ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಸರ್ಕಾರಿ ಶಾಲೆಗೇ ಮಕ್ಕಳನ್ನು ದಾಖಲಿಸಿ, ಉತ್ತಮ ಭವಿಷ್ಯ ಕಲ್ಪಿಸಿ: ಉಪನಿರ್ದೇಶಕ ರಮೇಶ್.ವಿ ಮನವಿ

ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳಿಗೆ ಶಾಲಾರಂಭದಲ್ಲಿಯೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲು ಸೂಚನೆ ನೀಡಲಾಗಿದೆ.ಇದರ ಜತೆಗೆ ಜಿಲ್ಲೆಯ ಸರ್ಕಾರಿ ಶಾಲೆಗಳ ಎಲ್ಲಾ ಅರ್ಹ ವಿದ್ಯಾರ್ಥಿ ಗಳಿಗೆ ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯ ಸರಕಾರಿ ಶಾಲೆಯ ಮಕ್ಕಳು ಬಳಸಿಕೊಳ್ಳಿ ಎಂದರು.

ಡಿಡಿಪಿಐ ಅವರ ಪೋಟೋ...

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸಂಖ್ಯೆ 1311 ಇದ್ದು 4300 ಶಿಕ್ಷಕರಿದ್ದು ಎಲ್ಲರೂ ಕೂಡ ಸರಕಾರ ನಡೆಸುವ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರುವ ಅರ್ಹರಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಸೇರಿ ಅನೇಕ ಸೌಲಭ್ಯಗಳನ್ನು ಮಕ್ಕಳಿಗೆ ದೊರೆಯುವುದರಿಂದ ಪೋಷಕರು ತಪ್ಪದೆ ನಿಮ್ಮ ಮಕ್ಕಳನ್ನು ದಾಖಲಿಸಿ ಅವರ ಭವಿಷ್ಯ ಉತ್ತಮಪಡಿಸಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿ.ರಮೇಶ್ ಮನವಿ ಮಾಡಿದರು.

ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಸೌಲಭ್ಯ ಬಳಸಿಕೊಳ್ಳಿ!!

ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳಿಗೆ ಶಾಲಾರಂಭದಲ್ಲಿಯೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲು ಸೂಚನೆ ನೀಡಲಾಗಿದೆ. ಇದರ ಜತೆಗೆ ಜಿಲ್ಲೆಯ ಸರ್ಕಾರಿ ಶಾಲೆಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಗಳಿಗೆ ಜಮಾ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯ ಸರಕಾರಿ ಶಾಲೆಯ ಮಕ್ಕಳು ಬಳಸಿಕೊಳ್ಳಿ ಎಂದರು.

ಇದನ್ನೂ ಓದಿ: Chikkaballapur News: ಕೋರ್ಟಿನ ಮೂಲಕ ನ್ಯಾಯ ಪಡೆದ ಶಿಕ್ಷಕರಿಗೆ ನೇಮಕಾತಿ ಪತ್ರ ವಿತರಿಸಿದ ಡಿಡಿಪಿಐ

ಪ್ರತಿಭಾ ಪ್ರದರ್ಶನ

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅಡಿ ಎಲ್ಲಾ ಸರ್ಕಾರಿ ಪ್ರಾಥಮಿಕ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡಲಾಗುತ್ತಿದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬ ಮತ್ತು ಕಲೋತ್ಸವ ಕಾರ್ಯಕ್ರಗಳು, ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ನಡೆಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ ಎಂದರು.

ನಮ್ಮ ಶಾಲೆಯೆಂಬ ಹೆಮ್ಮೆ
ದಾಖಲಾತಿ ಉತ್ತಮಗೊಳಿಸುವ ಉದ್ದೇಶದಿಂದ ಆಸಕ್ತ ಹಳೆಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಎನ್.ಜಿ.ಓ ಗಳು ಶಾಲೆಗಳನ್ನು ದತ್ತು ಪಡೆದು ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ರಚಿಸಿ ಸಕ್ರಿಯಗೊಳಿಸಲಾಗಿದೆ. ಜೂನ್ ೦೧ ರಂದು ಶಾಲೆಗಳಲ್ಲಿ ಸ್ಥಳೀಯ ಶಾಸಕರು/ಜನಪ್ರತಿನಿಧಿಗಳು, ಹಳೇ ವಿದ್ಯಾರ್ಥಿಗಳ ಸಂಘ, ಎನ್.ಜಿ.ಓ., ಪೋಷಕರು, ಎಸ್.ಡಿ.ಎಂ.ಸಿ., ಶಿಕ್ಷಣಾಸಕ್ತರನ್ನೊ ಗೊಂಡಂತೆ ಎಲ್ಲರೊಂದಿಗೆ ಪೋಷಕ ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲಾಗುತ್ತಿದೆ. ನಮ್ಮ ಶಾಲೆ ಎಂಬ ಹೆಮ್ಮೆಯಿದ್ದರೆ ಬಲವರ್ಧನೆ ಸಾಧ್ಯ ಎಂದು ತಿಳಿಸಿದರು.

