಳ ಕಾಟ ಹೆಚ್ಚಾಗಿದ್ದು, ರೈತರು ನಿತ್ಯವೂ ಹಲವಾರು ಸವಾಲುಗಳನ್ನು ಎದುರಿಸುವಂತಾಗುತ್ತಿದೆ. ಇವೆಲ್ಲದರ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ತಹಶೀಲ್ದಾರ್ ಮನಿಷಾ ಮಹೇಶ್ ಎನ್ ಪತ್ರಿಯವರು ತಿಳಿಸಿದರು.
ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮವಾರ ಅಧಿಕಾರಿಗಳು, ದಲ್ಲಾಳಿಗಳು ಮತ್ತು ರೈತರೊಂದಿಗೆ ಸಭೆ ನಡೆಸಿ, ನಂತರ ಮಾತನಾಡಿದ ಅವರು, ಹಲವು ತಿಂಗಳುಗಳಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳ ಅಳವಡಿಕೆ, ದಳ್ಳಾಳಿಗಳ ಕಾಟ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ರೈತರು ನೋವು ತೋಡಿಕೊಳ್ಳುತ್ತಿದ್ದರು. ಇದರ ಹಿನ್ನಲೆಯಲ್ಲಿ ಸಭೆ ನಡೆಸಿ,ಸಮಸ್ಯೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಎಪಿಎಂಸಿ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ: Chikkaballapur News: ಸಮತೂಕ ವ್ಯಕ್ತಿತ್ವಕ್ಕೆ ಶಾರೀರಿಕ ಕ್ರೀಡೆಗಳು ಸಹಕಾರಿ : ಡಾ.ಕೋಡಿರಂಗಪ್ಪ
ಬೆಳಗ್ಗೆ ಟೊಮ್ಯಾಟೊ, ಮಧ್ಯ್ಹಾನ ತರಕಾರಿ
ಎಪಿಎಂಸಿ ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಟೊಮ್ಯಾಟೊ ಮಾರಾಟಕ್ಕೆ ಸಮಯ ನಿಗಧಿ ಮಾಡಲಾಗಿದೆ. ಹಾಗೇಯೆ ಮಧ್ಯ್ಹಾನ 2 ಗಂಟೆಯಿಂದ ರಾತ್ರಿಯವರೆಗೆ ತರಕಾರಿ ಮಾರಾಟಕ್ಕೆ ನಿಗದಿಪಡಿಸಲಾಗಿದೆ.
ಮಾರುಕಟ್ಟೆಗೆ ವಾಹನಗಳು ಬರುವುದಕ್ಕೆ ಮತ್ತು ಹೊರ ಹೋಗಲು ಎರಡು ಗೇಟ್ ಗಳಿವೆ. ಒಳ ಬರುವ ಗೇಟ್ ನಲ್ಲಿ ಸಿಬ್ಬಂದಿಯೊಬ್ಬರನ್ನು ನೇಮಿಸಿ ವಾಹನಗಳನ್ನ ಕ್ರಮಬದ್ಧವಾಗಿ ಒಳ ಹೋಗಲು ಅವಕಾಶ ಮಾಡಿಕೊಡಲಾಗುತ್ತದೆ. ಹಾಗೇಯೆ ಸುಲಭವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಹಾಗೇಯೆ ರೈತರಿಗೆ,ವ್ಯಾಪಾರಸ್ಥರಿಗೆ ಅನುಕೂಲಕ್ಕಾಗಿ ಕ್ಯಾಂಟೀನ್ ವ್ಯವಸ್ಥೆಯ ಬಗ್ಗೆ ಮನವಿ ಬಂದಿದ್ದು, ಈ ಬಗ್ಗೆ ಪತ್ರ ಬರೆಯಲಾಗುತ್ತದೆ ಎಂದು ತಹಶೀಲ್ದಾರರು ತಿಳಿಸಿದರು.
