ಗುಡಿಬಂಡೆ: ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಆ ಪ್ರತಿಭೆ ಯನ್ನು ಹೊರತರಲು ಪೋಷಕರು ಹಾಗೂ ಶಿಕ್ಷಕರ ಪ್ರೋತ್ಸಾಹ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ತಿಳಿಸಿದರು.
ಪಟ್ಟಣದ ಪಿಎಂ ಶ್ರೀ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆ ಯನ್ನು ಹೊರ ತೆಗೆಯುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಪೋಷಕರು ಹಾಗೂ ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಅವರ ಅಭಿರುಚಿಯ ತಕ್ಕಂತೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕೆಂದು. ಮಕ್ಕಳೂ ಸಹ ಸೋಲು ಗೆಲುವು ಎಂಬ ಮನೋಭಾವ ಬಿಟ್ಟು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು, ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ತರಬೇಕು ಎಂದರು.
ಇದನ್ನೂ ಓದಿ: Sri Gandhada Gudi Serial: ʻಬಿಗ್ ಬಾಸ್ʼನಿಂದ ಎಲಿಮಿನೇಟ್ ಆಗಿದ್ದ ಮಂಜು ಭಾಷಿಣಿ ಈಗ ಕಿರುತೆರೆಗೆ ಎಂಟ್ರಿ
ಬಳಿಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಬಾಹ್ಯ ಪ್ರಪಂಚಕ್ಕೆ ಪರಿಚಯಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುತ್ತದೆ. ಈ ಸ್ಪರ್ಧೆಯಲ್ಲಿ ನಿರ್ಣಾ ಯಕರಾಗಿ ಭಾಗವಹಿಸಿದವರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮಕ್ಕಳ ಪ್ರತಿಭೆ ಗುರುತಿಸಿ ನಿಷ್ಪಕ್ಷ ಪಾತವಾಗಿ ನಿರ್ಣಯ ನೀಡಬೇಕು.
ಜೊತೆಗೆ ಹಲವು ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸುವ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುತ್ತಿರುತ್ತಾರೆ. ಮಕ್ಕಳು ಸಹ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು. ಸೋಲು, ಗೆಲುವಿ ಗಿಂತ ಭಾಗವಹಿಸುವಿಕೆ ಮುಖ್ಯ. ಮಕ್ಕಳು ಹೆಚ್ಚು ಹೆಚ್ಚಾಗಿ ಇಂತಹ ಕಾರ್ಯ ಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾತ್ಮಕ ಮನೋ ಭಾವ ಬೆಳೆಸಿಕೊಳ್ಳಬೇಕು ಎಂದರು.
ಈ ವೇಳೆ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕೋಲಾಟ, ಏಕಪಾತ್ರ ಅಭಿನಯ, ಪ್ರಬಂಧ ಸ್ಪರ್ಧೆ, ಜಾನಪದ ಗೀತೆಗಳು, ಕ್ಲೇ ಮಾಡಲಿಂಗ್, ವಿವಿಧ ವೇಷ ಸ್ಪರ್ಧೆ, ಆಶುಭಾಷಣ, ರಂಗೋಲಿ, ಪ್ರಬಂಧ, ನೃತ್ಯ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಈ ಸಮಯದಲ್ಲಿ ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ಶ್ರೀರಾಮರೆಡ್ಡಿ, ಪಿಎಂಶ್ರೀ ಶಾಲೆಯ ಮುಖ್ಯ ಶಿಕ್ಷಕ ಎಂ.ಶಂಕ ಬಿ.ಆರ್.ಪಿ ಗಳು, ಸಿ.ಆರ್.ಪಿಗಳು ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.