ದಾಖಲಾತಿ ಹೆಚ್ಚಳದ ಭರವಸೆ
2026-27ನೇ ಸಾಲಿನ ದಾಖಲಾತಿ ಆಂದೋಲನ ಹೆಚ್ಚು ಕ್ರಿಯಾ ಶೀಲವಾಗಿ ನಡೆಯುತ್ತಿದ್ದು, ದಾಖಲಾತಿ ಸಂಖ್ಯೆಯು ದ್ವಿಗುಣ ಆಗುವ ಸಾಧ್ಯತೆಯಿದೆ. ಕೆ.ಪಿ.ಎಸ್., ಪಿ.ಎಂ.ಶ್ರೀ., ಮತ್ತು ಪಿ.ಎ.ಬಿ. ಅನುಮೋದಿತ ದ್ವಿಭಾಷಾ ಮಾಧ್ಯಮ ಶಾಲೆಗಳಲ್ಲಿ ನಲಿ-ಕಲಿ ತರಗತಿ ಇರುವುದಿಲ್ಲ. ಈ ಶಾಲೆಗಳ ಮುಖ್ಯಶಿಕ್ಷಕರಿಗೆ ಸಭೆಯನ್ನು 15 ದಿನಗಳಿಗೊಮ್ಮೆ ಆಯೋಜಿಸಲಾಗುತ್ತಿದೆ. 2.30 - ಇ-ವಿದ್ಯಾ ಚಾನಲ್ ಪ್ರಾರಂಭಿಸಿ ತರಬೇತಿಗಳನ್ನು ನೀಡಲು ಯೋಜಿಸಲಾಗಿದೆ. ದ್ವಿಭಾಷಾ ಶಾಲೆಗಳ ಕುರಿತು ಪರಿವರ್ತನಾ ಯೋಜನೆ, ಶೈಕ್ಷಣಿಕ ಕ್ಯಾಲೆಂಡರ್‌ನ್ನು ಡಿ.ಎಸ್.ಇ.ಆರ್.ಟಿ. ವತಿಯಿಂದ ನೀಡಲಾ ಗುತ್ತಿದೆ ಎಂದು ಹೇಳಿದರು.

ಕಲೋತ್ಸವದ ವೇದಿಕೆ??
ಜಿಲ್ಲೆಯ ಸರ್ಕಾರಿ ಶಾಲೆಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅಡಿ ಎಲ್ಲಾ ಸರ್ಕಾರಿ ಪ್ರಾಥಮಿಕ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡಲಾಗು ತ್ತಿದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳ ಅನಾವರಣಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬ  ಮತ್ತು ಕಲೋತ್ಸವ ಕಾರ್ಯಕ್ರಗಳು, ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ನಡೆಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ. ಆಸಕ್ತ ಹಳೆಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಎನ್.ಜಿ.ಓ ಗಳು ಶಾಲೆಗಳನ್ನು ದತ್ತು ಪಡೆದು ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು  ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ರಚಿಸಿ ಸಕ್ರಿಯಗೊಳಿಸಲಾಗಿದೆ ಎಂದರು.

ಖಾಸಗಿ ಉತ್ತಮ ಎಂಬ ಭ್ರಮೆ ಬೇಡ !!
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸೃಜನಾತ್ಮಕವಾದ ಗುಣ ಮಟ್ಟ ಶಿಕ್ಷಣ ನೀಡುವ ಜೊತೆಗೆ ಉಚಿತವಾಗಿ ವಿಶೇಷ  ಸೌಲಭ್ಯಗಳನ್ನು  ನೀಡುತ್ತಿವೆ. ಈ ಅಂಶ ಗಳನ್ನು ಮನವರಿಕೆ ಮಾಡಿಕೊಡಲು ಸಾರ್ವಜನಿಕವಾಗಿ ದಾಖಲಾತಿ ಆಂದೋಲನವನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ.

ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವುದರಿಂದ ಸಿಗುವ ವಿಶೇಷ ಪ್ರಯೋಜನಗಳನ್ನು ಪಡೆಯುವ ಸಲುವಾಗಿ ಪೋಷಕರು ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿ ಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ  ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸುವಂತೆ ಅವರು ಪೋಷಕರಲ್ಲಿ ಮನವಿ ಮಾಡಿದರು.