ಚಿಲ್ಲರೆ ವ್ಯಾಪಾರಿಗಳ ಸ್ಥಳಾಂತರ
ಎಪಿಎAಸಿ ಮಾರುಕಟ್ಟೆ ಮುಂಭಾಗದಲ್ಲಿ ಹಲವಾರು ಚಿಲ್ಲರೆ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟನ್ನು ನಡೆಸುತ್ತಿದ್ದಾರೆ. ಕರೋನಾ ಸಂಕಷ್ಟದ ಸಮಯದಿಂದಲೂ ಅವರು ಈ ವಹಿವಾಟನ್ನು ನಡೆಸುತ್ತಿದ್ದಾರೆ. ಅವರ ಜೊತೆಗೆ ಶೀಘ್ರದಲ್ಲೇ ಸಭೆ ನಡೆಸಿ, ಅವರನ್ನು ಸ್ಥಳಾಂತರ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಈಶ್ವರರೆಡ್ಡಿ ಮಾತನಾಡಿ, ಕೋಟ್ಯಂತರ ರೂಪಾಯಿ ವಹಿವಾಟು ಆಗುವ ಈ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿಯಲ್ಲಿ ಇದೀಗ ಆಡಳಿತ ಮಂಡಳಿ, ಅಧಿಕಾರಿಗಳು ಇಲ್ಲ. ರೈತರಿಗೆ ಕನಿಷ್ಠ ಸೌಲಭ್ಯಗಳು ಸಿಗುತ್ತಿಲ್ಲ.
ಅಧಿಕಾರಿ, ಆಡಳಿತ ವರ್ಗ ಇಲ್ಲದೇ, ಎಪಿಎಂಸಿಯಲ್ಲಿ ದಲ್ಲಾಳಿಗಳದ್ದೇ ಕಾರುಬಾರು. ೫ ಕೆ.ಜಿ ಹೆಚ್ಚು ತರಕಾರಿಯನ್ನು ರೈತರಿಂದ ನೇರವಾಗಿ ವ್ಯಾಪಾರಸ್ಥರು ಖರೀದಿ ಮಾಡುವಂತೆ ಇಲ್ಲ. ದಲ್ಲಾಳಿಗಳ ಮೂಲಕ ತರಕಾರಿ ವ್ಯಾಪಾರ ನಡೆಯುತ್ತಿದೆ.
ಇದೀಗ ತಹಸೀಲ್ದಾರ್ ಮನೀಷಾ ಎನ್.ಪತ್ರಿ ಆಡಳಿತ ಅಧಿಕಾರಿ ಆಗಿದ್ದಾರೆ. ಅಧಿಕಾರಿ ವರ್ಗ ಇಲ್ಲದೇ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಕಾಟ ಹೆಚ್ಚಾಗಿದೆ. ಶೌಚಾಲಯ, ಕ್ಯಾಂಟಿನ್ ಇಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಅನೇಕ ವರ್ಷಗಳಿಂದ ರಿಪೇರಿ ಆಗಿಲ್ಲ. ವ್ಯಾಪಾರಸ್ಥರು, ದಲ್ಲಾಳಿಗಳು, ರೈತರು ಎಲ್ಲೆಂದರಲ್ಲಿ ತರಕಾರಿ ಎಸೆದಿದ್ದಾರೆ. ರಾಶಿಗಟ್ಟಲೆ ಕೊಳೆತ ತರಕಾರಿ ಇವೆ ಎಂದು ರೈತರು ದೂರಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಮಾರುಕಟ್ಟೆ ಕಾರ್ಯದರ್ಶಿ ಅಬೀದ ಅಂಜುಮ್,ಕೃಷಿ ಉತ್ಪನ್ನ ಮಾರುಕಟ್ಟೆ ಮಂಜುನಾಥ,ರಮಣ ರೈತರು,ವರ್ತಕರು, ಹಾಗೂ ಸಾರ್ವಜನಿಕರು.